ಶಿವಮೊಗ್ಗ ಲೈವ್
ಶಿವಮೊಗ್ಗ: ನಗರದಲ್ಲಿ ಈದ್ ಮಿಲಾದ್ (Eid Milad) ಮೆರವಣಿಗೆ ಅದ್ಧೂರಿಯಾಗಿ ಜರುಗಿತು. ಶಿವಮೊಗ್ಗ ಸೇರಿದಂತೆ ವಿವಿಧೆಡೆಯಿಂದ ದೊಡ್ಡ ಸಂಖ್ಯೆಯ ಮುಸ್ಲಿಮರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. (ಈ ಸುದ್ದಿಯನ್ನು ಇನ್ನು 92 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
ಮೆರವಣಿಗೆ ಹೇಗಿತ್ತು? ಏನೆಲ್ಲ ಇತ್ತು? ಇಲ್ಲಿದೆ ಪಾಯಿಂಟ್ಸ್
ಗಾಂಧಿ ಬಜಾರ್ನ ಸುನ್ನಿ ಜಾಮಿಯಾ ಮಸೀದಿ ಮುಂಭಾಗದಿಂದ ಮೆರವಣಿಗೆ ಆರಂಭವಾಯಿತು. ನಗರದ ಪ್ರಮುಖ ರಸ್ತೆಗಳಲ್ಲಿ ಸಾಗಿ ಅಮೀರ್ ಅಹಮದ್ ಸರ್ಕಲ್ನಲ್ಲಿ ಮೆರವಣಿಗೆ ಮುಕ್ತಾಯವಾಯಿತು.
ಮೆರವಣಿಗೆಯಲ್ಲಿ ಟಿಪ್ಪು ಸುಲ್ತಾನ್ ವೇಷದಲ್ಲಿ ಮಕ್ಕಳು ಭಾಗವಹಿಸಿದ್ದು ಗಮನ ಸೆಳೆಯಿತು. ಟಿಪ್ಪು ಸುಲ್ತಾನ್ ಚಿತ್ರವಿರುವ ಬೃಹತ್ ಧ್ವಜಗಳು ಮೆರವಣಿಗೆಯಲ್ಲಿ ರಾರಾಜಿಸಿದವು.
ವಿವಿಧೆಡೆಯ ಸುಮಾರು 100ಕ್ಕೂ ಹೆಚ್ಚು ಡಿ.ಜೆ.ಗಳು ಮೆರವಣಿಗೆಯಲ್ಲಿ ಇದ್ದವು. ಪ್ರತಿ ಡಿಜೆ ಹಿಂಬದಿಯು ಯುವಕರ ಗುಂಪು ಕುಣಿದು ಕುಪ್ಪಳಿಸುತ್ತಿದ್ದರು.
ಇಲ್ಲಿದೆ ಮೆರವಣಿಗೆಯ ಫೋಟೊಗಳು











ಇದನ್ನೂ ಓದಿ » ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ದಿನ? ಎಲ್ಲೆಲ್ಲಿ ಇರುತ್ತೆ ಸ್ಟಾಪ್?
Eid Milad procession in Shimoga city

