ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ
ಶಿವಮೊಗ್ಗ ಲೈವ್.ಕಾಂ |SHIMOGA NEWS | 19 JANUARY 2021
ಮಹಾರಾಷ್ಟ್ರ ಸರ್ಕಾರ ಮತ್ತೊಮ್ಮೆ ಗಡಿ ಕ್ಯಾತೆ ತೆಗೆದಿರುವ ಬೆನ್ನಿಗೆ, ಅಲ್ಲಿನ ಸಿಎಂ ಉದ್ಧವ್ ಠಾಕ್ರೆ ಅವರಿಗೆ ಸಚಿವ ಕೆ.ಎಸ್.ಈಶ್ವರಪ್ಪ ತಿರುಗೇಟು ನೀಡಿದ್ದಾರೆ. ಅಲ್ಲದೆ ಗಡಿ ಉಸ್ತುವಾರಿ ಸಚಿವರ ನೇಮಕದ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆಸುವುದಾಗಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕರ್ನಾಟಕದಲ್ಲಿರುವ ಮರಾಠಿ ಭಾಷಿಕ ಪ್ರಾಂತ್ಯಗಳನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಟ್ವೀಟ್ ಮಾಡಿದ್ದಾರೆ. ಹಾಗನ್ನುವುದಾದರೆ ಕನ್ನಡ ಭಾಷಿಕರು ಮಹಾರಾಷ್ಟ್ರದಾದ್ಯಂತ ಇದ್ದಾರೆ. ಮಹಾರಾಷ್ಟ್ರವನ್ನು ಕರ್ನಾಟಕಕ್ಕೆ ಸೇರಿಸಿ ಎಂದು ಹೇಳಲು ಆಗುತ್ತದೆಯೆ ಎಂದು ಪ್ರಶ್ನಿಸಿದರು.
ಮಹಾರಾಷ್ಟ್ರ, ಕೇರಳ, ಆಂಧ್ರದ ಜೊತೆ ಕರ್ನಾಟಕ ಗಡಿ ಹಂಚಿಕೊಂಡಿದೆ. ಎಲ್ಲರೊಂದಿಗೂ ಸೌಹಾರ್ದಯುತ ವಾತಾವರಣವಿದೆ. ಆದರೆ ಮಹಾರಾಷ್ಟ್ರದಲ್ಲಿ ಕೆಲವರು ಭೂಮಿ, ನೀರಿನ ವಿಚಾರದಲ್ಲಿ ಕ್ಯಾತೆ ತೆಗೆಯುತ್ತಿದ್ದಾರೆ. ಹಾಗೆ ಮಾಡಿದರೆ ಅವರ ಪಕ್ಷಕ್ಕೆ, ಅವರಿಗೆ ಹೆಚ್ಚು ಮತ ಸಿಗಲಿದೆ ಎಂಬ ನಂಬಿಕೆಯಲ್ಲಿದ್ದಾರೆ. ಹಾಗೆ ಹೇಳಿದಾಕ್ಷಣ ಅವರಿಗೆ ಭೂಮಿಕೊಡಲು ಸಾಧ್ಯವಿಲ್ಲ ಎಂದು ಸಚಿವ ಈಶ್ವರಪ್ಪ ತಿಳಿಸಿದರು.
ಮತ್ತೊಂದೆಡೆ ಗಡಿ ಉಸ್ತುವಾರಿ ಸಚಿವರನ್ನು ನೇಮಕ ಮಾಡುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೊಂದಿಗೆ ಚರ್ಚೆ ನಡೆಸಲಾಗುತ್ತದೆ ಎಂದು ಅವರು ತಿಳಿಸಿದರು.
VIDEO REPORT
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422