ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 12 APRIL 2024
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
SHIMOGA : ಲೋಕಸಭೆ ಚುನಾವಣೆಗೆ ಪಕ್ಷೇತರ ಅಭ್ಯರ್ಥಿಯಾಗಿ ಕೆ.ಎಸ್.ಈಶ್ವರಪ್ಪ ನಾಮಪತ್ರ ಸಲ್ಲಿಸಿದರು. ಇದಕ್ಕೂ ಮೊದಲು ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಪ್ರಧಾನಿ ನರೇಂದ್ರ ಮೋದಿಯ ತದ್ರೂಪಿ ವ್ಯಕ್ತಿಯೊಬ್ಬರು ಮೆರವಣಿಗೆಯಲ್ಲಿ ಕಾಣಿಸಿ ಜನರಲ್ಲಿ ಅಚ್ಚರಿ ಮೂಡಿಸಿದರು.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
‘ನೀ ನಮ್ಮ ಗೆಲುವಾಗಿ ಬಾʼ
ನಗರದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನ ಗಣಪತಿ ದೇವಸ್ಥಾನದಲ್ಲಿ ಈಶ್ವರಪ್ಪ ಕುಟುಂಬ ಸಹಿತ ಪೂಜೆ ಸಲ್ಲಿಸಿದರು. ನಾಮಪತ್ರವನ್ನು ದೇವರ ಮುಂದಿಟ್ಟು ಗಣಪತಿಯ ಭಕ್ತಿ ಗೀತೆ ‘ನೀ ನಮ್ಮ ಗೆಲುವಾಗಿ ಬಾʼ ಹಾಡಿದರು. ಈಶ್ವರಪ್ಪ ಅವರ ಆಪ್ತರು, ಬೆಂಬಲಿಗರು ಈ ಸಂದರ್ಭ ಪೂಜೆಯಲ್ಲಿ ಭಾಗವಹಿಸಿದ್ದರು.
ಅರ್ಧದವರೆಗೆ ಮೆರವಣಿಗೆಯಲ್ಲಿ ಈಶ್ವರಪ್ಪ
ರಾಷ್ಟ್ರಭಕ್ತರ ಬಳಗದ ವತಿಯಿಂದ ರಾಮಣ್ಣ ಶ್ರೇಷ್ಠಿ ಪಾರ್ಕ್‌ನಿಂದ ಗೋಪಿ ಸರ್ಕಲ್‌ವರೆಗೆ ಮೆರವಣಿಗೆ ಆಯೋಜಿಸಲಾಗಿತ್ತು. ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ, ಪುತ್ರ ಕೆ.ಈ.ಕಾಂತೇಶ್ ಮತ್ತು ಬೆಂಬಲಿಗರು ತೆರೆದ ವಾಹನದಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದ್ದರು. ಈಶ್ವರಪ್ಪ ಅವರು ಅರ್ಧ ದಾರಿವರೆಗೆ ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ನಾಮಪತ್ರ ಸಲ್ಲಿಕೆಯ ಸಮಯವಾದ್ದರಿಂದ ಮೆರವಣಿಗೆ ಮೊಟಕುಗೊಳಿಸಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿದರು. ನಂತರ ಕೆ.ಈ.ಕಾಂತೇಶ್ ನೇತೃತ್ವದಲ್ಲಿ ಮೆರವಣಿಗೆ ಸಾಗಿತು. ಮೆರವಣಿಗೆಯಲ್ಲಿ ಮೋದಿಯ ತದ್ರೂಪಿ ವ್ಯಕ್ತಿಯೊಬ್ಬರು ಎಲ್ಲರ ಗಮನ ಸೆಳೆದರು.
‘ಎಷ್ಟು ಜನ ಸೇರಿದ್ದಾರೆ?ʼ
ನಾಮಪತ್ರ ಸಲ್ಲಿಕೆ ಹಿನ್ನೆಲೆ ಈಶ್ವರಪ್ಪ ಅವರ ಬೆಂಬಲಿಗರು ದೊಡ್ಡ ಸಂಖ್ಯೆಯಲ್ಲಿ ಸೇರಿದ್ದರು. ಗಾಂಧಿ ಬಜಾರ್‌ನಲ್ಲಿ ಕಣ್ಣು ಹಾಯಿಸಿದಲ್ಲೆಲ್ಲಿ ಜನ ಕಾಣಿಸಿದ್ದರು. ‘ಎಷ್ಟು ಜನ ಸೇರಿದ್ದಾರೆ?’ ಎಂದು ಜನರು ಪ್ರಶ್ನಿಸುತ್ತಿದ್ದದ್ದು ಸಮಾನ್ಯವಾಗಿತ್ತು. ಪ್ರಧಾನಿ ಮೋದಿ ಮತ್ತು ಈಶ್ವರಪ್ಪ ಅವರ ಭಾವಚಿತ್ರಗಳಿರುವ ಧ್ವಜಗಳು, ಕೇಸರಿ ಧ್ವಜಗಳು ರಾರಾಜಿಸಿದವು. ವಿವಿಧ ಕಲಾ ತಂಡಗಳ ಮೆರವಣಿಗೆಯಲ್ಲಿದ್ದವು.
ನಾಮಪತ್ರ ಸಲ್ಲಿಸಿದ ಈಶ್ವರಪ್ಪ
ಪತ್ನಿ ಜಯಲಕ್ಷ್ಮಿ ಅವರೊಂದಿಗೆ ತೆರಳಿದ ಕೆ.ಎಸ್.ಈಶ್ವರಪ್ಪ ಅವರು ನಾಮಪತ್ರ ಸಲ್ಲಿಸಿದರು. ಜಿಲ್ಲಾ ಚುನಾವಣಾಧಿಕಾರಿ ಗುರುದತ್ತ ಹೆಗಡೆ ಅವರು ನಾಮಪತ್ರ ಸ್ವೀಕರಿಸಿದರು. ಮಾಜಿ ಸಚಿವ ಗೂಳಿಹಟ್ಟಿ ಶೇಖರ್, ಮಹಾಲಿಂಗ ಶಾಸ್ತ್ರಿ ಅವರು ಈ ಸಂದರ್ಭ ಇದ್ದರು.
ಇದನ್ನೂ ಓದಿ – ‘ಚೆಕ್‌ಪೋಸ್ಟ್‌ನಲ್ಲಿ ಪೊಲೀಸ್, ಸರ್ಕಾರಿ ವಾಹನಗಳು, ಆಂಬುಲೆನ್ಸ್‌ಗಳ ತಪಾಸಣೆಗೆ ಸೂಚನೆʼ