ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 26 ಅಕ್ಟೋಬರ್ 2020
ಶಿವಮೊಗ್ಗ ದಸರಾ ಹಿನ್ನೆಲೆ ನಗರಕ್ಕೆ ಆಗಮಿಸಿದ ಗಜಪಡೆಗೆ ಮಹಾನಗರ ಪಾಲಿಕೆ ವತಿಯಿಂದ ಗಜಪೂಜೆ ನೆರವೇರಿಸಲಾಯಿತು. ವಿಜಯದಶಮಿ ಮೆರವಣಿಗೆಯಲ್ಲಿ ಗಜಪಡೆ ಭಾಗವಹಿಸಲಿವೆ.
ಸಕ್ರೆಬೈಲಿನ ಸಾಗರ, ಭಾನುಮತಿ, ಬಾಲಣ್ಣ ಆನೆಗಳು ಶಿವಮೊಗ್ಗ ದಸರಾದಲ್ಲಿ ಭಾಗವಹಿಸಲು ಆಗಮಿಸಿವೆ. ಕೋಟೆ ರಸ್ತೆಯ ವಾಸವಿ ಶಾಲೆ ಆವರಣದಲ್ಲಿ ಆನೆಗಳು ಉಳಿಯಲು ಜಾಗ ಕಲ್ಪಿಸಲಾಗಿದೆ.
ಮೇಯರ್ ನೇತೃತ್ವದಲ್ಲಿ ಗಜಪೂಜೆ
ಮೂರು ಆನೆಗಳಿಗೆ ಶಿವಮೊಗ್ಗ ಪಾಲಿಕೆ ಮೇಯರ್ ಸುವರ್ಣಾ ಶಂಕರ್ ನೇತೃತ್ವದಲ್ಲಿ ಗಜಪೂಜೆ ನೆರವೇರಿಸಲಾಯಿತು. ಉಪ ಮೇಯರ್ ಸುರೇಖಾ ಮುರಳೀಧರ್, ಆಡಳಿತ ಪಕ್ಷದ ನಾಯಕ ಚನ್ನಬಸಪ್ಪ, ವಿರೋಧ ಪಕ್ಷದ ನಾಯಕ ಯೋಗೇಶ್, ಕಾರ್ಪೊರೇಟರ್ಗಳು ಈ ವೇಳೆ ಉಪಸ್ಥಿತರಿದ್ದರು. ಆನೆಗಳಿಗೆ ಪೂಜೆ ಸಲ್ಲಿಸಿ, ಆರತಿ ಬೆಳಗಲಾಯಿತು.
ಮೆರವಣಿಗೆಯಲ್ಲಿ ಇರುತ್ತೆ ಗಜಪಡೆ
ವಿಜಯದಶಮಿ ಹಿನ್ನೆಲೆಯಲ್ಲಿ ಇವತ್ತು ಸಾಂಪ್ರದಾಯಿಕ ಮೆರವಣಿಗೆ ನಡೆಯಲಿದೆ. ಕೋಟೆ ಶ್ರೀ ಸೀತಾರಾಮಾಂಜನೇಯ ದೇವಸ್ಥಾನದ ಮುಂಭಾಗದಿಂದ ಮೆರೆವಣಿಗೆ ಹೊರಡಲಿದೆ. ಈ ಮೆರವಣಿಗೆಯಲ್ಲಿ ಗಜಪಡೆ ಭಾಗವಹಿಸಲಿದೆ. ರಾಮಣ್ಣ ಶ್ರೇಷ್ಠಿ ಪಾರ್ಕ್ ವರೆಗೆ ಆನೆಗಳು ಮೆರವಣಿಗೆಯಲ್ಲಿ ಇರಲಿವೆ.
ಆನೆ ನೋಡಲು ಜನವೋ ಜನ
ಆನೆಗಳು ಬಂದಿರುವ ವಿಚಾರ ತಿಳಿದು ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸವಿ ಶಾಲೆ ಆವರಣಕ್ಕೆ ಆಗಮಿಸಿದ್ದರು. ಮಕ್ಕಳ ಸಂಖ್ಯೆಯೆ ಹೆಚ್ಚಿತ್ತು. ಎಲ್ಲರು ಆನೆ ಬಳಿಗೆ ಬಂದು ಫೋಟೊ, ಸೆಲ್ಫಿ ಕ್ಲಿಕ್ಕಿಸಿಕೊಳ್ಳುತ್ತಿದ್ದರು. ಜನರನ್ನು ನಿಯಂತ್ರಿಸಲು ಪೊಲೀಸರನ್ನು ನಿಯೋಜಿಸಲಾಗಿತ್ತು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು





