ಶಿವಮೊಗ್ಗ ದುರ್ಗಿಗುಡಿ ಸರ್ಕಾರಿ ಶಾಲೆಗೆ ಶಿಕ್ಷಣ ಸಚಿವರ ಭೇಟಿ, ಸ್ಮಾರ್ಟ್ ಕ್ಲಾಸ್ ಪರಿಶೀಲನೆ, ಮತ್ತೆಲ್ಲೆಲ್ಲಿ ಭೇಟಿ ಕೊಟ್ಟರು?

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 20 JANUARY 2021

ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇವತ್ತು ಶಿವಮೊಗ್ಗದ ವಿವಿಧ ಶಾಲೆಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ, ಪರೀಕ್ಷೆಗೆ ಚನ್ನಾಗಿ ಓದುವಂತೆ ತಿಳಿಸಿದರು.

ದುರ್ಗಿಗುಡಿ ಶಾಲೆ

ದುರ್ಗಿಗುಡಿ ಸರ್ಕಾರಿ ಶಾಲೆಗೆ ಸಚಿವ ಸುರೇಶ್ ಕುಮಾರ್ ನೀಡಿದರು. ಶಾಲೆಯ ಕೊಠಡಿಗಳನ್ನು ಪರಿಶೀಲನೆ ನಡೆಸಿದರು. ಸ್ಮಾರ್ಟ್ ಸಿಟಿ ಯೋಜನೆ ವತಿಯಿಂದ ಸ್ಥಾಪಿಸಲಾಗಿರುವ ಸ್ಮಾರ್ಟ್ ಕ್ಲಾಸ್‍ ಪರಿಶೀಲಿಸಿದರು.

ನಿಮ್ಮ ಫಲಿತಾಂಶ ನೋಡ್ತೀನಿ

ದುರ್ಗಿಗುಡಿ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳ ಜೊತೆಗೆ ಮಾತನಾಡಿದ ಸಚಿವ ಸುರೇಶ್ ಕುಮಾರ್, ಈ ಬಾರಿ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾದಾಗ ದುರ್ಗಿಗುಡಿ ಸರ್ಕಾರಿ ಶಾಲೆಯ ಫಲಿತಾಂಶವನ್ನೇ ಮೊದಲು ನೋಡ್ತೀನಿ. ಶಾಲೆಗೆ ಉತ್ತಮ ಫಲಿತಾಂಶ ತನ್ನಿ ಎಂದರು.

ಬಳಿಕ ಶಿವಮೊಗ್ಗದ ಬಿ.ಹೆಚ್.ರಸ್ತೆಯ ಸರ್ಕಾರಿ ಬಾಲಕಿ ಶಾಲೆ, ಬಿ.ಬಿ.ಸ್ಟ್ರೀಟ್‍ನಲ್ಲಿರುವ ಸರ್ಕಾರಿ ಶಾಲೆಗೆ ಸಚಿವ ಸುರೇಶ್ ಕುಮಾರ್ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು.  ಈ ವೇಳೆ ವಿದ್ಯಾರ್ಥಿಗಳು, ಪೋಷಕರು ಮತ್ತು ಶಿಕ್ಷಕರ ಜೊತೆ ಸಂವಾದ ನಡೆಸಿದರು.

VIDEO REPORT

ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಸೇರಿದಂತೆ ಹಲವು ಪ್ರಮುಖರು, ಅಧಿಕಾರಿಗಳು ಈ ವೇಳೆ ಸಚಿವರ ಜೊತೆಗಿದ್ದರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

200121 Minister Suresh Kumar Visit Durgigudi School 1

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

Leave a Comment