ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | SHIMOGA | 30 ಜುಲೈ 2022
ಬೆಳಗಿನ ಜಾವ ಶಿವಮೊಗ್ಗದಲ್ಲಿ ಸುರಿದ ಭಾರಿ ಮಳೆಗೆ (RAINFALL) ತಗ್ಗು ಪ್ರದೇಶದ ಹಲವು ಕಡೆ ಮನೆಗಳಿಗೆ ನೀರು ನುಗ್ಗಿದೆ. ನಿದ್ರೆಯಲ್ಲಿದ್ದ ಜನರಿಗೆ ಮಳೆ ಆತಂಕ ಮೂಡಿಸಿದೆ.
ಶಿವಮೊಗ್ಗದಲ್ಲಿ ಇವತ್ತು ಬೆಳಗಿನ ಜಾವ ಸತತ ಎರಡು ಗಂಟೆ ಮಳೆ ಸುರಿದಿದೆ. ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಜೋರು ಮಳೆಯಿಂದಾಗಿ ಚರಂಡಿಗಳು ಭರ್ತಿಯಾಗಿ ಮನೆಗಳಿಗೆ ನೀರು ನುಗ್ಗಿದೆ.
ಅಣ್ಣಾನಗರದ (ANNA NAGARA) ಹಲವು ಮನೆಗಳಿಗೆ ನೀರು ನುಗ್ಗಿದೆ. ಕೂಡಲೆ ಸ್ಥಳಿಯರು ಪಾಲಿಕೆ ಕಾರ್ಪೊರೇಟರ್, ಅಧಿಕಾರಿಗಳನ್ನು ಸಂಪರ್ಕಿಸಲು ಯತ್ನಿಸಿದ್ದಾರೆ. ಆದರೆ ಯಾರೂ ತಮ್ಮ ನೆರವಿಗೆ ಬಂದಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಯುಜಿಡಿ ನೀರು ಮನೆಗೆ
ಇನ್ನು ಸಾಗರ ರಸ್ತೆಯಲ್ಲಿ ಶ್ರೀರಾಮನಗರದಲ್ಲೂ ಮನೆಗಳಿಗೆ ನೀರು ನುಗ್ಗಿದ್ದು, ಮನೆಯಲ್ಲಿದ್ದ ಹಲವು ವಸ್ತುಗಳು ಹಾನಿಗೀಡಾಗಿವೆ.
ಭಾರಿ ಮಳೆಯಿಂದಾಗಿ ಒಳ ಚರಂಡಿಯ ನೀರು ಶೌಚಾಲಯದ ಮೂಲಕ ಮನೆಗೆ ನುಗ್ಗಿದೆ. ಮನೆಯಲ್ಲಿ ಏಕಾಏಕಿ ನೀರಿನ ಪ್ರಮಾಣ ಏರಿಕೆಯಾಗಿದ್ದು, ದುರ್ವಾಸನೆ ಶುರುವಾಗಿದೆ. ಮನೆಯಲ್ಲಿ ಮಲಗಿದ್ದವರು ದುರ್ವಾಸನೆ ತಡೆಯಲಾಗಿದೆ ಸುರಿಯುವ ಮಳೆಯಲ್ಲಿ ಮನೆಯಿಂದ ಹೊರಗೆ ನಿಲ್ಲುವಂತಾಯಿತು.
ಮಹಾನಗರ ಪಾಲಿಕೆಯ ಯುಜಿಡಿ ಕಾಮಗಾರಿ ಅವೈಜ್ಞಾನಿಕವಾಗಿದ್ದು, ಇದರ ಪರಿಣಾಮ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ವಿವಿಧೆಡೆ ಮಳೆಯಿಂದ ಹಾನಿ
ಶುಕ್ರವಾರ ಸಂಜೆ ಸುರಿದ ಭಾರಿ ಮಳೆಗೆ ಶಿವಮೊಗ್ಗ ಮತ್ತು ಭದ್ರಾವತಿ (BHADRAVATHI) ತಾಲೂಕಿನ ವಿವಿಧೆಡೆ ಭಾರಿ ಹಾನಿ ಉಂಟಾಗಿದೆ.
ಭಾರಿ ಮಳೆ, ಗಾಳಿಗೆ ಹೊಳೆಹೊನ್ನೂರು (HOLEHONNURU) ಭಾಗದಲ್ಲಿ ಹಲವು ಕಡೆ ಅಡಕೆ ಮರಗಳು ಮತ್ತು ತೆಂಗಿನ ಮರಗಳು ಮುರಿದು ಬಿದ್ದಿವೆ. ತೆಂಗಿನ ಮರ ಮುರಿದು ಬಿದ್ದು ಮೈದೊಳಲು ಗ್ರಾಮದ ಕುಬೇಂದ್ರಪ್ಪ ಎಂಬವವರ ಮನೆಗೆ ಹಾನಿ ಉಂಟಾಗಿದೆ. ಮೈದೊಳಲು, ಮಲ್ಲಿಗೆನಹಳ್ಳಿ, ಹನುಮಂತಾಪುರ ಸೇರಿದಂತೆ ಸುತ್ತಮುತ್ತಲ ಗ್ರಾಮಗಳಲ್ಲಿ ಮರಗಳು ಧರೆಗುರುಳಿವೆ.
ರಸ್ತೆ ಮೇಲೆ ಹರಿದ ಭದ್ರೆ
ಇನ್ನು, ಮಲ್ಲಾಪುರ ಗ್ರಾಮದ ಸಮೀಪ ಎಸ್.1 ನಾಲೆಯು ತುಂಬಿ ನೀರು ರಸ್ತೆ ಮೇಲೆ ಹರಿಯುತ್ತಿದೆ. ಈಗಾಗಲೇ ಭದ್ರಾ ನಾಲೆ ತುಂಬಿ ಹರಿಯುತ್ತಿದೆ. ಭಾರಿ ಮಳೆಯಿಂದಾಗಿ ನಾಲೆ ಭರ್ತಿಯಾಗಿ ನೀರು ಸಂಪೂರ್ಣವಾಗಿ ರಸ್ತೆ ಮತ್ತು ಪಕ್ಕದ ತೋಟ, ಗದ್ದೆಗಳಿಗೆ ನುಗ್ಗಿದೆ. ಇದರಿಂದ ರಸ್ತೆಗಳು ಹಾನಿಗೀಡಾಗುತ್ತಿವೆ, ರೈತರು ಕೂಡ ಬೆಳೆ ನಷ್ಟ ಅನುಭವಿಸುವ ಭೀತಿಯಲ್ಲಿದ್ದಾರೆ.
ಇದನ್ನೂ ಓದಿ – ಶಿವಮೊಗ್ಗ, ಭದ್ರಾವತಿಯಲ್ಲಿ ಅಬ್ಬರಿಸಿದ ಮಳೆ, ಮನೆ, ಮಳಿಗೆಗಳಿಗೆ ನುಗ್ಗಿದ ನೀರು
ಅಗರದಳ್ಳಿ ಗ್ರಾಮದ ಎಕೆ ಕಾಲೋನಿಯಲ್ಲಿ ನೆರೆ ಪರಿಸ್ಥಿತಿ ಸೃಷ್ಟಿಯಾಗಿತ್ತು. ಮನೆಗಳಿಗೆ ನೀರು ನುಗ್ಗಿದೆ. ರಸ್ತೆಗಳು ಜಲಾವೃತವಾಗಿದೆ. ಜನರು ಆತಂಕದಲ್ಲೇ ರಾತ್ರಿ ಕಳೆಯುವಂತಾಗಿದೆ. ಭದ್ರಾವತಿಯ ಒಳಾಂಗಣ ಕ್ರೀಡಾಂಗಣದ ಮೇಲ್ಛಾವಣಿ ಗಾಳಿಗೆ ಹಾರಿ ಹೋಗಿದೆ. ಅದೃಷ್ಟವಶಾತ್ ಯಾರಿಗೂ ಯಾವುದೆ ಹಾನಿಯಾಗಿಲ್ಲ.
ಕಳೆದ ಒಂದು ವಾರದಿಂದ ತಗ್ಗಿದ್ದ ಮಳೆ, ಈಗ ಎರಡ್ಮೂರು ದಿನದಿಂದ ಮಳೆ (RAINFALL) ಆರಂಭವಾಗಿದೆ. ಜೋರು ಮತ್ತು ನಿರಂತರ ಮಳೆಯಿಂದಾಗಿ ತಗ್ಗು ಪ್ರದೇಶದ ಜನರಿಗೆ ತೀವ್ರ ಆತಂಕ ಮೂಡಿಸಿದೆ.
ಇದನ್ನೂ ಓದಿ – ಶಿವಮೊಗ್ಗದಲ್ಲಿ 50 ಚೆಕ್ ಪೋಸ್ಟ್ ನಿರ್ಮಿಸಿ 2 ಗಂಟೆ ದಿಢೀರ್ ತಪಾಸಣೆ, ಏನೆಲ್ಲ ಸಿಕ್ತು?
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422