ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 7 ಆಗಸ್ಟ್ 2020
ಮಳೆಯಿಂದ ಮನೆ ಹಾನಿಯಾದರೆ ಸಂತ್ರಸ್ಥ ಕುಟುಂಬಕ್ಕೆ ಕೂಡಲೆ ಪರಿಹಾರ ಧನ ವಿತರಿಸಬೇಕು ಎಂದು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಳೆ ಹಾನಿ ಮತ್ತು ತುರ್ತು ಪರಿಹಾರ ಕುರಿತು ಜಿಲ್ಲಾಮಟ್ಟದ ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಸಚಿವ ಈಶ್ವರಪ್ಪ, ಸಂತ್ರಸ್ಥ ಕುಟುಂಬಕ್ಕೆ ತುರ್ತು ಕ್ರಮಕ್ಕಾಗಿ ಹತ್ತು ಸಾವಿರ ರೂ. ಪರಿಹಾರಧನ ಕೊಡಬೇಕು. ಭಾಗಶಃ ಅಥವಾ ಪೂರ್ಣ ಪ್ರಮಾಣದಲ್ಲಿ ಮನೆ ಹಾನಿಯಾಗಿದ್ದರೆ ಐದು ಲಕ್ಷ ರೂ. ಪರಿಹಾರಧನದಲ್ಲಿ ಒಂದು ಲಕ್ಷ ರೂ. ಪರಿಹಾರಧನವನ್ನು ಕೂಡಲೆ ಬಿಡುಗಡೆ ಮಾಡಬೇಕು ಎಂದು ಸೂಚಿಸಿದರು.
ಇದಕ್ಕೂ ಮೊದಲು ಕಳೆದ ವರ್ಷ ನೆರೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿದ ಸಚಿವ ಈಶ್ವರಪ್ಪ, ಈ ಬಾರಿ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಶಾಸಕ ಆರಗ ಜ್ಞಾನೇಂದ್ರ, ಮೇಯರ್ ಸುವರ್ಣಶಂಕರ್, ಉಪಮೇಯರ್ ಸುರೇಖಾ ಮುರಳೀಧರ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಒ ವೈಶಾಲಿ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಸಭೆಯಲ್ಲಿದ್ದರು.
https://www.facebook.com/liveshivamogga/videos/1696192260538777/?t=0
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422