‘ಸಿದ್ದರಾಮಯ್ಯ ಪತ್ನಿ ಸೇರಿ ಎಲ್ಲ ಮಹಿಳೆಯರು ಬುರ್ಖಾ ಹಾಕುವಂತಹ ಪರಿಸ್ಥಿತಿ ಬರಲಿದೆ’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದುವರೆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಪತ್ನಿ ಸೇರಿ ಎಲ್ಲ ಮಹಿಳೆಯರು ಬುರ್ಖಾ ಹಾಕುವಂತಹ ಸ್ಥಿತಿ ಬರಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು (Criticize).

ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಖಂಡಿಸಿ ಶಿವಪ್ಪನಾಯಕ ಪ್ರತಿಮೆ ಮುಂಭಾಗ ರಾಷ್ಟ್ರಭಕ್ತರ ಬಳಗ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಈಶ್ವರಪ್ಪ ಮಾತನಾಡಿದರು.

ಈಶ್ವರಪ್ಪ ಏನೇನೆಲ್ಲ ಹೇಳಿದರು? ಇಲ್ಲಿದೆ 4 ಪಾಯಿಂಟ್ಸ್‌

point-1ಮುಂದೆ ಮುಸ್ಲಿಂ ಬೆಂಬಲಿತ ಸರ್ಕಾರ ತರುವ ಉದ್ದೇಶದಿಂದ ವಸತಿ ಯೋಜನೆಗಳಲ್ಲಿ ಶೇ.15ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಇದರ ವಿರುದ್ಧ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ. ಶೇ.15ರಷ್ಟು ಮೀಸಲಾತಿ ಬಿಲ್ ಪಾಸ್ ಮಾಡಲು ಬಿಡಲ್ಲ ಎಂದರು.

point-2ಮುಸ್ಲಿಮರ ಮಕ್ಕಳಿಗೆ ಶಾದಿ ಭಾಗ್ಯ ನೀಡಿದ್ದಾರೆ. ಹಿಂದೂ ಹೆಣ್ಮಕ್ಕಳ ಮದುವೆಗೆ ಒಂದು ರುಪಾಯಿಯನ್ನು ನೀಡಿಲ್ಲ. ಮುಸ್ಲಿಮರ ಮಕ್ಕಳ ಮದರಸಾಗಳಿಗೆ ಅನುದಾನ ಕೊಟ್ಟಿದ್ದಾರೆ. ಆದರೆ ನಮ್ಮ ಮಕ್ಕಳು ಓದುತ್ತಿರುವ ಸರ್ಕಾರಿ ಶಾಲೆಗಳು ಸೋರುತ್ತಿವೆ.

Rashtrabakthara-Balaga-protest-KS-Eshwarappa

point-3ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕುಳಿತು ಹಿಂದುಗಳನ್ನು ತುಳಿಯುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಣ್ಣು ಇಲ್ಲ, ಹೃದಯವು ಇಲ್ಲ ಎಂದು ಟೀಕಿಸಿದರು. ಇದೇ ಮಾದರಿ ತಾತ್ಸಾರ ಮುಂದುವರೆದರೆ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲಾಗುತ್ತದೆ ಎಂದು ಎಚ್ಚರಿಸಿದರು.  

point-4ನರೇಂದ್ರ ಮೋದಿ ವಿಶ್ವನಾಯಕ. ಆದರೆ ಸಿದ್ದರಾಮಯ್ಯ ಪಾಕಿಸ್ತಾನದ ನಾಯಕ. ಅಲ್ಲಿಯ ಟಿವಿಗಳಲ್ಲು ಅವರೆ ಕಾಣಿಸುತ್ತಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಜಾಗದಲ್ಲಿ ಔರಂಗಜೇಬ್ ಪ್ರತಿಮೆ ಬರಬಹುದು ಎಂದರು ಆಕ್ರೋಶ ವ್ಯಕ್ತಪಡಿಸಿದರು.

rashtra

ಧರ್ಮಾಧಾರಿತ ಮೀಸಲು ನೀಡಬಾರದು ಎಂದು ಸಂವಿಧಾನದಲ್ಲಿ ಇದೆ. ಅದನ್ನು ಗಾಳಿಗೆ ತೂರಿ ಸಿದ್ದರಾಮಯ್ಯ ಮುಸ್ಲಿಮರಿಗೆ ಶೇ.15 ಮೀಸಲು ನೀಡುವ ಮೂಲಕ ಹಿಂದುಗಳಿಗೆ ಅನ್ಯಾಯ ಮಾಡಿದ್ದಾರೆ.‌ ರಾಜ್ಯದಲ್ಲಿ ಸೂಪರ್ ಸಿಎಂ ಆದ ಜಮೀರ್ ಅಹಮದ್ ಮಾತು ನಡೆಯುತ್ತಿದೆ.ಕೆ.ಈ.ಕಾಂತೇಶ್‌, ರಾಷ್ಟ್ರಭಕ್ತರ ಬಳಗದ ನಾಯಕ

ಇದಕ್ಕೂ ಮೊದಲು ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಶಿವಪ್ಪನಾಯಕ ಪ್ರತಿಮೆವರೆಗು ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಮೆರವಣಿಗೆ ನಡೆಸಿದರು.

ಪ್ರಮುಖರಾದ ಶೇಷಾಚಲ, ರಮೇಶ್‌ ಬಾಬು, ಸುವರ್ಣ ಶಂಕರ್‌, ಮೋಹನ್‌ ಜಾದವ್‌, ಮಹಾಲಿಂಗಯ್ಯ ಶಾಸ್ತ್ರಿ, ವಾಸುದೇವ್‌ ಸೇರಿ ಹಲವರು ಇದ್ದರು.

https://chat.whatsapp.com/JPJ0lTQsTKf365Fqu6Q7cd
ಈ ಫೋಟೊ ಮೇಲೆ ಕ್ಲಿಕ್‌ ಮಾಡಿ, ಶಿವಮೊಗ್ಗ ಲೈವ್‌ ವಾಟ್ಸಪ್‌ ಗ್ರೂಪ್‌ ಸೇರಿರಿ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಂಬುಲೆನ್ಸ್‌ ಪರಿಶೀಲಿಸಿದ ಪೊಲೀಸ್‌, ಚಾಲಕನಿಗೆ ಕಾದಿತ್ತು ಶಾಕ್

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : June 25, 2025

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment