ಶಿವಮೊಗ್ಗ ಲೈವ್.ಕಾಂ | SHIMOGA NEWS | 28 ಅಕ್ಟೋಬರ್ 2021
ದಿನೇ ದಿನೇ ಪೆಟ್ರೋಲ್, ಡಿಸೇಲ್ ದರ ಏರಿಕೆಯಾಗುತ್ತಿದೆ. ಇದರಿಂದ ಅಗತ್ಯ ವಸ್ತುಗಳ ಬೆಲೆ ಹೆಚ್ಚಳವಾಗುತ್ತಿದ್ದು, ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಈ ಮಧ್ಯೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯಾಗಿಲ್ಲವೇನು ಎಂದು ಪ್ರಶ್ನಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಸರ್ಕಾರ ಇದ್ದಾಗ ಪೆಟ್ರೋಲ್, ಡಿಸೇಲ್ ಬೆಲೆ ಏರಲೆ ಇಲ್ಲವೇನು. ಆಗಲೂ ಏರಿದೆ. ಈಗಲೂ ಏರುತ್ತಿದೆ. ದರ ಎಷ್ಟರ ಮಟ್ಟಿಗೆ ಇಳಿಕೆ ಮಾಡಬೇಕು ಅನ್ನವುದನ್ನು ಕೇಂದ್ರ ಸರ್ಕಾರ ಯೋಚನೆ ಮಾಡುತ್ತಿದೆ ಎಂದರು.
ಸಚಿವ ಸಂಪುಟದಲ್ಲಿ ನಿರ್ಧಾರ
ತೈಲೋತ್ಪನ್ನಗಳ ಮೇಲಿನ ತೆರಿಗೆ ಕಡಿತದ ವಿಚಾರ ಕುರಿತು ಕೇಳಿದಾಗ, ಈ ಕುರಿತು ಸಚಿವ ಸಂಪುಟದಲ್ಲಿ ತೀರ್ಮಾನ ಮಾಡಬೇಕಾಗುತ್ತದೆ. ಆ ಕುರಿತು ಚಿಂತನೆ ನಡೆಸಲಾಗುತ್ತದೆ. ಜನರಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಏನೇನು ಕ್ರಮ ಕೈಗೊಳ್ಳಬೇಕೋ ಆ ಬಗ್ಗೆ ಚಿಂತಿಸಲಾಗುತ್ತಿದೆ ಎಂದು ಸಚಿವ ಈಶ್ವರಪ್ಪ ತಿಳಿಸಿದರು.