ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 23 APRIL 2021
ಸಾಯಬೇಕೋ, ವ್ಯಾಪಾರ ಮಾಡಬೇಕೋ ತೀರ್ಮಾನಿಸಲಿ. ಬದುಕಿದ್ದರೆ ತಾನೆ ವ್ಯಾಪಾರ ಮಾಡಲು ಆಗುವುದು. ದೆಹಲಿ, ಬೆಂಗಳೂರು ಮಟ್ಟಕ್ಕೆ ಉಳಿದ ಜಿಲ್ಲೆಗಳು ಹೋಗಬಾರದು ಅನ್ನುವುದು ಸರ್ಕಾರದ ಉದ್ದೇಶವಾಗಿದೆ ಎಂದು ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.
ಗಾಂಧಿ ಬಜಾರ್ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕೆ.ಎಸ್.ಈಶ್ವರಪ್ಪ, ಲಾಕ್ ಡೌನ್ ಬೇಡ ಅನ್ನುವುದು ರಾಜ್ಯ ಸರ್ಕಾರದ ನಿಲುವು. ವ್ಯತಿರಿಕ್ತ ಪರಿಣಾಮ ಆಗಬಾರದು ಅನ್ನುವ ಕಾರಣಕ್ಕೆ ಲಾಕ್ ಡೌನ್ ಮಾಡಿಲ್ಲ. ಆದರೆ ಎಲ್ಲರೂ ಜಾಗೃತರಾಗಿರಬೇಕು ಎಂದರು.
ಮನೆಯವರ ಜೊತೆ ಸಂತೋಷವಾಗಿರಬೇಕು
ವ್ಯಾಪಾರಕ್ಕೆ ನಿರ್ಬಂಧ ವಿಧಿಸಿದ್ದಕ್ಕೆ ಆಕ್ರೋಶ ವ್ಯಕ್ತವಾಗಿರುವ ಕುರಿತು ಕೇಳಿದ ಪ್ರಶ್ನೆಗೆ, ಸ್ವಲ್ಪ ದಿನ ವ್ಯಾಪಾರ ನಿಲ್ಲಿಸಿ. ಮನೆಯವರ ಜೊತೆಗೆ ಸಂತೋಷವಾಗಿ ಇರೋದು ಒಳ್ಳೆಯದು. ಕೋವಿಡ್ ಆಗಿ ಆಸ್ಪತ್ರೆಗೆ ಹೋಗಿ ಸತ್ತರೆ ಯಾರು ಜವಾಬ್ದಾರಿ. ದೆಹಲಿಯಲ್ಲಿ ಸಂಪೂರ್ಣ ಲಾಕ್ಡೌನ್ ಮಾಡಲಾಗಿದೆ. ಆದರೂ ಅಲ್ಲಿ ಭದ್ರತೆ ಇಲ್ಲ. ಬೆಡ್ ಇಲ್ಲ. ಆಕ್ಸಿಜನ್ ಇಲ್ಲ. ಇಂತಹ ಸಂದರ್ಭದಲ್ಲಿ ನಾವು ಜಾಗೃತರಾಗಬೇಕು ಎಂದು ನಿರ್ಬಂಧ ವಿಧಿಸಲಾಗಿದೆ ಎಂದರು.
ಇದನ್ನೂ ಓದಿ – ಮಾಸ್ಕ್ ಹಿಡಿದು ಗಾಂಧಿ ಬಜಾರ್ನಲ್ಲಿ ಸಚಿವ ಈಶ್ವರಪ್ಪ ಪಾದಯಾತ್ರೆ
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422