ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 18 JULY 2024
SHIMOGA : ಗೋವಿಂದಾಪುರ ಮತ್ತು ಗೋಪಿ ಶೆಟ್ಟಿಕೊಪ್ಪದಲ್ಲಿ ನಿರ್ಮಿಸಿರುವ ಮನೆಗಳನ್ನು (Houses) ಶೀಘ್ರ ಪೂರ್ಣಗೊಳಿಸಿ ಫಲಾನುಭವಿಗಳಿಗೆ ವಿತರಿಸಬೇಕು ಎಂದು ಆಗ್ರಹಿಸಿ ರಾಷ್ಟ್ರ ಭಕ್ತರ ಬಳಗದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ನೇತೃತ್ವದಲ್ಲಿ ರಾಮಣ್ಣ ಶ್ರೇಷ್ಠಿ ಪಾರ್ಕ್ನಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಮರೆವಣಿಗೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಫಲಾನುಭವಿಗಳು ಮುಂಗಡ ಹಣ ಪಾವತಿಸಿ ಚಾತಕ ಪಕ್ಷಿಗಳಂತೆ ಕಾಯುತ್ತಿದ್ದಾರೆ. 3000 ಮನೆಗಳ ಪೈಕಿ ಈವರೆಗೆ 288 ಮನೆಗಳನ್ನು ಮಾತ್ರ ವಿತರಣೆ ಮಾಡಲಾಗಿದೆ. ಮನೆಗಾಗಿ ಸಾಲ ಮಾಡಿ ಹಣ ಕಟ್ಟಿದ್ದಾರೆ. ಈಗ ಮನೆಯೂ ಇಲ್ಲ, ಸಾಲವು ತೀರುತ್ತಿಲ್ಲ. ಸರ್ಕಾರ ಕೂಡಲೆ ಮನೆಗಳನ್ನು ವಿತರಣೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಕೆ.ಈ. ಕಾಂತೇಶ್, ಈ.ವಿಶ್ವಾಸ್, ಎಂ.ಶಂಕರ್, ಸುವರ್ಣ ಶಂಕರ್, ಶಂಕರ್, ಬಾಲು, ಗನ್ನಿ ಶಂಕರ್, ಕಾಚಿನಕಟ್ಟೆ ಸತ್ಯನಾರಾಯಣ, ಮಹಾಲಿಂಗಶಾಸ್ತ್ರೀ, ಮೋಹನ್. ನಾಗರಾಜ್, ವಾಗೀಶ್, ಶ್ರೀಕಾಂತ್, ಜಾಧವ್ ಮತ್ತಿತರರು ಇದ್ದರು.
ಇದನ್ನೂ ಓದಿ ⇓
ಶಿವಮೊಗ್ಗ ಸೇರಿ ಐದು ಜಿಲ್ಲೆಗಳಿಗೆ ನಾಳೆಯೂ ರೆಡ್ ಅಲರ್ಟ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422