ಶಿವಮೊಗ್ಗ ಲೈವ್.ಕಾಂ | SHIMOGA | 14 ಏಪ್ರಿಲ್ 2020
ಕರೋನ ಲಾಕ್ಡೌನ್ ವಿಸ್ತರಣೆ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರು ಇವತ್ತು ವಿಡಿಯೋ ಸಂದೇಶ ನೀಡಿದ್ದಾರೆ. ಮೇ ೩ರವರೆಗೆ ಲಾಕ್ಡೌನ್ ವಿಸ್ತರಣೆ ಆಗಲಿದೆ ಎಂದು ತಿಳಿಸಿದ್ದಾರೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಸಂದೇಶವನ್ನು ವೀಕ್ಷಿಸಿದರು. ಜಿಲ್ಲಾ ಪಂಚಾಯಿತಿ ಆವರಣದಲ್ಲಿರುವ ಸಭಾ ಕೊಠಡಿಯಲ್ಲಿ ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್, ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು, ಜಿಲ್ಲಾ ಪಂಚಾಯಿತಿ ಸಿಇಓ ವೈಶಾಲಿ ಸೇರಿದಂತೆ ಕೆಲವು ಹಿರಿಯ ಅಧಿಕಾರಿಗಳ ಜೊತೆಗೆ ವಿಡಿಯೋ ಸಂದೇಶ ವೀಕ್ಷಿಸಿದರು.
ಹಲವರಿಗೆ ತೊಂದರೆ ಆಗಬಹುದು
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಮೇ ೩ರವರೆಗೆ ಲಾಕ್ಡೌನ್ ವಿಸ್ತರಣೆ ಮಾಡಲಾಗಿದೆ. ವೈಯಕ್ತಿಕವಾಗಿ ಹಲವರಿಗೆ ಇದು ತೊಂದರೆ ಆಗಲಿದೆ. ಇದು ನಮ್ಮ ಗಮನಕ್ಕೂ ಬಂದಿದೆ. ಏಪ್ರಿಲ್ ೨೦ರ ಬಳಿಕ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಪ್ರಧಾನಿ ಅವರು ತಿಳಿಸಿದ್ದಾರೆ ಎಂದರು.
ಜನರು ಸಹಕಾರ ನೀಡುತ್ತಿದ್ದಾರೆ
ಶಿವಮೊಗ್ಗ ಜಿಲ್ಲೆಯಲ್ಲಿ ಈವರೆಗು ಒಂದೂ ಪಾಸಿಟಿವ್ ಪ್ರಕರಣವಿಲ್ಲ. ಜಿಲ್ಲಾಧಿಕಾರಿ, ಜಿಲ್ಲಾ ರಕ್ಷಣಾಧಿಕಾರಿ ಅವರ ಸೂಚನೆಗಳಿಗೆ ಜನರು ಸಹಕಾರ ನೀಡುತ್ತಿದ್ದಾರೆ. ಯಾರು ಎಲ್ಲೇ ಇದ್ದರೂ ಜಿಲ್ಲಾಡಳಿತ, ಪೊಲೀಸರು ಅವರನ್ನು ರಕ್ಷಣೆ ಮಾಡುತ್ತಿದ್ದಾರೆ. ಯಾರೂ ನಿಯಮ ಉಲ್ಲಂಘಿಸದಿದ್ದರೆ ಕುಟುಂಬ, ರಾಜ್ಯ ಮತ್ತು ದೇಶಕ್ಕೆ ತೊಂದರೆ ಆಗುವುದಿಲ್ಲ ಎಂದು ಈಶ್ವರಪ್ಪ ತಿಳಿಸಿದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]