SHIVAMOGGA LIVESHIVAMOGGA LIVE
  • Home
  • NEWS
    • SHIVAMOGGA CITY
    • CRIME NEWS
    • POLITICS
    • SPORTS NEWS
    • LIFE STYLE
    • BUSINESS NEWS
    • EDUCATION NEWS
    • AGRICULTURE & APMC
    • FATAFAT NEWS
    • 1 MINUTE NEWS
    • STATE HIGHLIGHTS
    • NATIONAL HIGHLIGHTS
  • TALUK NEWS
    • SAGARA
    • HOSANAGARA
    • SORABA
    • SHIKARIPURA
    • SHIVAMOGGA
    • BHADRAVATHI
    • THIRTHAHALLI
  • SPECIALS NEWS
    • TECHNOLOGY
    • CINEMA
    • DEGULA DARSHANA
    • FOOT PATH BADUKU
    • INSPIRATION
    • RANGABHOOMI
    • REAL ESTATE
    • TECHNOLOGY
    • AUTOMOBILES
  • ADVERTISEMENTS
    • JOB JUNCTION
Notification Show More
Font ResizerAa
SHIVAMOGGA LIVESHIVAMOGGA LIVE
Font ResizerAa
  • Home
  • NEWS
  • TALUK NEWS
  • SPECIALS NEWS
  • ADVERTISEMENTS
  • ABOUT SHIVAMOGGA LIVE
  • ADVERTISE

‘ನನ್ನ ಹೃದಯದಲ್ಲಿ ರಾಮ, ಮೋದಿ, ಅವರ ಹೃದಯದಲ್ಲಿ ಮಕ್ಕಳು, ಶೋಭಾ’, ಈಶ್ವರಪ್ಪ ಕೆಂಡಾಮಂಡಲ

ನಿತಿನ್‌ ಕೈದೊಟ್ಲು
ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Join WhatsApp Community Join Messenger Channel

SHIVAMOGGA LIVE NEWS | 16 MARCH 2024

SHIMOGA : ಹಾವೇರಿ ಲೋಕಸಭೆ ಕ್ಷೇತ್ರಕ್ಕೆ ಪುತ್ರ ಕಾಂತೇಶ್‌ಗೆ ಟಿಕೆಟ್‌ ಸಿಗದಿದ್ದಕ್ಕೆ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಆಕ್ರೋಶಗೊಂಡಿದ್ದಾರೆ. ಬಂಜಾರ ಕನ್ವೆನ್ಷನ್‌ ಹಾಲ್‌ನಲ್ಲಿ ಬೆಂಬಲಿಗರ ಅಭಿಪ್ರಾಯ ಸಂಗ್ರಹಣಾ ಸಭೆ ನಡೆಸಿದರು. ಈ ವೇಳೆ, ತಾವು ಶಿವಮೊಗ್ಗದಿಂದ ಸ್ವತಂತ್ರವಾಗಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದರು. ಇದೆ ಸಂದರ್ಭ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ತಮ್ಮ ಅಸಮಾಧಾನ ಹೊರಹಾಕಿದರು. ಈಶ್ವರಪ್ಪ ಏನೇನು ಹೇಳಿದರು. ಇಲ್ಲಿದೆ ಪ್ರಮುಖ 9 ಪಾಯಿಂಟ್‌

POINT-1ಈ ಹಿಂದೆ ಕಾಂತೇಶ್‌ ಅವರು ಯಡಿಯೂರಪ್ಪ ಅವರ ಮನೆಗೆ ಹೋಗಿ ಮಾತಾಡಿದ್ದರು. ‘ತಾವು ಒಪ್ಪಿಗೆ ನೀಡಿದರೆ ಹಾವೇರಿಯಿಂದ ಸ್ಪರ್ಧಿಸುತ್ತೇನೆ’ ಅಂದಿದ್ದರು‌. ಆಗ ಯಡಿಯೂರಪ್ಪ ಅವರು ‘ಟಿಕೆಟ್ ಕೊಡಿಸುವುದು, ಪ್ರಚಾರ ಮಾಡಿ ಗೆಲ್ಲಿಸುವುದು ತಮ್ಮ ಜವಾಬ್ದಾರಿ’ ಎಂದಿದ್ದರು. ಟಿಕೆಟ್ ನೀಡಿದ್ದರೆ ಕಾಂತೇಶ್ ಗೆಲ್ಲುವು ನಿಶ್ಚಿತವಾಗಿತ್ತು‌.

POINT-2ಟಿವಿಯಲ್ಲಿ ಹಾವೇರಿಗೆ ಬಸವರಾಜ ಬೊಮ್ಮಾಯಿ ಅವರಿಗೆ ಟಿಕೆಟ್ ಎಂದು ವರದಿ ಬಂದ ಮೇಲೆ ವಿವಿಧ ಸಮಾಜದ ಪ್ರಮುಖ ನಾಯಕರು ಯಡಿಯೂರಪ್ಪ ಅವರ ಮನೆಯಲ್ಲಿ ಭೇಟಿ ನೀಡಿದ್ದರು. ಆಗ ಯಡಿಯೂರಪ್ಪ ಅವರು ‘ಇನ್ನೂ ಪ್ರಯತ್ನ ಮಾಡುತ್ತೇನೆ’ ಎಂದಿದ್ದರು. ಆದರೆ ಯಡಿಯೂರಪ್ಪ ಅವರು ಚಿಕ್ಕಮಗಳೂರಿಗೆ ಹೋದಾಗ ಶೋಭಾ ಕರಂದ್ಲಾಜೆಗೆ ಮತ ಹಾಕಿ ಎಂದಿದ್ದರು. ಈ ಬಗ್ಗೆ ಕೇಂದ್ರದಲ್ಲಿ ಚರ್ಚೆ ಆಗಿತ್ತೊ ಇಲ್ಲವೊ ಗೊತ್ತಿಲ್ಲ. ಅಷ್ಟು ಹೊತ್ತಿಗೆ ಯಡಿಯೂರಪ್ಪ ಅವರೆ ಪ್ರಕಟಿಸಿದ್ದರು. ಆದರೆ ಕಾಂತೇಶ್‌ಗೆ ಮಾತು ಕೊಟ್ಟಿದ್ದು ಯಾಕೆ ಈಡರೇಸಲಿಲ್ಲ.

Eshwarappa held followers meeting in Shimoga

POINT-3ಚುನಾವಣಾ ಸಮಿತಿ ಸಭೆಯಲ್ಲಿ ಕಾಂತೇಶ್ ಹೆಸರು ಪ್ರಸ್ತಾಪವಾಗಿತ್ತು. ಆದರೆ ಬಸವರಾಜ ಬೊಮ್ಮಾಯಿ ಹೆಸರು ಹೇಗೆ ಬಂತು ಗೊತ್ತಿಲ್ಲ. ಅವರಿಗೆ ‌ನಿಲ್ಲುವ ಆಸಕ್ತಿ ಇರದಿದ್ದರು ಟಿಕೆಟ್ ನೀಡಲಾಗಿದೆ. ಇತ್ತ ಶೋಭಾ ಕರಂದ್ಲಾಜೆ ವಿರುದ್ಧ ಚಿಕ್ಕಮಗಳೂರಿನಲ್ಲಿ ಕಾರ್ಯಕರ್ತರು ಗೋ ಬ್ಯಾಕ್ ಚಳವಳಿ ನಡೆಸುತ್ತಿದ್ದಾರೆ‌. ಶೋಭಾ ಕರಂದ್ಲಾಜೆಗೆ ಟಿಕೆಟ್ ತಪ್ಪಿದರೆ ಸಿ.ಟಿ.ರವಿಗೆ ಅವಕಾಶ ಸಿಗಬೇಕಿತ್ತು. ಸಿ.ಟಿ.ರವಿ, ಪ್ರತಾಪ್ ಸಿಂಹ ಇವರೆಲ್ಲ ಹಿಂದುತ್ವದ ವಿಚಾರ ಬಂದಾಗ ಗಟ್ಟಿಯಾಗಿ ನಿಲ್ಲುತ್ತಿದ್ದ ಕಾರ್ಯಕರ್ತರು. ಆದರೆ ಇವರಿಗೆ ಟಿಕೆಟ್ ತಪ್ಪಿದೆ.

Eshwarappa held followers meeting in Shimoga

POINT-4ನನ್ನ ಪ್ರಾಣ ಹೋದರೂ ಮೋದಿ ವಿರುದ್ಧ ಹೋಗಲ್ಲ. ಹೃದಯ ಬಗೆದರೆ ಒಂದೆಡೆ ರಾಮ, ಮತ್ತೊಂದು ಕಡೆ ಮೋದಿ. ಯಡಿಯೂರಪ್ಪ ಅವರ ಎದೆ ಬಗೆದರೆ ಒಂದು ಕಡೆ ಮಕ್ಕಳು, ಮತ್ತೊಂದು ಕಡೆ ಶೋಭಾ ಕರಂದ್ಲಾಜೆ ಎಂದು ಕಾರ್ಯಕರ್ತರು ಹೇಳುತ್ತಿದ್ದಾರೆ.

Eshwarappa held followers meeting in Shimoga

POINT-5ಸರ್ವೆ ವರದಿ ಆಧರಿಸಿ ಕೇಂದ್ರ ನಾಯಕರು ಟಿಕೆಟ್ ಕೊಡುತ್ತಾರೆ ಅಂದುಕೊಂಡಿದ್ದೆವು. ಆದರೆ ಬೆಳಗಾವಿಗೆ ಜಗದೀಶ್ ಶೆಟ್ಟರ್ ಅವರ ಹೆಸರು ಪ್ರಸ್ತಾಪಿಸಿದ್ದಾರೆ. ಈಗ ಟಿಕೆಟ್ ಕೊಡುವುದು ಯಾರು ಅನ್ನುವುದು ಗೊತ್ತಾಗುತ್ತಿಲ್ಲ. ರಾಜ್ಯದಲ್ಲಿ ಇತ್ತೀಚೆಗೆ ಬಿಜೆಪಿಯಲ್ಲಿಯು ಕಾಂಗ್ರೆಸ್ ಸಂಸ್ಕೃತಿ ಬಂದಿದೆ. ಕಾಂತೇಶ್ ಅಥವಾ ತನಗೆ ಟಿಕೆಟ್ ಸಿಗದ್ದಕ್ಕೆ ಈ ಮಾತು ಹೇಳುತ್ತಿರುವುದಲ್ಲ.

POINT-6ಮೋದಿ ಅವರು 140 ಕೋಟಿ ಭಾರತೀಯರು ತಮ್ಮ ಪರಿವಾರ ಎನ್ನುತ್ತಿದ್ದಾರೆ. ಆದರೆ ಕರ್ನಾಟಕದಲ್ಲಿ ಏನಾಗುತ್ತಿದೆ. 40 ವರ್ಷದಿಂದ ಜೊತೆ ರಾಜಕೀಯದಲ್ಲಿದ್ದೇನೆ. ಪಕ್ಷ ನನ್ನ ತಾಯಿ ಅನ್ನುತ್ತಿದ್ದೆ. ನನ್ನ ಕಣ್ಣ ಮುಂದೆಯೆ ತಾಯಿಯ ಕುತ್ತಿಗೆ ಹಿಸುಕಿದರೆ ಸುಮ್ಮನಿರಬೇಕ?

Eshwarappa held followers meeting in Shimoga

POINT-7ಈಶ್ವರಪ್ಪ ಅವರನ್ನು ಒಪ್ಪಿಸುತ್ತೇನೆ. ಅವರ ಮಗನನ್ನು ಎಂಎಲ್‌ಸಿ ಮಾಡ್ತೀನಿ ಅಂತಾ ಯಡಿಯೂರಪ್ಪ ಹೇಳಿದ್ದಾರೆ. ಆದರೆ ಇದು ಸುಳ್ಳು. ಈಗ ಲೋಕಸಭೆ ಚುನಾವಣೆಗೆ ಟಿಕೆಟ್ ಘೋಷಣೆ ಮಾಡಿರುವುದನ್ನು ಗಮನಿಸಿದರೆ ಸ್ಪಷ್ಟತೆ ಸಿಗಲಿದೆ. ಈಗ ಟಿಕೆಟ್ ಪಡೆದವರಲ್ಲಿ ಎಷ್ಟು ಮಂದಿ ಗೆಲ್ತಾರೋ, ಸೋಲ್ತಾರೋ ಗೊತ್ತಿಲ್ಲ.

Eshwarappa held followers meeting in Shimoga

POINT-8ಈಗ ನಾನು ಚುನಾವಣೆಗೆ ಸ್ಪರ್ಧೆ ಮಾಡುತ್ತೇನೆ. ಬಿಜೆಪಿಯಲ್ಲಿ ಜಾಸ್ತಿ ಧೈರ್ಯ ಇದ್ದರೆ ನೊಟೀಸ್ ಕೊಡಬಹುದು. ಇನ್ನೂ ಧೈರ್ಯವಿದ್ದರೆ ಉಚ್ಛಾಟನೆ ಮಾಡಬಹುದು. ನಾನು ಗೆದ್ದರೆ ಪುನಃ ಪಕ್ಷಕ್ಕೆ ಕರೆದುಕೊಳ್ಳಲಿದ್ದಾರೆ‌.

Eshwarappa held followers meeting in Shimoga

POINT-9ಶಿವಮೊಗ್ಗ ಲೋಕಸಭೆ ಕ್ಷೇತ್ರದಿಂದ ಸ್ವತಂತ್ರವಾಗಿ ಸ್ಪರ್ಧಿಸುತ್ತೇನೆ. ಆದರೆ ತಮ್ಮದು ಆತುರದ ನಿರ್ಧಾರವಲ್ಲ. ಇದು ಮೋದಿ ವಿರೋಧಿ ನಡೆಯಲ್ಲ. ಒಂದು ಕುಟುಂಬದ ಕೈಯಲ್ಲಿ ಪಕ್ಷ ಸಿಗಬಾರದು. ಹಿಂದುತ್ವಕ್ಕೆ, ಕಾರ್ಯಕರ್ತರಿಗೆ ಅನ್ಯಾಯವಾಗಬಾರದು ಎಂದು ಈ ನಿರ್ಧಾರ.

ಇದನ್ನೂ ಓದಿ – ಸ್ವತಂತ್ರವಾಗಿ ಸ್ಪರ್ಧೆಯ ನಿರ್ಧಾರ ಪ್ರಕಟಿಸಿದ ಈಶ್ವರಪ್ಪ, ನಿರ್ಧಾರಕ್ಕೆ ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422

–

 

LATEST NEWS

  • ADIKE-RATE-SHIVAMOGGA-LIVE-NEWS - Areca Price
    ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌
  • 130326-Sahyadri-Utsava-in-Kuvempu-University.avif
    ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?
  • Kote Police station building
    ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?
  • Kargal-people-admitted-to-Hospital
    ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ
  • 130326 Hombuja Pamavathi Temple ratotsava
    ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Byನಿತಿನ್‌ ಕೈದೊಟ್ಲು
Editor
Follow:
ಲೋಕಲ್ ಸುದ್ದಿಗಳು ಲೋಕಕ್ಕೆ ತಿಳಿಸಬೇಕು ಅಂತಾ ನ್ಯೂಸ್ ಚಾನೆಲ್ ದುನಿಯಾದಿಂದ ಹೊರ ಬಂದು ಶಿವಮೊಗ್ಗ ಲೈವ್ ಕಟ್ಟಿದ್ದೇವೆ. ಸ್ಥಳೀಯ ಪತ್ರಿಕೆ, ಕೇಬಲ್ ಚಾನೆಲ್, ರಾಜ್ಯಮಟ್ಟದ ಪತ್ರಿಕೆ, ನ್ಯೂಸ್ ಚಾನೆಲ್’ಗಳ ಬೆಂಗಳೂರು ಕಚೇರಿಯಲ್ಲಿ ವರ್ಷಗಟ್ಟಲೆ ಕೆಲಸ ಮಾಡಿದ್ದೇನೆ. ಈ ಫೀಲ್ಡಲ್ಲಿ ಹತ್ತು ವರ್ಷಕ್ಕೂ ಹೆಚ್ಚು ಕಾಲದ ಅನುಭವವಿದೆ. ಹಾಗಾಗಿ ಪೇಪರ್, ಟಿವಿಗಳಿಗಿಂತಲೂ ವಿಭಿನ್ನವಾಗಿ ಸುದ್ದಿ ಕೊಡಬೇಕು ಅನ್ನುವ ಹಂಬಲ. ಅದರ ಪ್ರಯತ್ನ ನಿರಂತರವಾಗಿದೆ.ಕ್ವಾಲಿಟಿ ಮತ್ತು ನಿಖರತೆಗೆ ಮೊದಲ ಆದ್ಯತೆ. ಸುದ್ದಿಯ ಒಳಗೆ ನನ್ನ ಅಭಿಪ್ರಾಯ ಹೇರುವುದಕ್ಕೆ ಇಷ್ಟವಿಲ್ಲ. ಸುದ್ದಿಯನ್ನು ಸುದ್ದಿಯಾಗಷ್ಟೆ ಕೊಡಬೇಕು ಎಂಬುದು ನನ್ನ ವಾದ. ಹೀಗಿದ್ದೂ ಕೆಲವೊಮ್ಮೆ ಸುದ್ದಿ ಕೆಳಗೆ ‘ಡ್ಯಾಷ್ ಡ್ಯಾಷ್ ಡ್ಯಾಷ್’ ಅಂತೆಲ್ಲ ಕಮೆಂಟುಗಳು ಬರುತ್ತವೆ. ಆರಂಭದಲ್ಲಿದ್ದ ಟೆಂಪರ್ ಈಗಿಲ್ಲ. ಹಾಗಾಗಿ ರಿಯಾಕ್ಟ್ ಮಾಡಲ್ಲ..!ನಿಮ್ಮೂರ ಸುದ್ದಿಗಳಿದ್ದರೆ ತಿಳಿಸಿ. ಹಣ ಪಡೆದು ಸುದ್ದಿ ಮಾಡುವ ಹವ್ಯಾಸ, ಅಭ್ಯಾಸ ಎರಡೂ ಇಲ್ಲ. ಇನ್ನಷ್ಟು ವಿಭಿನ್ನ ಪ್ರಯತ್ನಗಳು, ನಮ್ಮೂರನ್ನು ಮತ್ತಷ್ಟು ಸುತ್ತಬೇಕು, ನಮ್ಮೂರ ಬಗ್ಗೆ ತಿಳಿದು ಜನರಿಗೆಲ್ಲ ತಿಳಿಸಬೇಕು ಅನ್ನುವ ತವಕವಿದೆ.ಅಂದಹಾಗೆ, ಹೊಸ ಐಡಿಯಾಗಳಿದ್ದರೆ, ಸಲಹೆಗಳಿದ್ದರೆ ತಿಳಿಸಿ.. ‘ಡ್ಯಾಷ್ ಡ್ಯಾಷ್’ ಬಯ್ಯೋದಿದ್ದರೆ ದಯವಿಟ್ಟು ವಾಟ್ಸಪ್’ನಲ್ಲಿ ಮೆಸೇಜು ಮಾಡಿ, ಸಾಕು..! ನನ್ನ ಮೊಬೈಲ್ ನಂಬರ್ 9964634494. ಸಿಕ್ಕಾಗ ತಪ್ಪದೆ ಮಾತಾಡಿಸಿ. ನಿಮ್ಮ ಸ್ನೇಹ ನಂಗೆ ಅಮೂಲ್ಯ.ಶಿವಮೊಗ್ಗದ ಸುದ್ದಿಗಾಗಿ ನಿರಂತರವಾಗಿ ಶಿವಮೊಗ್ಗ ಲೈವ್.ಕಾಂ ಓದುತ್ತಿರಿ
Previous Article crime name image ಗಂಡನೊಂದಿಗೆ ಜಗಳದ ವೇಳೆ ಹೆಂಡತಿಗೆ ಗಂಭೀರ ಗಾಯ, ಸಾವು
Next Article Holehonnuru-Sidlipura-incident ಸಿದ್ಲೀಪುರ, ಕಮಲಾಪುರದಲ್ಲಿ ಹುಲ್ಲಿಗೆ ಬೆಂಕಿ | ಸಾಗರದ ಕಾಡಿನಲ್ಲಿ ಕುಮಟಾದ ವ್ಯಕ್ತಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಇದನ್ನೂ ಓದಿ

MP-BY-raghavendra-about-Shimoga-Airport-Flight
SHIVAMOGGA CITY

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
March 12, 2026
D-Manjunatha-about-kannada-shahitya-sammelana
SHIVAMOGGA CITY

ಶಿವಮೊಗ್ಗದಲ್ಲಿ ನಾಳೆಯಿಂದ ಎರಡು ದಿನ ಸಾಹಿತ್ಯ ಸಮ್ಮೇಳನ, ಯಾರೆಲ್ಲ ಭಾಗವಹಿಸ್ತಿದ್ದಾರೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
March 12, 2026
CAT-Tide-to-pole-on-divider-at-Shivamurthy-Circle-in-Shimoga
SHIVAMOGGA CITY

ಶಿವಮೊಗ್ಗದಲ್ಲಿ ಅಮಾನವೀಯ ಕೃತ್ಯ, ಕಂಬಕ್ಕೆ ಬೆಕ್ಕಿನ ಮೃತದೇಹ ಕಟ್ಟಿದ ಕಿಡಿಗೇಡಿಗಳು

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
March 12, 2026
Hotel-Owners-Association-Meeting-at-Mathura-Paradise
SHIVAMOGGA CITY

ನಾಳೆಯಿಂದ ಶಿವಮೊಗ್ಗದ ಶೇ.90ರಷ್ಟು ಹೊಟೇಲ್‌ಗಳು ಬಂದ್‌, ಕಾರಣವೇನು?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
March 11, 2026
Youth-Congress-Protest-against-LPG-Gas-cylinder-rate
SHIVAMOGGA CITY

ಗೋಪಿ ಸರ್ಕಲ್‌ನಲ್ಲಿ ಡೊನಾಲ್ಡ್‌ ಟ್ರಂಪ್‌ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್‌, ಸೌದೆ ಒಲೆ ಅಡುಗೆ

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
March 10, 2026
Vidyanagara-Durgamma-Devi-jathre
SHIVAMOGGA CITY

ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

ನಿತಿನ್‌ ಕೈದೊಟ್ಲು
ನಿತಿನ್‌ ಕೈದೊಟ್ಲು
March 9, 2026
Previous Next
Shivamogga-Live-Logo-New-Logo
Welcome Back!

Sign in to your account