ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 7 MAY 2024
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ELECTION NEWS : ತಾಂತ್ರಿಕ ದೋಷದಿಂದ ಅರ್ಧ ಗಂಟೆಗೂ ಹೆಚ್ಚು ಹೊತ್ತು ಮತದಾನ ಸ್ಥಗಿತವಾಗಿದೆ. ಶಿವಮೊಗ್ಗ ನಗರದ ಬಾಲರಾಜ್ ಅರಸ್ ರಸ್ತೆಯ ಲೋಕೋಪಯೋಗಿ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಕಚೇರಿಯಲ್ಲಿರುವ ಮತಗಟ್ಟೆಯಲ್ಲಿ ಘಟನೆ ಸಂಭವಿಸಿದೆ.
ಮತ ಯಂತ್ರದಲ್ಲಿ ತಾಂತ್ರಿಕ ಸಮಸ್ಯೆ ಉಂಟಾಗಿದೆ. ಈ ಹಿನ್ನೆಲೆ ಮತದಾನ ಸ್ಥಗಿತಗೊಳಿಸಲಾಗಿದೆ. ವಿಷಯ ತಿಳಿದು ಕೂಡಲೆ ಸ್ಥಳಕ್ಕೆ ಆಗಮಿಸಿದ ಇಂಜಿನಿಯರ್ಗಳ ತಂಡ ಮತ ಯಂತ್ರದ ಪರಿಶೀಲನೆ ನಡೆಸಿತು. ತಾಂತ್ರಿಕ ದೋಷದ ಹಿನ್ನೆಲೆ ಮತ ಯಂತ್ರವನ್ನು ಬದಲಾಯಿಸಲು ತೀರ್ಮಾನಿಸಲಾಗಿದೆ.
ಈ ಬೂತ್ನಲ್ಲಿ ಒಟ್ಟು 935 ಮತಗಳಿವೆ. ಈವರೆಗೂ 542 ಮತ ಚಲಾವಣೆಯಾಗಿದೆ. ಮತ್ತೊಂದುಷ್ಟು ಮಂದಿ ತಮ್ಮ ಹಕ್ಕು ಚಲಾಯಿಸಲು ಸರತಿಯಲ್ಲಿ ನಿಂತಿದ್ದಾರೆ.
ಇದನ್ನೂ ಓದಿ – ಮತಗಟ್ಟೆಗೆ ಮೊಬೈಲ್ ನಿಷೇಧ, ಆದರೂ ಹೊರ ಬಂತು ಮತ ಚಲಾಯಿಸಿದ ವಿಡಿಯೋ