ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 30 MARCH 2023
SHIMOGA : ನಿಷ್ಪಕ್ಷಪಾತ ಚುನಾವಣೆ ನಡೆಸುವ ಉದ್ದೇಶದಿಂದ ಮಾಧ್ಯಮಗಳ ಮೇಲೂ ಚುನಾವಣಾ ಆಯೋಗ ಕಣ್ಣಿಟಿದೆ. ಶಿವಮೊಗ್ಗ ಜಿಲ್ಲೆಯ ಮಾಧ್ಯಮಗಳ (Media) ಮೇಲೆ ಕಣ್ಗಾವಲು ಇಡಲು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೀಡಿಯಾ ಸೆಂಟರ್ ಆರಂಭಿಸಲಾಗಿದೆ.

ಜಿಲ್ಲಾಧಿಕಾರಿ ಕೊಠಡಿಗೆ ಹೊಂದಿಕೊಂಡ ಹಾಗೆ ಮೀಡಿಯಾ ಸೆಂಟರ್ (Media) ಸ್ಥಾಪಿಸಲಾಗಿದೆ. ಇಲ್ಲಿ ಮಾಧ್ಯಮಗಳ ಪ್ರತಿ ಸುದ್ದಿಯ ಮೇಲೂ ನಿರಂತರವಾಗಿ ಕಣ್ಣಿಡಲು ವ್ಯವಸ್ಥೆ ಕಲ್ಪಿಸಲಾಗಿದೆ.
ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ಮಹಿಳಾ ಮತದಾರರೆ ಹೆಚ್ಚು, ಯಾವ್ಯಾವ ಕ್ಷೇತ್ರದಲ್ಲಿ ಎಷ್ಟು ಮತದಾರರಿದ್ದಾರೆ?
ಹೇಗಿದೆ ಮೀಡಿಯಾ ಕಣ್ಗಾವಲು ರೂಂ?
ಮೀಡಿಯಾ ಕಣ್ಗಾವಲು ಕೊಠಡಿಯಲ್ಲಿ ಮಾಧ್ಯಮಗಳ ಮೇಲೆ ನಿರಂತರ ಕಣ್ಣಿಡಲು ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಮೂರು ಟಿವಿಗಳ ಮೂಲಕ ಬೆಳಗ್ಗೆಯಿಂದ ರಾತ್ರಿವರೆಗೆ ಅಧಿಕಾರಿಗಳು ನಿರಂತರವಾಗಿ ಸುದ್ದಿ ವಾಹಿನಿಗಳನ್ನು ವೀಕ್ಷಿಸಲಿದ್ದಾರೆ.
ಪ್ರತಿದಿನ ಶಿವಮೊಗ್ಗದಲ್ಲಿ ಪ್ರಕಟವಾಗುವ ಎಲ್ಲಾ ಪತ್ರಿಕೆಗಳನ್ನು ಕೂಲಂಕಷವಾಗಿ ಓದಲಿದ್ದಾರೆ. ಡಿಜಿಟಲ್ ಮಾಧ್ಯಮಗಳ ಮೇಲೂ ಕಣ್ಣಿಡಲಾಗುತ್ತದೆ. ಮಾಧ್ಯಮಗಳಲ್ಲಿ ಪೇಯ್ಡ್ ನ್ಯೂಸ್ ಪ್ರಕಟವಾಗುತ್ತಿದ್ದರೆ, ಒಂದೇ ಪಕ್ಷ ಅಥವಾ ಅಭ್ಯರ್ಥಿ ಪರವಾಗಿ ಸುದ್ದಿಗಳು ಪ್ರಕಟಿಸುವುದು, ನೀತಿ ಸಂಹಿತೆಯ ಉಲ್ಲಂಘನೆ ಆಗುವಂತಹ ಸುದ್ದಿಗಳು ಪ್ರಕಟವಾದರೆ ಕ್ರಮಕ್ಕೆ ಸೂಚಿಸಲಾಗುತ್ತದೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಅವರು, ಮಾಧ್ಯಮಗಳ ವರದಿಗಳ ಮೇಲೆ ಕಣ್ಣಿಡಲು ಸೆಂಟರ್ ಆರಂಭಿಸಲಾಗಿದೆ. ಪಕ್ಷ ಅಥವಾ ಅಭ್ಯರ್ಥಿಯ ಜಾಹೀರಾತು ಪ್ರಕಟಿಸಲು ಜಿಲ್ಲಾಡಳಿತದಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.
LATEST NEWS
- ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್

- ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 18 ಮಾರ್ಚ್ 2026 – ಅಡಿಕೆ ಧಾರಣೆ

- ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

- ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

- ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP













