ಕುವೆಂಪು ರಸ್ತೆ ಫುಟ್‌ ಪಾತ್‌ ಒತ್ತುವರಿ ತೆರವು, ಈಗ ಹೇಗಿದೆ ಸಂಚಾರ ವ್ಯವಸ್ಥೆ?

ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ

ನಗರದ ಕುವೆಂಪು ರಸ್ತೆಯಲ್ಲಿ ಫುಟ್‌ಪಾತ್ ಒತ್ತುವರಿ ಮಾಡಿಕೊಂಡು ಹಣ್ಣಿನ ಅಂಗಡಿಗಳನ್ನು ಇಡಲಾಗಿತ್ತು. ಇದರಿಂದ ಸಾರ್ವಜನಿಕರಿಗೆ ಮತ್ತು ವಾಹನ ಸವಾರರಿಗೆ ತೀವ್ರ ತೊಂದರೆಯಾಗುತ್ತಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಸಂಚಾರ ಪೊಲೀಸರು ಮತ್ತು ಮಹಾನಗರ ಪಾಲಿಕೆ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಒತ್ತುವರಿ ತೆರವುಗೊಳಿಸಿದ್ದಾರೆ.

Kuvempu-Road-Encroachment-Cleared

ಫುಟ್‌ಪಾತ್‌ನಲ್ಲಿದ್ದ ಅನಧಿಕೃತ ಅಂಗಡಿಗಳನ್ನು ತೆರವುಗೊಳಿಸಲಾಗಿದೆ. ಪಾದಚಾರಿಗಳು ಫುಟ್‌ಪಾತ್‌ನಲ್ಲಿ ಸುರಕ್ಷಿತವಾಗಿ ನಡೆಯಲು ಅನುಕೂಲವಾಗಿದೆ. ರಸ್ತೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕೂ ಅವಕಾಶವಾಗಿದೆ. ಇನ್ನು ಮುಂದೆ ಫುಟ್‌ಪಾತ್ ಮೇಲೆ ಯಾವುದೇ ವಸ್ತುಗಳನ್ನು ಇಟ್ಟು ಸಾರ್ವಜನಿಕರಿಗೆ ಅಡಚಣೆ ಮಾಡದಂತೆ ವ್ಯಾಪಾರಿಗಳಿಗೆ ಟ್ರಾಫಿಕ್‌ ಪೊಲೀಸ್‌ ಅಧಿಕಾರಿಗಳು ಸೂಚನೆ ನೀಡಿದರು.

ಟ್ರಾಫಿಕ್‌ ಪೊಲೀಸ್‌ ಇನ್ಸ್‌ಪೆಕ್ಟರ್‌ ಟಿ.ದೇವರಾಜ್‌ ಅವರು ಕಾರ್ಯಾಚರಣೆ ನೇತೃತ್ವ ವಹಿಸಿದ್ದರು. ಮಹಾನಗರ ಪಾಲಿಕೆ ಅಧಿಕಾರಿಗಳು, ಸಿಬ್ಬಂದಿ ಇದ್ದರು.