ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 7 MAY 2024
ELECTION NEWS : ಲೋಕಸಭೆ ಚುನಾವಣೆಯಲ್ಲಿ ತಾವು ಗೆಲ್ಲಬಹುದು ಎಂಬ ಕಾರಣಕ್ಕೆ ತಮ್ಮ ವಿರುದ್ಧ ಅಪಪ್ರಚಾರ ನಡೆಸಲಾಗುತ್ತಿದೆ ಎಂದು ಪಕ್ಷೇತರ ಅಭ್ಯರ್ಥಿ ಕೆ.ಎಸ್.ಈಶ್ವರಪ್ಪ ಆರೋಪಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಈಶ್ವರಪ್ಪ, ಈ ಹಿಂದೆ ರಾಘವೇಂದ್ರ ಪರ ಪ್ರಚಾರ ಮಾಡಿದ್ದ ವಿಡಿಯೋವನ್ನು ಈಗ ವೈರಲ್ ಮಾಡಲಾಗುತ್ತಿದೆ. ತಮಗೆ ಜನ ಬೆಂಬಲ ವ್ಯಕ್ತವಾಗುತ್ತಿದ್ದಂತೆಯೇ ಈ ರೀತಿ ಅಪ ಪ್ರಚಾರ ನಡೆಸಲಾಗುತ್ತಿದೆ. ಇದು ನೀಚತನದ ರಾಜಕೀಯ ಷಡ್ಯಂತ್ರ. ಆದರೆ ತಾವು ಯಾವುದೇ ಕಾರಣಕ್ಕೂ ಚುನಾವಣ ಕಣದಿಂದ ಹಿಂದಕ್ಕೆ ಸರಿದಿಲ್ಲ ಎಂದು ತಿಳಿಸಿದರು.
ಲೋಕಸಭೆ ಚುನಾವಣೆಯಲ್ಲಿ ನಿರೀಕ್ಷೆಗೆ ಮೀರಿ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರು, ಎಲ್ಲ ವರ್ಗದ ಜನರು ತಮ್ಮೊಂದಿಗೆ ಇದ್ದಾರೆ. ಆದ್ದರಿಂದ ಈ ಬಾರಿ ತಾನು ಗೆಲ್ಲುತ್ತೇನೆ ಎಂಬ ಈಶ್ವರಪ್ಪ ವಿಶ್ವಾಸ ವ್ಯಕ್ತಪಡಿಸಿದರು.
ಇನ್ನು, ಈಶ್ವರಪ್ಪ, ಪತ್ನಿ ಜಯಲಕ್ಷ್ಮಿ, ಪುತ್ರ ಕೆ.ಈ.ಕಾಂತೇಶ್ ಸೇರಿದಂತೆ ಕುಟುಂಬದ ಸದಸ್ಯರ ಜೊತೆಗೆ ತೆರಳಿ ಮತದಾನ ಮಾಡಿದರು.
ಇದನ್ನೂ ಓದಿ – ಶಿವಮೊಗ್ಗದಲ್ಲಿ ವೋಟ್ ಹಾಕಿದರೆ ಸಿಗುತ್ತೆ ಸಿಂಹಾಸನ, ಕಿರೀಟ, ರಾಜ ಪೋಷಾಕಿನಲ್ಲಿ ಕಂಗೊಳಿಸ್ತಿದ್ದಾರೆ ಸಿಬ್ಬಂದಿ
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






