ಶಿವಮೊಗ್ಗ ಲೈವ್.ಕಾಂ | SHIMOGA NEWS | 11 JUNE 2021
ದೇಶದ ಪ್ರತಿಯೊಬ್ಬರಿಗೂ ಉಚಿತ ಲಸಿಕೆ, ಉಚಿತ ರೇಷನ್ ನೀಡಿದ ಮೊದಲ ಪ್ರಧಾನಿ ನರೇಂದ್ರ ಮೋದಿ. ಅವರು ಈ ದೇಶದ ಪ್ರಧಾನಿ ಆಗಿರುವುದು ನಮ್ಮೆಲ್ಲರ ಪುಣ್ಯ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಪ್ರತಿಯೊಬ್ಬರಿಗೂ ಲಸಿಕೆ ನೀಡುವುದಾಗಿ ಘೋಷಿಸಿದ್ದಾರೆ. ನವೆಂಬರ್ ತಿಂಗಳವರೆಗೆ ಉಚಿತ ರೇಷನ್ ನೀಡಲಾಗುತ್ತದೆ. ಹೀಗೆ ಉಚಿತ ಲಸಿಕೆ, ಉಚಿತ ರೇಷನ್ ಕೊಡುತ್ತಿರುವ ಮೊದಲ ಪ್ರಧಾನಿ ಇವರು. ಪ್ರಪಂಚದಲ್ಲಿ ಆಗದಿರುಷ್ಟು ಒಳ್ಳೆ ಕೆಲಸವನ್ನು ಮೋದಿ ಮಾಡಿದ್ದಾರೆ ಎಂದರು.
ವಿರೋಧ ಪಕ್ಷ ವಿಫಲ
ಲಸಿಕೆ ಪೂರೈಕೆ ವಿಚಾರವಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾಂಗ್ರೆಸ್ ಪಕ್ಷದ ಮುಖಂಡರು ಆರೋಪಿಸುತ್ತಿದ್ದಾರೆ. ಸರ್ಕಾರ ವಿಫಲವಾಗಿದೆ ಎಂದು ಟೀಕಿಸುವ ಇವರುಗಳೆ ವಿರೋಧ ಪಕ್ಷದಲ್ಲಿರಲು ವಿಫಲವಾಗಿದ್ದಾರೆ. ಮೊದಲು ಲಸಿಕೆ ವಿರುದ್ಧ ಅಪಪ್ರಚಾರ ಮಾಡಿದ್ದರು. ಈಗ ಎಲ್ಲರಿಗು ಲಸಿಕೆ ಸಿಗಲಿದೆ. ಸಿದ್ದರಾಮಯ್ಯ ಅವರಿಗೆ ಬುದ್ದಿ ಇಲ್ಲ ಅಂತಾ ಇದೆ ಕಾರಣಕ್ಕೆ ಹೇಳುತ್ತಿದ್ದೇನೆ ಎಂದರು.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]