SHIVAMOGGA LIVE NEWS | 22 MARCH 2024
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ನಿದಿಗೆ ಬಳಿ ಹಳ್ಳಕ್ಕೆ ಲಾರಿ ಪಲ್ಟಿ
SHIMOGA : ಮಾಚೇನಹಳ್ಳಿ ಕೈಗಾರಿಕಾ ಪ್ರದೇಶದಕ್ಕೆ ಕಲ್ಲಿದ್ದಲು ತುಂಬಿಕೊಂಡು ತೆರಳುತ್ತಿದ್ದ ಲಾರಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ಉರುಳಿದೆ. ಶಿವಮೊಗ್ಗದ ನಿದಿಗೆ ಕೆರೆ ಏರಿ ಮೇಲೆ ಘಟನೆ ಸಂಭವಿಸಿದೆ. ಲಾರಿಯು ಮಂಗಳೂರಿನಿಂದ ಬರುತ್ತಿತ್ತು ಎಂದು ತಿಳಿದು ಬಂದಿದೆ. ಘಟನೆಯಲ್ಲಿ ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ.
ನವುಲೆಯಲ್ಲಿ ಅಪಘಾತ, ಕಾಲೇಜು ವಿದ್ಯಾರ್ಥಿ ಸಾವು
SHIMOGA : ಬೈಕ್ ಅಪಘಾತದಲ್ಲಿ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಯೊಬ್ಬ ಸ್ಥಳದಲ್ಲೆ ಸಾವನ್ನಪ್ಪಿದ್ದಾನೆ. ಶಿವಮೊಗ್ಗದ ನವುಲೆಯಲ್ಲಿ ಘಟನೆ ಸಂಭವಿಸಿದೆ. ಎರಡು ಬೈಕ್‌ಗಳು ಮತ್ತು ಹಾಲಿನ ವಾಹನದ ಮಧ್ಯೆ ಅಪಘಾತ ಸಂಭವಿಸಿದೆ. ಕಾಲೇಜು ವಿದ್ಯಾರ್ಥಿ, ಕಾಶಿಪುರದ ನಿವಾಸಿ ಪುನಿತ್ (20) ಮೃತ ಬೈಕ್ ಸವಾರ. ಕೆಟಿಎಂ ಬೈಕಿನಲ್ಲಿ ಕಾಲೇಜಿಗೆ ತೆರಳುತ್ತಿದ್ದ ಸಂದರ್ಭ ಅಪಘಾತ ಸಂಭವಿಸಿದೆ.
ಗಾಂಜಾ ಹಾವಳಿ ತಡೆಗೆ ರಕ್ಷಣಾಧಿಕಾರಿಗೆ ಮನವಿ
SHIMOGA : ನಗರದ ವಿವಿಧೆಡೆ ಗಾಂಜಾ ಹಾವಳಿ ಹೆಚ್ಚುತ್ತಿದೆ. ಇದನ್ನು ತಡೆಗಟ್ಟಬೇಕು ಎಂದು ಆಗ್ರಹಿಸಿ ರಾಷ್ಟ್ರೀಯ ಅಪರಾಧ ತಡೆ ಹಾಗೂ ಮಾನವ ಹಕ್ಕುಗಳ ಭಾರತ್ ಪರಿಷತ್ ಪದಾಧಿಕಾರಿಗಳು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಅವರಿಗೆ ಮನವಿ ಸಲ್ಲಿಸಿದರು. ಕೆಲವು ಕಾಲೇಜುಗಳ ಸುತ್ತಮುತ್ತ, ರಾಗಿಗುಡ್ಡ, ಟಿಪ್ಪು ನಗರದ ಎಡ ಮತ್ತು ಬಲಭಾಗ ಮುಂತಾದ ಕಡೆಗಳಲ್ಲಿ ಗಾಂಜಾ ಹಾವಳಿ ಹೆಚ್ಚುತ್ತಿದೆ. ಇದರಿಂದ ಯುವ ಜನರು ದಾರಿ ತಪ್ಪುವಂತಾಗಿದೆ. ಕೆಲವು ಕಾಲೇಜುಗಳ ಒಳಭಾಗದಲ್ಲೇ ಗಾಂಜಾ ಸರಬರಾಜು ಮಾಡಲಾಗುತ್ತಿದೆ. ಇದಕ್ಕೆ ಕೊನೆ ಹಾಡಬೇಕು ಎಂದು ಮನವಿಯಯಲ್ಲಿ ಒತ್ತಾಯಿಸಲಾಗಿದೆ. ಪರಿಷತ್ ಜಿಲ್ಲಾಧ್ಯಕ್ಷ ಅಬ್ದುಲ್ ರಹೀಮ್, ಮಹಿಳಾ ಘಟಕದ ಜಿಲ್ಲಾ ಕಾರ್ಯಾಧ್ಯಕ್ಷೆ ಕೌಸರ್‌ಬಾನು ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ಕೃಷಿ ಹೊಂಡಕ್ಕೆ ಬಿದ್ದು ಬಾಲಕಿ ಸಾವು | ಸೆಲ್ಫಿ ತೆಗೆಯುವ ವೇಳೆ ನದಿಗೆ ಬಿದ್ದು ಯುವಕ ಮೃತ್ಯು
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






