ಶಿವಮೊಗ್ಗ ಲೈವ್.ಕಾಂ | SHIMOGA NEWS | 25 JANUARY 2021
ಶಿವಮೊಗ್ಗ ಜಿಲ್ಲೆಯಾದ್ಯಂತ ಇವತ್ತಿನಿಂದ ಇಆರ್‌ಎಸ್ಎಸ್ ವಾಹನಗಳು ರಸ್ತೆಗಿಳಿದಿವೆ. ಪೂರ್ವ ವಲಯ ಐಜಿಪಿ ರವಿ ಅವರು 18 ವಾಹನಗಳಿಗೆ ಚಾಲನೆ ನೀಡಿದರು.
ಜಿಲ್ಲಾ ರಕ್ಷಣಾಧಿಕಾರಿ ಕಚೇರಿ ಆವರಣದಲ್ಲಿ 18 ಇಆರ್‌ಎಸ್ಎಸ್ ವಾಹನಗಳಿಗೆ ಚಾಲನೆ ನೀಡಲಾಯಿತು. ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಹೆಚ್ಚು ವರಿ ರಕ್ಷಣಾಧಿಕಾರಿ ಹೆಚ್.ಟಿ.ಶೇಖರ್, ಎಲ್ಲಾ ಉಪ ವಿಭಾಗದ ಡಿವೈಎಸ್‍ಪಿಗಳು ಇದ್ದರು.
ಏನಿದು ಇಆರ್‌ಎಸ್‍ಎಸ್ ವಾಹನ?
ಯಾವುದೆ ತುರ್ತು ಸಂದರ್ಭದಲ್ಲಿ ತಕ್ಷಣಕ್ಕೆ ಸ್ಪಂದಿಸಲಿವೆ ಈ ಇಆರ್‌ಎಸ್‍ಎಸ್ ವಾಹನಗಳು.
ಅಗ್ನಿ ಅವಘಡ, ಅಪರಾಧ ಪ್ರಕರಣಗಳ ಸಂದರ್ಭದಲ್ಲಿ ಇಆರ್‌ಎಸ್‍ಎಸ್ ವಾಹನಗಳು ಸ್ಪಂದಿಸುತ್ತವೆ.
112 ನಂಬರ್ ಡಯಲ್ ಮಾಡಿದರೆ ಇಆರ್‌ಎಸ್‍ಎಸ್ ವಾಹನಗಳು ನೀವಿದ್ದ ಸ್ಥಳಕ್ಕೆ ಬರುತ್ತವೆ.
ನಂಬರ್ ಡಯಲ್ ಮಾಡಿದ ವ್ಯಕ್ತಿಗೆ ಎಸ್‍ಎಂಎಸ್ ಮೂಲಕ ಮಾಹಿತಿ ರವಾನೆಯಾಗುತ್ತದೆ.
ಅಪರಾಧ ತಡೆಯನ್ನು ಮತ್ತಷ್ಟು ಕಠಿಣಗೊಳಿಸಲು ಈ ಕ್ರಮ ಕೈಗೊಳ್ಳಲಾಗಿದೆ.
ಶಿವಮೊಗ್ಗ ಜಿಲ್ಲೆಯಲ್ಲಿ ವಿಭಾಗವಾರು ಇಆರ್‌ಎಸ್‍ಎಸ್ ವಾಹನಗಳನ್ನು ಹಂಚಿಕೆ ಮಾಡಲಾಗಿದೆ.
ಶಿವಮೊಗ್ಗ ಉಪ ವಿಭಾಗಕ್ಕೆ 6, ತೀರ್ಥಹಳ್ಳಿ, ಸಾಗರ, ಶಿಕಾರಿಪುರ ಉಪ ವಿಭಾಗಕ್ಕೆ ತಲಾ ಮೂರು ವಾಹನಗಳನ್ನು ನೀಡಲಾಗಿದೆ.
VIDEO REPORT
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
- ಶಿವಮೊಗ್ಗದ ಒಂದು ರೈಲು ಎರಡು ದಿನ ಭಾಗಶಃ ರದ್ದು, ಕಾರಣವೇನು?
- ಅಡಿಕೆ ಧಾರಣೆ | 20 ಜನವರಿ 2025 | ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್?
- ಮೆಗ್ಗಾನ್ ಆಸ್ಪತ್ರೆ ಬಳಿ ATMನಲ್ಲಿ ಹಣ ಬಿಡಿಸಿದ ರೈತ, ಮರುದಿನ ಕಾದಿತ್ತು ಆಘಾತ, ಆಗಿದ್ದೇನು?
- ಕುವೆಂಪು ವಿವಿಯಿಂದ ಮೂವರಿಗೆ ಗೌರವ ಡಾಕ್ಟರೇಟ್, ಯಾರಿಗೆಲ್ಲ ಪ್ರದಾನ ಮಾಡಲಾಗ್ತಿದೆ?
- ಶಿವಮೊಗ್ಗ ಜಿಲ್ಲೆ, ಇವತ್ತು ಯಾವ್ಯಾವ ತಾಲೂಕಿನಲ್ಲಿ ಎಷ್ಟಿರುತ್ತೆ ತಾಪಮಾನ?
- ಮಕ್ಕಳಿಗೆ ಚಿನ್ನದ ಸರ ಹಾಕುವ ಪೋಷಕರೆ ಹುಷಾರ್, ಶಿವಮೊಗ್ಗದಲ್ಲಿ ಎರಡು ಪ್ರತ್ಯೇಕ ಕೇಸ್ ದಾಖಲು