ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 23 ಡಿಸೆಂಬರ್ 2021
ಶಿವಮೊಗ್ಗ ಜಿಲ್ಲೆಯ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಡಿಸೆಂಬರ್ 27ರಂದು ಮತದಾನ ನಡೆಯಲಿದೆ. ಶಾಲೆ, ಕಾಲೇಜುಗಳಲ್ಲಿ ಮತದಾನ ಕೇಂದ್ರ ಇರಲಿದೆ. ಮತಗಟ್ಟೆಗಳು ಇರುವ ಶಾಲೆ, ಕಾಲೇಜುಗಳಿಗೆ ಆ ದಿನ ರಜೆ ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅವಧಿ ಮುಗಿದ ಗ್ರಾಮ ಪಂಚಾಯಿತಿಗಳು ಮತ್ತು ವಿವಿಧ ಕಾರಣಕ್ಕೆ ತೆರವಾಗಿರುವ ಗ್ರಾಮ ಪಂಚಾಯಿತಿ ಸ್ಥಾನಗಳಿಗೆ ಡಿ.27ರಂದು ಉಪ ಚುನಾವಣೆ ನಡೆಯಲಿದೆ. ಶಾಲೆ, ಕಾಲೇಜುಗಳಲ್ಲಿ ಮತಗಟ್ಟೆ ಸ್ಥಾಪಿಸಲಾಗಿದೆ. ಮತದಾನದ ಸಂದರ್ಭ ಗೊಂದಲ ಉಂಟಾಗಬಾರದು ಎಂಬ ಉದ್ದೇಶದಿಂದ ಮತಗಟ್ಟೆ ಇರುವ ಶಾಲೆ, ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಯಾವೆಲ್ಲ ಶಾಲೆ, ಕಾಲೇಜುಗಳಿಗೆ ರಜೆ?
ಶಿವಮೊಗ್ಗ ತಾಲೂಕು
ಚಿತ್ರಶೆಟ್ಟಿಹಳ್ಳಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಪುರದಾಳು ಕಡಲೆವಡ್ಡು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅನುಪಿನಕಟ್ಟೆಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತ್ಯಾವರೇಕೊಪ್ಪದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಕುಂಸಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಕುಂಸಿಯ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆ, ದೊಡ್ಡಮಟ್ಟಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
ಭದ್ರಾವತಿ ತಾಲೂಕು
ಕಲ್ಲಿಹಾಳ್ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಬಿ.ಆರ್.ಪ್ರಾಜೆಕ್ಟ್ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು.
ಶಿಕಾರಿಪುರ ತಾಲೂಕು
ಹಾರೋಗೊಪ್ಪದ ಸರ್ಕಾರಿ ಸಂಯುಕ್ತ ಪ್ರೌಢ ಶಾಲೆ, ಹಾರೋಗೊಪ್ಪದ ಎಂ.ಸಿ.ಆರ್.ಪಿ ಕಾಲೋನಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಯರೆಕಟ್ಟೆಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ಹಿರೇಕೊರಲಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಅತ್ತಿಬೈಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ, ತಟ್ಟೆಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
ಸಾಗರ ತಾಲೂಕು
ಪಡವಗೋಡು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422