ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 20 SEPTEMBER 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ವಿಧಾನಸಭೆ ಚುನಾವಣೆಗೆ ಟಿಕೆಟ್ (Election Ticket) ಕೊಡಿಸುವುದಾಗಿ ನಂಬಿಸಿ ಚೈತ್ರಾ ಕುಂದಾಪುರ ಮತ್ತು ತಂಡ 5 ಕೋಟಿ ರೂ. ವಂಚಿಸಿದ ಪ್ರಕರಣದ ಸಂಬಂಧ ಶಿವಮೊಗ್ಗದಲ್ಲಿ ಮಹಜರ್ ನಡೆಸಲಾಯಿತು. ಪ್ರಕರಣದ ಪ್ರಮುಖ ಆರೋಪಿ ಗಗನ್ ಕಡೂರ್ನನ್ನು ಬೆಂಗಳೂರು ಸಿಸಿಬಿ ಪೊಲೀಸರು ಶಿವಮೊಗ್ಗಕ್ಕೆ ಕರೆತಂದಿದ್ದರು.
ಶಿವಮೊಗ್ಗದಲ್ಲಿ ಗೋವಿಂದ ಬಾಬು ಪೂಜಾರಿ ಅವರಿಂದ ಗಗನ್ ಕಡೂರು 50 ಲಕ್ಷ ರೂ. ಹಣ ಪಡೆದಿದ್ದ ಎಂದು ಆರೋಪಿಸಲಾಗಿತ್ತು. ಈ ಹಿನ್ನೆಲೆ ಆ ಸ್ಥಳ, ಆರೋಪಿಗಳು ಉಳಿದುಕೊಂಡಿದ್ದ ಬಿ.ಹೆಚ್. ರಸ್ತೆ ಪಕ್ಕದ ಹೋಟೆಲ್ ಹಾಗೂ ಪ್ರಮುಖ ಕಲ್ಯಾಣಮಂದಿರದ ಬಳಿ ಮಹಜರ್ ನಡೆಸಲಾಯಿತು. ಸಿಸಿಬಿ ಇನ್ಸ್ಪೆಕ್ಟರ್ ಭರತ್ ನೇತೃತ್ವದ ಪೊಲೀಸರ ತಂಡ ಮಹಜರ್ ನಡೆಸಿದರು. ಸ್ಥಳದಲ್ಲಿ ಆರೋಪಿ ಗಗನ್ ಕಡೂರುನನ್ನು ನಿಲ್ಲಿಸಿ ಫೋಟೊ ತೆಗೆದುಕೊಂಡು ತೆರಳಿದರು.
ಇದನ್ನೂ ಓದಿ – ತೀರ್ಥಹಳ್ಳಿ ಮೂಲದ ಶಂಕಿತ ದೆಹಲಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್