ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 5 MAY 2021
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೆಡ್ ಬ್ಲಾಕಿಂಗ್ ದಂಧೆಯ ಹಿಂದೆ ಮುಸ್ಲಿಂ ಸಂಘಟನೆಯ ಕೈವಾಡದ ಬಗ್ಗೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅನುಮಾನ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಬೆಡ್ ಬ್ಲಾಕಿಂಗ್ ದಂಧೆಯಲ್ಲಿ ಅತಿ ಹೆಚ್ಚು ಮುಸ್ಲಿಂ ಸಮುದಾಯದವರಿದ್ದಾರೆ. ಹಾಗಾಗಿ ಇದರ ಹಿಂದೆ ಯಾವುದೋ ಮುಸ್ಲಿಂ ಸಂಘಟನೆ ಕೈವಾಡ ಇರುವ ಬಗ್ಗೆ ಅನುಮಾನವಿದೆ. ಈ ಕೃತ್ಯದಲ್ಲಿ ಯಾರಿದ್ದಾರೆ ಅನ್ನುವುದು ತನಿಖೆಯಿಂದ ತಿಳಿಬೇಕಿದೆ ಎಂದರು.
ಕೆಟ್ಟ ಹೆಸರು ತರಲು ಪ್ರಯತ್ನ
ಬೆಡ್ ಬ್ಲಾಕಿಂಗ್ ಮಾಡುವ ಮೂಲಕ ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಪ್ರಯತ್ನಿಸಲಾಗುತ್ತಿದೆ. ಸಂಸದ ತೇಜಸ್ವಿ ಸೂರ್ಯ, ರವಿ ಸುಬ್ರಹ್ಮಣ್ಯ, ಸತೀಶ್ ರೆಡ್ಡಿಯವರು ಇದನ್ನು ಬಯಲಿಗೆಳೆದಿದ್ದಾರೆ. ಇದರ ಹಿಂದೆ ಇರುವ ವ್ಯಕ್ತಿಗಳು ಅಥವಾ ಸಂಘಟನೆಯನ್ನು ಪತ್ತೆ ಹಚ್ಚಿ ಶಿಕ್ಷೆಗೊಳಪಡಿಸಲಾಗುತ್ತದೆ ಎಂದು ಈಶ್ವರಪ್ಪ ಹೇಳಿದರು.
ಸ್ಯಾನಿಟೈಸ್ ಮಾಡಿದ ಸಚಿವರು
ಸೇವಾ ಭಾರತಿ ಮತ್ತು ಕೋವಿಡ್ ಸುರಕ್ಷಾ ಪಡೆ ವತಿಯಿಂದ ಶಿವಮೊಗ್ಗ ನಗರದಾದ್ಯಂತ ಸ್ಯಾನಿಟೈಸ್ ಮಾಡಲಾಗುತ್ತಿದೆ. ಶಿವಪ್ಪನಾಯಕ ಪ್ರತಿಮೆ ಬಳಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಸ್ಯಾನಿಟೈಸ್ ಮಾಡುವ ಮೂಲಕ ಕಾರ್ಯಕ್ಕೆ ಚಾಲನೆ ನೀಡರು.
ಮೇಯರ್ ಸುನೀತಾ ಅಣ್ಣಪ್ಪ, ಉಪ ಮೇಯರ್ ಗನ್ನಿ ಶಂಕರ್, ಪ್ರಮುಖರಾದ ಕೆ.ಈ.ಕಾಂತೇಶ್ ಸೇರಿದಂತೆ ಹಲವರು ಇದ್ದರು.