SHIVAMOGGA LIVE NEWS | SUICIDE | 16 ಮೇ 2022
ಎಂಜಿನಿಯರಿಂಗ್ ಕಾಲೇಜು ಹಾಸ್ಟೆಲ್’ನಲ್ಲಿ ವಿದ್ಯಾರ್ಥಿಯೊಬ್ಬ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಮಧ್ಯಾಹ್ನದ ವೇಳೆಗೆ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ಇದೆ.
ಕಲಬುರಗಿ ಮೂಲದ ಸಂದೀಪ್ ಮೃತ ವಿದ್ಯಾರ್ಥಿ. ಶಿವಮೊಗ್ಗದ ಜೆಎನ್ಎನ್ ಎಂಜಿನಿಯರಿಂಗ್ ಕಾಲೇಜಿನ ಹಾಸ್ಟೆಲ್’ನಲ್ಲಿ ಮಧ್ಯಾಹ್ನ ಘಟನೆ ಬೆಳಕಿಗೆ ಬಂದಿದೆ.
ಸಂದೀಪ್, ಕಂಪ್ಯೂಟರ್ ಸೈನ್ಸ್ ವಿಭಾಗದಲ್ಲಿ ಮೂರನೆ ಸೆಮಿಸ್ಟರ್ ಓದುತ್ತಿದ್ದ. ಮೂರ್ನಾಲ್ಕು ದಿನದ ಹಿಂದಷ್ಟೆ ಪರೀಕ್ಷೆ ಮುಗಿದಿತ್ತು. ಈ ಹಿನ್ನೆಲೆ ಸಂದೀಪನ ಸ್ನೇಹಿತರು ಊರಿಗೆ ತೆರಳಿದ್ದರು. ಆದರೆ ಸಂದೀಪ್ ಹಾಸ್ಟೆಲ್’ನಲ್ಲಿಯೆ ಉಳಿದುಕೊಂಡಿದ್ದ.
ಸಂದೀಪ್ ಇವತ್ತು ಕೊಠಡಿಯಿಂದ ಹೊರಗೆ ಬಾರದಿದ್ದರಿಂದ ಆತನ ಸ್ನೇಹಿತರು ಬಾಗಿಲು ತಟ್ಟಿದ್ದಾರೆ. ಕೊಠಡಿ ಬಾಗಿಲು ತೆಗೆಯದ ಇದ್ದಾಗ ಕಿಟಕಿಯಿಂದ ನೋಡಿದ್ದಾರೆ. ಸಂದೀಪ್ ನೇಣು ಬಿಗಿದುಕೊಂಡಿರುವುದು ಬೆಳಕಿಗೆ ಬಂದಿದೆ. ಕೊಠಡಿಯಲ್ಲಿದ್ದ ಫ್ಯಾನಿಗೆ ನೇಣು ಬಿಗಿದುಕೊಂಡು ಸಂದಿಪ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.
ವಿನೋಬನಗರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಇದನ್ನೂ ಓದಿ – ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ನಿಮ್ಮೂರು, ನಿಮ್ಮಾ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.