ಶಿವಮೊಗ್ಗ ಲೈವ್.ಕಾಂ | SHIMOGA NEWS | 30 ಸೆಪ್ಟೆಂಬರ್ 2021
ಸ್ವಚ್ಛ ಶಿವಮೊಗ್ಗ ನಿರ್ಮಾಣದ ಗುರಿಯೊಂದಿಗೆ ನಗರದ ಪ್ರತಿ ಮನೆಗೂ ಕಸದ ಬುಟ್ಟಿ ವಿತರಣೆ ಮಾಡಲಾಗುತ್ತಿದೆ. ಕಸದ ಬುಟ್ಟಿ ವಿತರಣಾ ಕಾರ್ಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಚಾಲನೆ ನೀಡಿದರು.
ಮಹಾನಗರ ಪಾಲಿಕೆ ಆವರಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಂಕೇತಿಕವಾಗಿ ಕಸದ ಬುಟ್ಟಿಗಳನ್ನು ವಿತರಿಸಲಾಯಿತು.
84 ಸಾವಿರ ಮನೆಗಳಿಗೆ ಕಸದ ಬುಟ್ಟಿ
ಶಿವಮೊಗ್ಗದ ಪ್ರತಿ ಮನೆಗೂ ಕಸದ ಬುಟ್ಟಿ ವಿತರಣೆ ಮಾಡಲಾಗುತ್ತಿದೆ. 84,300 ಮನೆಗಳಿಗೆ ಕಸದ ಬುಟ್ಟಿ ವಿತರಿಸಲಾಗುತ್ತಿದೆ. ಹಸಿ ಮತ್ತು ಒಣ ಕಸವನ್ನು ಪ್ರತ್ಯೇಕ ಬುಟ್ಟಿಯಲ್ಲಿ ಹಾಕಬೇಕಿದೆ. ಈ ಹಿನ್ನೆಲೆಯಲ್ಲಿ ಪ್ರತಿ ಮನೆಗೆ ಎರಡು ಪ್ರತ್ಯೇಕ ಬಣ್ಣದ ಕಸದ ಬುಟ್ಟಿ ವಿತರಿಸಲಾಗುತ್ತಿದೆ. ನೀಲಿ ಮತ್ತು ಹಸಿರು ಬಣ್ಣದ 1,65,600 ಕಸದ ಬುಟ್ಟಿ ವಿತರಣೆಗೆ ಯೋಜಿಸಲಾಗಿದೆ. 1.38 ಕೋಟಿ ರೂ. ವೆಚ್ಚದಲ್ಲಿ ಕಸದ ಬುಟ್ಟಿಗಳನ್ನು ಖರೀದಿಸಲಾಗಿದೆ.
ಇದನ್ನು ಓದಿ | ಶಿವಮೊಗ್ಗ ಮೇಯರ್’ಗೆ ಪ್ರಧಾನಿ ಕಚೇರಿಯಿಂದ ಆಹ್ವಾನ, ಇವತ್ತು ದೆಹಲಿಗೆ
ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಶಂಕರ್ ಗನ್ನಿ, ಪಾಲಿಕೆ ಆಡಳಿತ ಪಕ್ಷದ ನಾಯಕ ಎಸ್.ಎನ್.ಚನ್ನಬಸಪ್ಪ, ಕಾಂಗ್ರೆಸ್ ಪಕ್ಷದ ಕಾರ್ಪೊರೇಟರ್ ಹೆಚ್.ಸಿ.ಯೋಗೇಶ್, ಕಮಿಷನರ್ ಚಿದಾನಂದ ವಟಾರೆ, ಕಾರ್ಪೊರೇಟರ್’ಗಳು ಸೇರಿದಂತೆ ಹಲವರು ಇದ್ದರು.


(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200