ಎರಡು ಪುಟದ ಬಹಿರಂಗ ಪತ್ರ ಬರೆದ ಮಾಜಿ ಸಚಿವ ಈ‍ಶ್ವರಪ್ಪ, ಏನಿದೆ ಅದರಲ್ಲಿ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 16 APRIL 2023

SHIMOGA : ಮಾಜಿ ಮುಖ್ಯಮಂತ್ರಿ ಜಗದೀಶ್‌ ಶೆಟ್ಟರ್‌ ಅವರು ಕೇವಲ ಟಿಕೆಟ್‌ಗಾಗಿ ಕಾಂಗ್ರೆಸ್‌ ಪಕ್ಷ ಸೇರ್ಪಡೆಯಾಗಿರುವುದು ಸರಿಯಾದ ನಿರ್ಧಾರವಲ್ಲ. ಅವರು ತಮ್ಮ ನಿರ್ಧಾರ ಪುನರ್‌ ಪರಿಶೀಲಿಸಬೇಕು. ಈ ಸಂಬಂಧ ಅವರಿಗೆ ಬಹಿರಂಗ ಪತ್ರ (Open Letter) ಬರೆದಿದ್ದೇನೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ತಿಳಿಸಿದರು.

KS-Eshwarappa-Open-Letter-to-Jagdish-Shetter

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಅವರು, ಜಗದೀಶ್‌ ಶೆಟ್ಟರ್‌ ಅವರು ಪಕ್ಷ ತೊರೆದು ಕಾಂಗ್ರೆಸ್‌ ಸೇರ್ಪಡೆಯಾಗಿರುವುದು ಲಕ್ಷಾಂತರ ಕಾರ್ಯಕರ್ತರಿಗೆ ನೋವಾಗಿದೆ. ಇಷ್ಟು ವರ್ಷ ಕೊಟ್ಟ ಸಂಸ್ಕಾರದ ಫಲವೇನು ಎಂದು ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಲಕ್ಷಾಂತರ ಕಾರ್ಯಕರ್ತರ ಮನದಾಳದ ಮಾತನ್ನು ನಾನು ಬಹಿರಂಗವಾಗಿ ಹೇಳುತ್ತಿದ್ದೇನೆ ಎಂದರು.

ಕ್ಷಮೆ ಕೇಳಿ ವಾಪಸ್‌ ಬನ್ನಿ

ಮನಷ್ಯ ಅಂದ ಮೇಲೆ ತಪ್ಪು ಮಾಡುವುದು ಸಹಜ. ಜಗದೀಶ್‌ ಶೆಟ್ಟರ್‌ ಅವರು ಹಿರಿಯರ ಕ್ಷಮೆ ಕೇಳಿ ಪಕ್ಷಕ್ಕೆ ವಾಪಸ್‌ ಬರಬೇಕು ಎಂದು ಒತ್ತಾಯಿಸುತ್ತೇನೆ. ಗೋ ಹತ್ಯೆ ನಿಷೇಧ ಕಾನೂನು ತಂದಿದ್ದರು. ದೇಶ ಭಕ್ತರ ಪರವಾಗಿ ಮಾತನಾಡಿದ್ದರು. ಒಂದು ಟಿಕೆಟ್‌ಗಾಗಿ ಇದನ್ನೆಲ್ಲ ಮರೆತುಬಿಟ್ಟಿರಾ ಎಂದು ಈಶ್ವರಪ್ಪ ಪ್ರಶ್ನಿಸಿದರು.

ಶೆಟ್ಟರ್‌ಗೆ ಬಹಿರಂಗ ಪತ್ರ

ಇನ್ನು, ಇದೆ ವಿಚಾರವಾಗಿ ಜಗದೀಶ್‌ ಶೆಟ್ಟರ್‌ ಅವರಿಗೆ ಕೆ.ಎಸ್.ಈಶ್ವರಪ್ಪ ಅವರು ಬಹಿರಂಗ ಪತ್ರ (Open Letter) ಬರೆದಿದ್ದಾರೆ. ʼತಾಯಿಯಂತೆ ಕಾಪಾಡಿದ ಪಕ್ಷ ತೆಗೆದುಕೊಂಡ ನಿರ್ಣಯದ ವಿರುದ್ಧ ಅಸಮಾಧಾನಗೊಂಡಿರುವ ತಮ್ಮ ಮನಸ್ಥಿತಿ ನನಗೆ ಅರ್ಥವಾಗುತ್ತದೆ. ಆದರೆ ಪಕ್ಷ ಬಿಟ್ಟು, ನಂಬಿದ ಎಲ್ಲಾ ಆದರ್ಶಗಳನ್ನು ತೊರೆದು, ನಮ್ಮ ಪಕ್ಷದ ಚಿಂತನೆಗೆ ವಿರುದ್ಧವಾದ ಕಾಂಗ್ರೆಸ್‌ ಪಕ್ಷಕ್ಕೆ ತಾವು ಸೇರಲು ಬಯಸಿರುವುದು ಅತ್ಯಂತ ದುರದೃಷ್ಟಕರʼ ಎಂದು ಎರಡು ಪುಟದ ಪತ್ರದಲ್ಲಿ ಈಶ್ವರಪ್ಪ ಬರೆದಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪಗೆ ಒಲಿಯಲಿದೆಯಾ ಬಿಜೆಪಿ ಟಿಕೆಟ್? ಜಾಲತಾಣಗಳಲ್ಲಿ ಶುಭಾಶಯ, ಪೋಸ್ಟರ್‌ ವೈರಲ್

shivamogga live news whatsappa number

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment