SHIVAMOGGA LIVE | 27 MAY 2023
SHIMOGA : ಮೈಸೂರು, ಬೆಂಗಳೂರು ನಗರಗಳ ಮಧ್ಯೆ ಸಂಚಾರಕ್ಕೆ ಸೀಮಿತವಾಗಿದ್ದ ಎಲೆಕ್ಟ್ರಿಕ್ ಬಸ್ಸುಗಳು (E-bus) ಈಗ ರಾಜ್ಯದ ವಿವಿಧ ಜಿಲ್ಲೆಗಳಿಗೆ ಸಂಚಾರ ಆರಂಭಿಸಿವೆ. ಶಿವಮೊಗ್ಗ – ಬೆಂಗಳೂರು ಮಧ್ಯೆ ಇವತ್ತಿನಿಂದ ಪ್ರಾಯೋಗಿಕ ವಿದ್ಯುತ್ ಚಾಲಿತ ಬಸ್ ಸಂಚಾರ ಆರಂಭವಾಗಿದೆ.
ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಿಂದ ಮೊದಲ ಎಲೆಕ್ಟ್ರಿಕ್ ಬಸ್ ಇವತ್ತು ಬೆಂಗಳೂರಿಗೆ ತೆರಳಿತು. ವಿಭಾಗದ ಸಿಬ್ಬಂದಿ ಪೂಜೆ ಸಲ್ಲಿಸಿ ಬಸ್ಗೆ ಚಾಲನೆ ನೀಡಿದರು.
WATCH VIDEO
ಹೆಚ್ಚಿನ ಮಾಹಿತಿಗೆ ಇಲ್ಲಿ CLICK ಮಾಡಿ
ಶಿವಮೊಗ್ಗ ವಿಭಾಗಕ್ಕೆ 10 ಬಸ್
ಮಾರ್ಚ್ 20ರಂದು ರಾಜ್ಯದಲ್ಲಿ ಮೊದಲ ಎಲೆಕ್ಟ್ರಿಕ್ ಬಸ್ ಸಂಚಾರ ಆರಂಭವಾಯಿತು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದ್ದರು. ಪ್ರಾಯೋಗಿಕವಾಗಿ ಬೆಂಗಳೂರು – ಮೈಸೂರು ನಡುವೆ ಮಾತ್ರ ಬಸ್ಸುಗಳು ಸಂಚರಿಸುತ್ತಿದ್ದವು. ಹಂತ ಹಂತವಾಗಿ ಬೆಂಗಳೂರಿನಿಂದ ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ವಿರಾಜಪೇಟೆ, ಮಡಿಕೇರಿಗೆ ವಿದ್ಯುತ್ ಬಸ್ ಸೇವೆ ವಿಸ್ತರಣೆಗೆ ಯೋಜಿಸಲಾಗಿತ್ತು. ಅದರಂತೆ ಶಿವಮೊಗ್ಗ ಬೆಂಗಳೂರು ಮಧ್ಯೆ ಬಸ್ ಸಂಚಾರ ಆರಂಭವಾಗಿದೆ.
ಮೊದಲ ಬಸ್ ಟೈಮಿಂಗ್ ಏನು?
ಸದ್ಯ ಮೊದಲ ಎಲೆಕ್ಟ್ರಿಕ್ ಬಸ್ (E-bus) ಶಿವಮೊಗ್ಗ – ಬೆಂಗಳೂರು ಮತ್ತು ಬೆಂಗಳೂರು – ಶಿವಮೊಗ್ಗ ಮಾರ್ಗದಲ್ಲಿ ಸಂಚರಿಸಲಿದೆ. ಶಿವಮೊಗ್ಗದಿಂದ ಮಧ್ಯಾಹ್ನ 12 ಗಂಟೆಗೆ ಹೊರಟು ಸಂಜೆ 6 ಗಂಟೆಗೆ ಬೆಂಗಳೂರು ಕೆಎಸ್ಆರ್ಟಿಸಿ ಬಸ್ ನಿಲ್ದಾಣ ತಲುಪಲಿದೆ. ಇನ್ನು, ಬೆಂಗಳೂರಿನಿಂದ ರಾತ್ರಿ 11 ಗಂಟೆಗೆ ಹೊರಡಲಿರುವ ಎಲೆಕ್ಟ್ರಿಕ್ ಬಸ್ ಬೆಳಗ್ಗೆ 5 ಗಂಟೆಗೆ ಶಿವಮೊಗ್ಗ ತಲುಪಲಿದೆ.
ಬಸ್ಸಿನ ವಿಶೇಷತೆಗಳೇನು? ಚಾರ್ಜ್ ಎಷ್ಟು?
ಎಲೆಕ್ಟ್ರಿಕ್ ಬಸ್ಸುಗಳು ಅತ್ಯಾಧುನಿಕ ಲಿ-ಆನ್ ಫಾಸ್ಪೇಟ್ ಬ್ಯಾಟರಿ ಹೊಂದಿದೆ. ಒಮ್ಮೆ ಬ್ಯಾಟರಿ ಚಾರ್ಜ್ ಆಗಲು ಸುಮಾರು ಎರಡೂವರೆ ಗಂಟೆ ಸಮಯ ಹಿಡಿಯಲಿದೆ. ಶಿವಮೊಗ್ಗ ಡಿಪೋದಲ್ಲಿ ಬಸ್ ಚಾರ್ಜಿಂಗ್ ಪಾಯಿಂಟ್ ನಿರ್ಮಿಸಲಾಗಿದೆ. ಒಮ್ಮೆ ಚಾರ್ಜ್ ಮಾಡಿದರೆ 300 ಕಿ.ಮೀವರೆಗೆ ಬಸ್ ಸಂಚರಿಸಲಿದೆ.
ಇವಿ ಪ್ಲಸ್ ಬಸ್ಸುಗಳಲ್ಲಿ 43 ಸೀಟುಗಳಿವೆ. ಶಿವಮೊಗ್ಗ – ಬೆಂಗಳೂರು ಮಾರ್ಗದ ಟಿಕೆಟ್ ದರ 600 ರೂ. ನಿಗದಿಪಡಿಸಲಾಗಿದೆ ಎಂದು ಕೆಎಸ್ಆರ್ಟಿಸಿ ಶಿವಮೊಗ್ಗ ವಿಭಾಗ ಪ್ರಕಟಣೆಯಲ್ಲಿ ತಿಳಿಸಿದೆ.
ಇದನ್ನೂ ಓದಿ – ಶರಾವತಿ ಹಿನ್ನೀರಿನ ಮುಪ್ಪಾನೆ ಲಾಂಚ್ ಸೇವೆ ತಾತ್ಕಾಲಿಕ ಸ್ಥಗಿತ, ಕಾರಣವೇನು?
ಇವಿ ಪ್ಲಸ್ ಬಸ್ಸುಗಳು ಸಂಪೂರ್ಣ ಹವಾನಿಯಂತ್ರಿತ ವ್ಯವಸ್ಥೆ ಹೊಂದಿದೆ. ಸಿಸಿ ಕ್ಯಾಮರಾ, ಅಗ್ನಿಶಾಮಕ ಸಾಧನ, ಎಮರ್ಜನ್ಸಿ ಬಟನ್ಗಳು, ಪ್ರಥಮ ಚಿಕಿತ್ಸೆ ಕಿಟ್, ಗ್ಲಾಸ್ ಹ್ಯಾಮರ್ ಸೇರಿದಂತೆ ಹಲವು ಸೌಲಭ್ಯಗಳಿವೆ.
ಆನ್ ಲೈನ್ ಮೂಲಕ ಇ-ಬಸ್ಸುಗಳಲ್ಲಿ ಬೆಂಗಳೂರಿಗೆ ಸಂಚರಿಸಲು https://awatar.ksrtc.in ಟಿಕೆಟ್ ಬುಕ್ಕಿಂಗ್ ಮಾಡಿಕೊಳ್ಳಬಹುದಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200