ಶಿವಮೊಗ್ಗ: ರಾಜ್ಯದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಮುಂದುವರೆದರೆ ರಾಜ್ಯದಲ್ಲಿ ಸಿದ್ದರಾಮಯ್ಯ ಪತ್ನಿ ಸೇರಿ ಎಲ್ಲ ಮಹಿಳೆಯರು ಬುರ್ಖಾ ಹಾಕುವಂತಹ ಸ್ಥಿತಿ ಬರಲಿದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದರು (Criticize).
ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತರಿಗೆ ಮೀಸಲಾತಿ ಹೆಚ್ಚಿಸಿರುವುದನ್ನು ಖಂಡಿಸಿ ಶಿವಪ್ಪನಾಯಕ ಪ್ರತಿಮೆ ಮುಂಭಾಗ ರಾಷ್ಟ್ರಭಕ್ತರ ಬಳಗ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಈಶ್ವರಪ್ಪ ಮಾತನಾಡಿದರು.
ಈಶ್ವರಪ್ಪ ಏನೇನೆಲ್ಲ ಹೇಳಿದರು? ಇಲ್ಲಿದೆ 4 ಪಾಯಿಂಟ್ಸ್
ಮುಂದೆ ಮುಸ್ಲಿಂ ಬೆಂಬಲಿತ ಸರ್ಕಾರ ತರುವ ಉದ್ದೇಶದಿಂದ ವಸತಿ ಯೋಜನೆಗಳಲ್ಲಿ ಶೇ.15ರಷ್ಟು ಮೀಸಲಾತಿ ಕಲ್ಪಿಸಲಾಗಿದೆ. ಇದರ ವಿರುದ್ಧ ರಾಜ್ಯಪಾಲರಿಗೆ ಮನವಿ ಸಲ್ಲಿಸುತ್ತೇವೆ. ಶೇ.15ರಷ್ಟು ಮೀಸಲಾತಿ ಬಿಲ್ ಪಾಸ್ ಮಾಡಲು ಬಿಡಲ್ಲ ಎಂದರು.
ಮುಸ್ಲಿಮರ ಮಕ್ಕಳಿಗೆ ಶಾದಿ ಭಾಗ್ಯ ನೀಡಿದ್ದಾರೆ. ಹಿಂದೂ ಹೆಣ್ಮಕ್ಕಳ ಮದುವೆಗೆ ಒಂದು ರುಪಾಯಿಯನ್ನು ನೀಡಿಲ್ಲ. ಮುಸ್ಲಿಮರ ಮಕ್ಕಳ ಮದರಸಾಗಳಿಗೆ ಅನುದಾನ ಕೊಟ್ಟಿದ್ದಾರೆ. ಆದರೆ ನಮ್ಮ ಮಕ್ಕಳು ಓದುತ್ತಿರುವ ಸರ್ಕಾರಿ ಶಾಲೆಗಳು ಸೋರುತ್ತಿವೆ.
ಸಿದ್ದರಾಮಯ್ಯ ಅವರು ವಿಧಾನಸೌಧದಲ್ಲಿ ಕುಳಿತು ಹಿಂದುಗಳನ್ನು ತುಳಿಯುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಕಣ್ಣು ಇಲ್ಲ, ಹೃದಯವು ಇಲ್ಲ ಎಂದು ಟೀಕಿಸಿದರು. ಇದೇ ಮಾದರಿ ತಾತ್ಸಾರ ಮುಂದುವರೆದರೆ ಸಿದ್ದರಾಮಯ್ಯ ಅವರನ್ನು ಕೆಳಗಿಳಿಸಲಾಗುತ್ತದೆ ಎಂದು ಎಚ್ಚರಿಸಿದರು.
ನರೇಂದ್ರ ಮೋದಿ ವಿಶ್ವನಾಯಕ. ಆದರೆ ಸಿದ್ದರಾಮಯ್ಯ ಪಾಕಿಸ್ತಾನದ ನಾಯಕ. ಅಲ್ಲಿಯ ಟಿವಿಗಳಲ್ಲು ಅವರೆ ಕಾಣಿಸುತ್ತಾರೆ. ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಶಿವಮೊಗ್ಗದ ಶಿವಪ್ಪನಾಯಕ ಪ್ರತಿಮೆ ಜಾಗದಲ್ಲಿ ಔರಂಗಜೇಬ್ ಪ್ರತಿಮೆ ಬರಬಹುದು ಎಂದರು ಆಕ್ರೋಶ ವ್ಯಕ್ತಪಡಿಸಿದರು.
ಇದಕ್ಕೂ ಮೊದಲು ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಶಿವಪ್ಪನಾಯಕ ಪ್ರತಿಮೆವರೆಗು ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಮೆರವಣಿಗೆ ನಡೆಸಿದರು.
ಪ್ರಮುಖರಾದ ಶೇಷಾಚಲ, ರಮೇಶ್ ಬಾಬು, ಸುವರ್ಣ ಶಂಕರ್, ಮೋಹನ್ ಜಾದವ್, ಮಹಾಲಿಂಗಯ್ಯ ಶಾಸ್ತ್ರಿ, ವಾಸುದೇವ್ ಸೇರಿ ಹಲವರು ಇದ್ದರು.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಆಂಬುಲೆನ್ಸ್ ಪರಿಶೀಲಿಸಿದ ಪೊಲೀಸ್, ಚಾಲಕನಿಗೆ ಕಾದಿತ್ತು ಶಾಕ್
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್‌ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್‌ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200