ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 19 DECEMBER 2023
SHIMOGA : ಇವಿಎಂ ಮತ್ತು ವಿವಿಪ್ಯಾಟ್ ಕುರಿತು ಸಮಗ್ರವಾಗಿ ತಿಳಿದುಕೊಂಡು ಅತಿ ಜಾಗೃತೆಯಿಂದ, ಸೂಕ್ಷ್ಮವಾಗಿ ನಿರ್ವಹಣೆ ಮಾಡಬೇಕು ಎಂದು ಚುನಾವಣೆಗೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆರ್ ಸೂಚನೆ ನೀಡಿದರು.
ಫ್ರೀಡಂ ಪಾರ್ಕ್ ಬಳಿಯ ಗಾಂಧಿ ಭವನದಲ್ಲಿ ಅಧಿಕಾರಿಗಳಿಗೆ ಮೊಬೈಲ್ ಡೆಮಾನ್‍ಸ್ಟ್ರೇಷನ್ ವೆಹಿಕಲ್ (ಎಂಡಿವಿ) ಮೂಲಕ ಆಯೋಜಿಸಲಾಗಿದ್ದ ಇವಿಎಂ ಮತ್ತು ವಿವಿಪ್ಯಾಟ್ ಪ್ರಾತ್ಯಕ್ಷಿಕೆ ಹಾಗೂ ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಬಳಕೆ ವಿಧಾನ ತಿಳಿದು ಪ್ರಾತ್ಯಕ್ಷಿಕೆ ನೀಡಬೇಕು
ಇಂದಿನ ಪ್ರಾತ್ಯಕ್ಷಿಕೆ ಮತ್ತು ಅರಿವು ಕಾರ್ಯಕ್ರಮದಲ್ಲಿ ಮಾಸ್ಟರ್ ತರಬೇತುದಾರರು ಸಮಗ್ರವಾಗಿ ಇವಿಎಂ ಮತ್ತು ವಿವಿಪ್ಯಾಟ್ ಕಾರ್ಯಚಟುವಟಿಕೆ ಹಾಗೂ ಬಳಕೆ ವಿಧಾನವನ್ನು ತಿಳಿಸಿಕೊಡಲಿದ್ದಾರೆ. ಅದನ್ನು ಸಮರ್ಪಕವಾಗಿ ತಿಳಿದು 7 ತಂಡಗಳು ಪ್ರಾತ್ಯಕ್ಷಿಕೆ ನೀಡಬೇಕು ಎಂದರು.
ಇವಿಎಂಗಳು ಅತ್ಯಂತ ಸೂಕ್ಷ್ಮ
ಇವಿಎಂ ಮಷೀನ್‍ಗಳು ಅತ್ಯಂತ ಸೂಕ್ಷ್ಮವಾಗಿದ್ದು ಅವುಗಳನ್ನು ಅತಿ ಎಚ್ಚರಿಕೆಯಿಂದ ನಿರ್ವಹಿಸಬೇಕು. ಚುನಾವಣಾ ಆಯೋಗ ಈ ವಿಷಯವಾಗಿ ಅತ್ಯಂತ ನಿರ್ದಿಷ್ಟವಾಗಿದ್ದು, ಯಾವುದೇ ತಪ್ಪುಗಳು ಜರುಗದಂತೆ ಜಾಗೃತೆ ವಹಿಸಬೇಕು. ಇವಿಎಂಗಳ ಸಾಗಣೆ, ಶೇಖರಣೆ ಮತ್ತು ಬಳಕೆ ಅತ್ಯಂತ ಜವಾಬ್ದಾರಿಯಿಂದ ಕೂಡಿದ್ದು ಎಚ್ಚರಿಕೆಯಿಂದ ನಿರ್ವಹಣೆ ಮಾಡಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ಅಧಿಕಾರಿಗಳೇ ಜವಾಬ್ದಾರರಾಗುತ್ತಾರೆ. ಇವಿಎಂ ಮತ್ತು ವಿವಿಪ್ಯಾಟ್ ನಲ್ಲಿ ತಾಂತ್ರಿಕ ತೊಂದರೆಗಳು, ಇತರೆ ಸ್ಪಷ್ಟನೆಗಳು ಇದ್ದಲ್ಲಿ ಮಾಸ್ಟರ್ ಟ್ರೈನರ್ ಮತ್ತು ತಂತ್ರಜ್ಞರೊಂದಿಗೆ ಚರ್ಚಿಸಿ ಸರಿಪಡಿಸಿಕೊಳ್ಳುವಂತೆ ತಿಳಿಸಿದರು.
ಮಾಸ್ಟರ್ ಟ್ರೈನರ್ ರವಿಕುಮಾರ್ ಪ್ರಾತ್ಯಕ್ಷಿಕೆ ನಡೆಸಿಕೊಟ್ಟರು. ಈ ವೇಳೆ ಜಿಲ್ಲಾ ಪಂಚಾಯತ್ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ, ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ, ಎಲ್ಲ ತಾಲ್ಲೂಕುಗಳ ತಹಶೀಲ್ದಾರ್‌ಗಳು, ಮಾಸ್ಟರ್ ತರಬೇತುದಾರರು, ಅಧಿಕಾರಿ, ಸಿಬ್ಬಂದಿ ಪಾಲ್ಗೊಂಡಿದ್ದರು.
ಇದನ್ನೂ ಓದಿ – ಶಿವಮೊಗ್ಗ ರೈಲ್ವೆ ನಿಲ್ದಾಣ ಎದುರು 100 ಅಡಿ ರಸ್ತೆಯಲ್ಲಿ ಹಂಪ್‌ಗಳಿಂದಲೆ ಅಪಘಾತ, ಹೇಗದು?
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಮಲವಗೊಪ್ಪದ ಭದ್ರಾ ನಾಲೆಯಲ್ಲಿ ನಾಪತ್ತೆಯಾಗಿದ್ದ ಹರಿಗೆಯ ಬಾಲಕ ಶವವಾಗಿ ಪತ್ತೆ, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಲಿಕಲ್ಲು ಮಳೆ, ಎಲ್ಲೆಲ್ಲಿ ಹೇಗಿತ್ತು ಭಾನುವಾರದ ವರ್ಷಧಾರೆ? ಎಲ್ಲೆಲ್ಲಿ ಹಾನಿಯಾಗಿದೆ?

- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















