ಶಿವಮೊಗ್ಗ ಜಂಬೂ ಸವಾರಿಗೆ ಕ್ಷಣಗಣನೆ, ಆನೆಗಳು ರೆಡಿ

DASARA NEWS, 12 OCTOBER 2024 : ಶಿವಮೊಗ್ಗ ದಸರಾದ ಜಂಬೂ ಸವಾರಿಗೆ ಕ್ಷಣಗಣನೆ ಆರಂಭವಾಗಿದೆ. ಸಕ್ರೆಬೈಲು ಬಿಡಾರದ ಸಾಗರ ಆನೆ (Elephant) ನೇತೃತ್ವದ ಗಜಪಡೆ ಅಂಬಾರಿ ಹೊತ್ತು ಮೆರವಣಿಗೆಯಲ್ಲಿ ಭಾಗವಹಿಸಲಿದೆ. (ಈ ಸುದ್ದಿಯನ್ನು ಇನ್ನು 34 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಜಂಬೂ ಸವಾರಿ ಹಿನ್ನೆಲೆ ಸಕ್ರೆಬೈಲು ಬಿಡಾರದ ಸಾಗರ, ಬಹದ್ದೂರ್‌, ಬಾಲಣ್ಣ ಆನೆಗಳಿಗೆ ಅಲಂಕಾರ ಆರಂಭವಾಗಿದೆ. ವಾಸವಿ ಶಾಲೆ ಆವರಣದಲ್ಲಿ ಮೂರು ಆನೆಗಳಿಗೆ ಕಲಾವಿದರು ವಿವಿಧ ಬಣ್ಣಗಳಿಂದ ಅಲಂಕಾರ ಮಾಡಿದ್ದಾರೆ. ಇನ್ನು, ಜಂಬೂ ಸವಾರಿಯಲ್ಲಿ ಭಾಗವಹಿಸಲಿರುವ ಕಲಾ ತಂಡಗಳು ಕೂಡ ಸಿದ್ಧತೆ ಮಾಡಿಕೊಂಡಿವೆ.

Elephant-All-set-for-Dasara-in-Shimoga

ಇಂದು ಮಧ್ಯಾಹ್ನ 2.30ಕ್ಕೆ ಶಿವಪ್ಪನಾಯಕ ಅರಮನೆ ಮುಂಭಾಗ ನಂದಿ ಧ್ವಜಕ್ಕೆ ಪೂಜೆ ಸಲ್ಲಿಸಲಾಗುತ್ತದೆ. ಆ ನಂತರ ಸುಮಾರು 450 ಕೆ.ಜಿ. ತೂಕದ ಅಂಬಾರಿ ಹೊತ್ತು ಸಾಗರ ಆನೆ ಮೆರವಣಿಗೆಯಲ್ಲಿ ಭಾಗವಹಿಸಲಿದೆ.

ನೀವು ಲೇಖನದ ಮಧ್ಯಭಾಗದಲ್ಲಿದ್ದೀರಿ. ಈ ಸುದ್ದಿಯ ಮುಂದಿನ 1 ಪ್ಯಾರಾಗಳು ಕೆಳಗಿವೆ

ಇದನ್ನೂ ಓದಿ » ಭದ್ರಾವತಿಯಲ್ಲಿ ಮುಂದುವರೆದ ಮಳೆ, ಕಾಂಪೌಂಡ್‌ ಕುಸಿತ, ಮನೆಗಳು ಜಲಾವೃತ

ಗೂಗಲ್‌ನಲ್ಲಿ ಶಿವಮೊಗ್ಗ ಲೈವ್ ಸುದ್ದಿಗಳು ನಿಮಗೆ ಮೊದಲು ಸಿಗಬೇಕೆ? ಕೆಳಗಿನ ಬಟನ್ ಒತ್ತಿ:

Elephant-All-set-for-Dasara-in-Shimoga

Leave a Comment