ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ: ಈದ್ ಮಿಲಾದ್ ಮೆರವಣಿಗೆ ಹಿನ್ನೆಲೆ ಶಿವಮೊಗ್ಗ ನಗರದಲ್ಲಿ ಇವತ್ತು ಪೊಲೀಸ್ ರೂಟ್ ಮಾರ್ಚ್ (Route March) ನಡೆಸಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ಪಥ ಸಂಚಲನ ನಡೆಯಿತು.
ಮೆರವಣಿಗೆ ಸಾಗುವ ಮಾರ್ಗ ಮತ್ತು ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಲಾಯಿತು. ರ‍್ಯಾಪಿಡ್ ಆಕ್ಷನ್ ಫೋರ್ಸ್, ಕೆಎಸ್‌ಆರ್‌ಪಿ, ಡಿಎಆರ್, ಎಎಎಫ್, ಗೃಹ ರಕ್ಷಕದಳ ಸಿಬ್ಬಂದಿ ಪಥ ಸಂಚಲನದಲ್ಲಿ ಪಾಲ್ಗೊಂಡಿದ್ದರು.
ಭದ್ರತೆಗೆ ಸಾವಿರ ಸಾವಿರ ಪೊಲೀಸರು

ಸೆ.15ರಂದು ಶಿವಮೊಗ್ಗ ನಗರದಲ್ಲಿ ಈದ್ ಮಿಲಾದ್ ಮೆರವಣಿಗೆ ನಡೆಯಲಿದೆ. ಮುಂಜಾಗ್ರತ ಕ್ರಮವಾಗಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.
ಬಂದೋಬಸ್ತ್‌ಗೆ ಓರ್ವ ಪೊಲೀಸ್ ಅಧೀಕ್ಷಕ, 3 ಹೆಚ್ಚುವರಿ ಪೊಲೀಸ್ ಅಧೀಕ್ಷಕರು, 17 ಪೊಲೀಸ್ ಉಪಾಧೀಕ್ಷಕರು, 52 ಪೋಲಿಸ್ ನಿರೀಕ್ಷಕರು, 38 ಪೊಲೀಸ್ ಉಪ ನಿರೀಕ್ಷಕರು, 77 ಸಹಾಯಕ ಪೊಲೀಸ್ ನಿರೀಕ್ಷಕರು, 2000 ಪೊಲೀಸ್ ಹೆಡ್ ಕಾನ್ಸ್ ಟೆಬಲ್ ಮತ್ತು ಪೊಲೀಸ್ ಕಾನ್ಸ್‌ಟೇಬಲ್‌ಗಳು, 1000 ಗೃಹರಕ್ಷಕ ದಳ ಸಿಬ್ಬಂದಿಗಳು, 1 RAF ತುಕಡಿ, 1 SAF ತುಕಡಿ 8 DAR ತುಕಡಿ, 1 QRT ತುಕಡಿ ಮತ್ತು 10 KSRP ತುಕಡಿ ನಿಯೋಜಿಸಲಾಗಿದೆ ಎಂದ ಪೊಲೀಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.




ಇದನ್ನೂ ಓದಿ » ಮೈಸೂರು ದಸರಾ, ಶಿವಮೊಗ್ಗದಿಂದ ಮೈಸೂರಿಗೆ ಎಷ್ಟು ರೈಲುಗಳಿವೆ? ಟೈಮಿಂಗ್ ಏನು? ಇಲ್ಲಿದೆ ಡಿಟೇಲ್ಸ್
Eid Milad Police Route March in Shimoga city
LATEST NEWS
- ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

- ಬ್ಯಾಂಕ್ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

- ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

- ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್, ಯಾಕೆ?

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್ 2026 – ಅಡಿಕೆ ಧಾರಣೆ

About The Editor
ನಿತಿನ್ ಆರ್.ಕೈದೊಟ್ಲು















