ಶಿವಮೊಗ್ಗದಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ, ಹೈಕಮಾಂಡ್‌ ವಿರುದ್ಧ ಅಭಿಮಾನಿಗಳ ಸಿಟ್ಟು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 11 APRIL 2023

SHIMOGA : ಚುನಾವಣಾ ರಾಜಕೀಯದಿಂದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ನಿವೃತ್ತಿ ಘೋಷಣೆ ಮಾಡುತ್ತಿದ್ದಂತೆ ಅವರ ಬೆಂಬಲಿಗರು ಆಕ್ರೋಶ (Angry) ವ್ಯಕ್ತಪಡಿಸಿದ್ದಾರೆ. ನಿವೃತ್ತಿ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ. ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ತಮ್ಮ ಸಿಟ್ಟು ತೋರಿಸಿದ್ದಾರೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

Party-Workers-angry-over-Eshwarappa-Resignation

ಮಲ್ಲೇಶ್ವರ ನಗರದಲ್ಲಿರುವ ಕೆ.ಎಸ್‌.ಈಶ್ವರಪ್ಪ ಅವರ ಮನೆ ಬಳಿ ಜಮಾಯಿಸಿದ್ದ ಕಾರ್ಯಕರ್ತರು, ನಿವೃತ್ತಿ ನಿರ್ಧಾರ ಕೈ ಬಿಡಬೇಕು ಎಂದು ಒತ್ತಾಯಿಸಿದರು.

ಈಶ್ವರಪ್ಪ ಸುತ್ತುವರಿದ ಅಭಿಮಾನಿಗಳು

ಮಧ್ಯಾಹ್ನದ ವೇಳೆಗೆ ಕೆ.ಎಸ್.ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವ ವಿಚಾರ ಮಾಧ್ಯಮಗಳಲ್ಲಿ ಭಿತ್ತರವಾಯಿತು. ಸುದ್ದಿ ತಿಳಿದು ಅವರ ಅಭಿಮಾನಿಗಳು ಗಲಿಬಿಲಿಗೊಂಡರು. ಸ್ಪಷ್ಟನೆಗಾಗಿ ಕೆ.ಎಸ್.ಈಶ್ವರಪ್ಪ ಅವರ ಮನೆ ಬಳಿ ದೌಡಾಯಿಸಿದರು. ಸಂಜೆ ವೇಳೆಗೆ ತಮ್ಮ ಮನೆ ಮುಂದೆ ಕೆ.ಎಸ್.ಈಶ್ವರಪ್ಪ ಅವರು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸಿರುವುದಾಗಿ ತಿಳಿಸಿದರು. ಇದಾಗುತ್ತಿದ್ದಂತೆ ಅಭಿಮಾನಿಗಳು ಈಶ್ವರಪ್ಪ ಅವರಿಗೆ ಮುತ್ತಿಗೆ ಹಾಕಿದರು.

ಇದನ್ನೂ ಓದಿ – ಶಿವಮೊಗ್ಗದಲ್ಲಿ ಮಾಜಿ ಸಚಿವ ಈಶ್ವರಪ್ಪ ಮನೆ ಮುಂದೆ ಜಮಾಯಿಸಿದ ಅಭಿಮಾನಿಗಳು

ತಮ್ಮ ನಿರ್ಧಾರ ಬದಲಿಸುವಂತೆ ಈಶ್ವರಪ್ಪ ಅವರ ಮೇಲೆ ಒತ್ತಡ (Angry) ಹೇರಲು ಯತ್ನಿಸಿದರು. ಆದರೆ ಈಶ್ವರಪ್ಪ ಅವರು ಅಭಿಮಾನಿಗಳನ್ನು ಸಮಾಧಾನಪಡಿಸಲು ಪ್ರಯತ್ನಿಸಿದರು.

Protest at Eshwarappa Residence

ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ

ಇತ್ತ ಅಭಿಮಾನಿಗಳು ಮಲ್ಲೇಶ್ವರ ನಗರದ ರಸ್ತೆಯಲ್ಲಿ ಟೈರ್‌ಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಸಿದರು. ಈಶ್ವರಪ್ಪ ಅವರು ಚುನಾವಣಾ ರಾಜಕೀಯದಿಂದ ನಿವೃತ್ತಿ ಘೋಷಿಸುವಂತೆ ಒತ್ತಡ ಹೇರಲಾಗಿದೆ. ಹೈಕಮಾಂಡ್‌ ಈ ನಿರ್ಧಾರವನ್ನು ತಿರಸ್ಕರಿಸಬೇಕು ಎಂದು ಘೋಷಣೆ ಕೂಗಿದರು. ಕೆಲವರು ಮಾಜಿ ಸಿಎಂ ಯಡಿಯೂರಪ್ಪ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ, ಘೋಷಣೆ ಕೂಗಿದರು.

ಇದನ್ನೂ ಓದಿ – ಚುನಾವಣಾ ರಾಜಕೀಯ ನಿವೃತ್ತಿ, ಈಶ್ವರಪ್ಪ ಮೊದಲ ಪ್ರತಿಕ್ರಿಯೆ, ಏನಂದ್ರು ಮಾಜಿ ಮಿನಿಸ್ಟರ್?

ಚುನಾವಣಾ ರಾಜಕೀಯದಿಂದ ಈಶ್ವರಪ್ಪ ಅವರು ನಿವೃತ್ತಿ ಘೋಷಿಸಿರುವ ವಿಚಾರ ಬಿಜೆಪಿ ಪಾಳಯದಲ್ಲಿ ಚಿಂತೆಗೀಡು ಮಾಡಿದೆ. ಜಿಲ್ಲೆಯ ರಾಜಕಾರಣದಲ್ಲಿ ಸಂಚಲನ ಸೃಷ್ಟಿಸಿದೆ.

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment