ಶಿವಮೊಗ್ಗ: ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸಂಚಾರ (flight services) ಮುಂದುವರಿಸುವಂತೆ ಸರ್ಕಾರದ ಮೇಲೆ ಒತ್ತಡ ತರಲು ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘ ಅಧ್ಯಕ್ಷ ಬಿ.ಗೋಪಿನಾಥ್ ಮತ್ತು ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಶಿವಮೊಗ್ಗ ಮತ್ತು ಬೆಂಗಳೂರು ನಡುವೆ ವಿಮಾನ ಸಂಚಾರ ಆರಂಭಿಸಿರುವುದು ಮಲೆನಾಡು ಪ್ರದೇಶಕ್ಕೆ ಅನುಕೂಲವಾಗಿದೆ. ಪ್ರಯಾಣಿಕರ ಸಂಖ್ಯೆಯು ಹೆಚ್ಚಿಗೆ ಇದೆ. ಲಾಭದಾಯಕ ಮಾರ್ಗವಾಗಿ ನಡೆಯುತ್ತಿದೆ. ಹೀಗಾಗಿ ವಿಮಾನಯಾನ ಸಂಪರ್ಕವನ್ನು ಇನ್ನಷ್ಟು ಬಲಪಡಿಸಬೇಕು ಎಂದು ಒತ್ತಾಯಿಸಿದರು.
ಸಂಘದ ಕಾರ್ಯದರ್ಶಿ ಎ.ಎಂ. ಸುರೇಶ್, ಸಹ ಕಾರ್ಯದರ್ಶಿ ಕೆ.ಎಸ್. ಸುಕುಮಾರ್, ಖಜಾಂಚಿ ಆರ್.ಮನೋಹರ, ನಿರ್ದೇಶಕರಾದ ಗಣೇಶ ಎಂ.ಅಂಗಡಿ, ಕೆ.ಬಿ.ಶಿವಕುಮಾರ್, ಉದಯಕುಮಾರ್, ರವಿ ಪ್ರಕಾಶ್ ಜನ್ನಿ, ವಿನೋದ್ ಕುಮಾರ್, ಪ್ರದೀಪ್ ವಿ.ಎಲಿ ಇತರರಿದ್ದರು.
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ.
ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ