ಎಂಟು ವರ್ಷದ ಪೋರ ಶಿವಮೊಗ್ಗ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌, ಸಂಜೆ ಅಧಿಕಾರ ಸ್ವೀಕಾರ..!

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 AUGUST 2023

SHIMOGA : ಎಂಟೂವರೆ ವರ್ಷದ ಪೋರ ಇವತ್ತು ದೊಡ್ಡಪೇಟೆ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ (INSPECTOR) ಆಗಿ ಅಧಿಕಾರ ಸ್ವೀಕರಿಸಿದ. ಬಳಿಕ ಕರ್ತವ್ಯದ ಕುರಿತು ಸಿಬ್ಬಂದಿಗೆ ಸೂಚನೆಗಳನ್ನು ನೀಡಿದ. ಕಳ್ಳನಿಗೆ ಬುದ್ದಿವಾದ ಹೇಳಿ, ಸರಿ ದಾರಿಯಲ್ಲಿ ನಡೆಯುವಂತೆ ವಾರ್ನಿಂಗ್‌ (Warning) ನೀಡಿದ..!

ಶಿವಮೊಗ್ಗದ ಸೂಳೆಬೈಲು ನಿವಾಸಿ ತಬ್ರೇಜ್‌ ಖಾನ್‌ ಅವರ ಪುತ್ರ ಒಂದನೆ ತರಗತಿಯ ಆಜಾನ್‌ ಖಾನ್ ಇವತ್ತು ದೊಡ್ಡಪೇಟೆ ಪೊಲೀಸ್‌ ಠಾಣೆಯ ಇನ್ಸ್‌ಪೆಕ್ಟರ್‌ ಆಗಿ ಒಂದು ಗಂಟೆ ಜವಾಬ್ದಾರಿ ನಿಭಾಯಿಸಿದ. ಈ ವಿಶೇಷ ಸಂದರ್ಭಕ್ಕೆ ಜಿಲ್ಲಾ ಪೊಲೀಸ್‌ ಇಲಾಖೆ ಸಾಕ್ಷಿಯಾಯಿತು.

azan%20Khan%201

ಪೋರನಿಗೆ ಇನ್ಸ್‌ಪೆಕ್ಟರ್‌ ಜವಾಬ್ದಾರಿ

ಆಜಾನ್‌ ಖಾನ್‌ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದಾನೆ. ದೊಡ್ಡವನಾದ ಮೇಲೆ ಪೊಲೀಸ್‌ ಆಗಬೇಕು ಅನ್ನವುದು ಆತನ ಆಸೆ. ಇದೇ ಕಾರಣಕ್ಕೆ ಪೋಷಕರು ಮಗನ ಆಸೆ ಈಡೇರಿಸುವಂತೆ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌ ಅವರಿಗೆ ಮನವಿ ಮಾಡಿದ್ದರು. ವಿಶೇಷ ಪ್ರಕರಣ ಎಂದು ಪರಿಗಣಿಸಿ ಪೊಲೀಸ್‌ ಇಲಾಖೆ ವತಿಯಿಂದ ಆಜಾನ್‌ ಖಾನ್‌ನನ್ನು ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌ (INSPECTOR) ಆಗಿ ನಿಯೋಜಿಸಲಾಗಿತ್ತು.

azan%20Khan%203

ಸಲ್ಯೂಟ್‌ ಹೊಡೆದು ಅಧಿಕಾರ ಸ್ವೀಕಾರ

ಬಾಲಕನ ಆಸೆ ಈಡೇರಿಸಲು ಪೊಲೀಸ್‌ ಇಲಾಖೆ ಎಲ್ಲ ಸಿದ್ಧತೆ ಮಾಡಿತ್ತು. ಪೊಲೀಸ್‌ ಜೀಪಿನಲ್ಲಿಯೇ ಆಜಾನ್‌ ಖಾನ್‌ನನ್ನು ಠಾಣೆಗೆ ಕರೆತರಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಮಿಥುನ್‌ ಕುಮಾರ್‌, ಹೆಚ್ಚುವರಿ ರಕ್ಷಣಾಧಿಕಾರಿ ಅನಿಲ್‌ ಕುಮಾರ ಭೂಮರೆಡ್ಡಿ, ಇನ್ಸ್‌ಪೆಕ್ಟರ್‌ ಆಜಾನ್‌ ಖಾನ್‌ನನ್ನು ಸ್ವಾಗತಿಸಿದರು. ಹಿರಿಯ ಅಧಿಕಾರಿಗಳಿಗೆ ಸಲ್ಯೂಟ್‌ ಮಾಡಿದ ಆಜಾನ್‌ ಖಾನ್‌ ಇನ್ಸ್‌ಪೆಕ್ಟರ್‌ (INSPECTOR) ಆಗಿ ಅಧಿಕಾರ ಸ್ವೀಕರಿಸಿದ.

azan%20Khan%204

ಇದನ್ನೂ ಓದಿ – ಮಹಿಳೆಯರಿಗೆ 2 ಸಾವಿರ ರೂ. ನೀಡುವ ಗೃಹ ಲಕ್ಷ್ಮಿ ಯೋಜನೆ, ಶಿವಮೊಗ್ಗದಲ್ಲಿ ಅಧಿಕಾರಿಗಳಿಗೆ ಡಿಸಿ 3 ಸೂಚನೆ

ಸಿಬ್ಬಂದಿ ಸಮಸ್ಯೆ ಆಲಿಸಿದ, ಕಳ್ಳನಿಗೆ ವಾರ್ನಿಂಗ್‌ ನೀಡಿದ

ಅಧಿಕಾರ ಸ್ವೀಕರಿಸುತ್ತಿದ್ದಂತೆ ಇನ್ಸ್‌ಪೆಕ್ಟರ್‌ ಆಜಾನ್‌ ಖಾನ್‌, ಸಿಬ್ಬಂದಿಗಳನ್ನು ಕರೆದು ಸಮಸ್ಯೆ ಆಲಿಸಿದ. ‘ಎಲ್ಲರು ಚನ್ನಾಗಿ ಕೆಲಸ ಮಾಡಬೇಕುʼ ಎಂದು ಸೂಚನೆ ನೀಡಿದ. ಸಿಬ್ಬಂದಿಯೊಬ್ಬರು ರಜೆ ಬೇಕು ಎಂದು ಮನವಿ ಮಾಡಿದರು. ಕಾರಣ ಕೇಳಿದ ಆಜಾನ್‌ ಖಾನ್‌, ರಜೆಗೆ ಅನುಮತಿ ನೀಡಿದ. ಇನ್ನು, ಇದೇ ವೇಳೆ ಪೊಲೀಸರು ಕಳ್ಳನನ್ನು ಹಿಡಿದು ತಂದು ನಿಲ್ಲಿಸಿದಾಗ, ‘ಇನ್ಮುಂದೆ ಕಳ್ಳತನ ಮಾಡಬಾರದು’ ಎಂದು ವಾರ್ನಿಂಗ್‌ ನೀಡಿದ.

azan%20Khan%202

ಯಾರೆಲ್ಲ ಏನೇನು ಹೇಳಿದರು?

[su_quote cite=”ಆಜಾನ್‌ ಖಾನ್‌, ಬಾಲಕ“]ದೊಡ್ಡವನಾದ ಮೇಲೆ ನಾನು ಎಸ್‌ಪಿ ಆಗಬೇಕು ಅಂದುಕೊಂಡಿದ್ದೇನೆ. ನಾನು ಪೊಲೀಸ್‌ ಆಗಬೇಕು ಎಂದು ಅಪ್ಪನಿಗೆ ಹೇಳಿದೆ. ಈಗ ನನಗೆ ಖುಷಿಯಾಗಿದೆ. ಎಸ್‌ಪಿ ಸರ್‌ ಬಂದಿದ್ದರು. ಇಲ್ಲಿ ಬಂದಾಗ ಸ್ಟೇಷನ್‌ ತೋರಿಸಿದರು.[/su_quote]

[su_quote cite=”ತಬ್ರೇಜ್‌ ಖಾನ್‌, ಬಾಲಕನ ತಂದೆ“]ನನ್ನ ಮಗನಿಗೆ ಹುಟ್ಟಿನಿಂದ ಹೃದಯ ಸಂಬಂಧಿ ಕಾಯಿಲೆ ಇದೆ. ಎಷ್ಟೋ ಲಕ್ಷ ಮಕ್ಕಳಲ್ಲಿ ಒಬ್ಬರಿಗೆ ಇಂತಹ ಕಾಯಿಲೆ ಬರಲಿದೆಯಂತೆ. ಆತನ ಹೃದಯ ಬೆಳೆದಿಲ್ಲ. ವೈದ್ಯರು, ತಜ್ಞರ ಬಳಿ ತೋರಿಸಿದಾಗ ಶಸ್ತ್ರಚಿಕಿತ್ಸೆ ಮಾಡಲು ಆಗುವುದಿಲ್ಲ ಎಂದರು. ಹೃದಯ ಮತ್ತು ಶಾಸ್ವಕೋಶದ ಕಸಿ ಮಾಡಬೇಕು ಎಂದಿದ್ದಾರೆ. ಆತನಿಗೆ ಪೊಲೀಸ್‌ ಆಗಬೇಕು ಅನ್ನುವ ಆಸೆ ಇದೆ.[/su_quote]

Eight year old Boy-Azan-Khan-takes-charge-as-Doddapete-Inspector.

[su_quote cite=”ಮಿಥುನ್‌ ಕುಮಾರ್‌, ಜಿಲ್ಲಾ ರಕ್ಷಣಾಧಿಕಾರಿ“]ಒಂದು ದಿನ ಪೊಲೀಸ್‌ ಆಗಬೇಕು ಎಂದು ಬಾಲಕನಿಗೆ ಆಸೆ ಇತ್ತು. ಈ ಕುರಿತು ಅವರ ತಂದೆ ಮನವಿ ಮಾಡಿದ್ದರು. ಈ ಹಿನ್ನೆಲೆ ಡಿವೈಎಸ್‌ಪಿ ಅವರಿಗೆ ತಿಳಿಸಿ ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌ ಮಾಡಲಾಗಿದೆ. ಮಾನವೀಯ ನೆಲೆಯಲ್ಲಿ ಬಾಲಕನನ್ನು ಇನ್ಸ್‌ಪೆಕ್ಟರ್‌ ಮಾಡಿದ್ದೇವೆ. ಬಾಲಕ ತುಂಬ ಖುಷಿ ಪಟ್ಟಿದ್ದಾನೆ.[/su_quote]

[su_quote cite=”ಅಂಜನ್‌ ಕುಮಾರ್‌, ದೊಡ್ಡಪೇಟೆ ಠಾಣೆ ಇನ್ಸ್‌ಪೆಕ್ಟರ್‌“]ಮಾನವೀಯ ನೆಲೆಯಲ್ಲಿ ಆ ಮಗುವನ್ನು ಒಂದು ಗಂಟೆ ಇನ್ಸ್‌ಪೆಕ್ಟರ್‌ ಮಾಡುತ್ತೇವೆ ಎಂದು ಹಿರಿಯ ಅಧಿಕಾರಿಗಳು ತಿಳಿಸಿದ್ದರು. ಬಹಳ ಖುಷಿಯಿಂದ ಒಂದು ಗಂಟೆ ಕಾಲ ಆ ಮಗುವಿನ ನನ್ನ ಸ್ಥಾನ ಬಿಟ್ಟುಕೊಟ್ಟಿದ್ದೇನೆ. ಠಾಣೆಯ ಸಿಬ್ಬಂದಿಯನ್ನು ಕರೆದು ರೋಲ್‌ ಕಾಲ್‌ ಮಾಡಿದ. ಒಬ್ಬ ಸಿಬ್ಬಂದಿ ಒಂದು ದಿನ ರಜೆ ಕೇಳಿದರೆ ಎರಡು ದಿನ ರಜೆಯನ್ನು ಕೊಟ್ಟಿದ್ದಾನೆ. ಮಗುವಿನ ಖುಷಿ ಕಂಡು ನಮಗೆ ಖುಷಿಯಾಯಿತು.[/su_quote]

ಸಂಜೆ 6.30ರಿಂದ ಒಂದು ಗಂಟೆ ಕಾಲ ಆಜಾನ್‌ ಖಾನ್‌ ದೊಡ್ಡಪೇಟೆ ಠಾನೆ ಇನ್ಸ್‌ಪೆಕ್ಟರ್‌ ಆಗಿ ಕರ್ತವ್ಯ ನಿಭಾಯಿಸಿದ. ಪೊಲೀಸ್‌ ಇನ್ಸ್‌ಪೆಕ್ಟರ್‌ ಆಗಿದ್ದಕ್ಕೆ ಬಾಲಕ ಖುಷಿ ಪಟ್ಟ. ಮಗನ ಆಸೆ ಈಡೇರಿಸಿದ ಸಮಾಧಾನ ಪೋಷಕರಲ್ಲಿತ್ತು. ವಿಶೇಷ ಸಂದರ್ಭಕ್ಕೆ ಜೊತೆಯಾದ ಧನ್ಯತೆ ಪೊಲೀಸರಲ್ಲಿತ್ತು.

PARISHRAMA neet academy

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 16, 2023

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment