ಶಿವಮೊಗ್ಗ ವಿದ್ಯಾನಗರದ ಮಿಲಿಟರಿ ಕ್ಯಾಂಟೀನ್ ಮುಂದೆ ಮಾಜಿ ಸೈನಿಕರ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | SHIMOGA NEWS | 28 JUNE 2021

ಮಿಲಿಟರಿ ಕ್ಯಾಂಟೀನ್‍ನಲ್ಲಿ ಸಮರ್ಪಕವಾಗಿ ಸೇವೆ ನೀಡುತ್ತಿಲ್ಲ ಎಂದು ಮಾಜಿ ಸೈನಿಕರು ಆರೋಪಿಸಿದ್ದಾರೆ. ವಿದ್ಯಾನಗರದಲ್ಲಿರುವ ಮಿಲಿಟರಿ ಕ್ಯಾಂಟೀನ್‍ ಮುಂದೆ ಇವತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೊಳೆ ಬಸ್ ನಿಲ್ದಾಣ ಬಳಿ ಇರುವ ಮಿಲಿಟರಿ ಕ್ಯಾಂಟೀನ್‍ನಲ್ಲಿ ದಿನಸಿ ಮತ್ತು ಮದ್ಯ ಪೂರೈಕೆ ಸಮರ್ಪಕವಾಗಿಲ್ಲ ಎಂದು ಮಾಜಿ ಸೈನಿಕರು ಆರೋಪಿಸಿದ್ದಾರೆ. ಲಾಕ್ ಡೌನ್ ಇದ್ದ ಕಾರಣ ಎರಡು ತಿಂಗಳು ಯಾವುದ ದಿನಸಿ ಮತ್ತು ಮದ್ಯ ವಿತರಣೆ ಮಾಡಿಲ್ಲ. ಈಗಲೂ ಇವುಗಳನ್ನು ಒದಗಿಸಲು ಮೀನಮೇಷ ಎಣಿಸಲಾಗುತ್ತಿದೆ ಎಂದು ಮಾಜಿ ಸೈನಿಕರು ಆಕ್ರೋಶ ವ್ಯಕ್ತಪಡಿಸಿದರು.

ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 600 ಮಂದಿ ಸಿಎಂಡಿ ಕಾರ್ಡ್ ಹೊಂದಿರುವ ಮಾಜಿ ಸೈನಿಕರಿದ್ದಾರೆ. ಇವತ್ತು ಸುಮಾರು 50ಕ್ಕೂ ಹೆಚ್ಚು ಮಾಜಿ ಸೈನಿಕರು ಕ್ಯಾಂಟೀಗೆ ಬಂದಾಗ ಆಡಳಿತ ಸಿಬ್ಬಂದಿಗಳ ಜೊತೆಗೆ ಮಾತಿನ ಚಕಮಕಿಯಾಗಿದೆ. ಕೋಟೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದರು.

204751962 1143709169442325 1917981465831900986 n.jpg? nc cat=110&ccb=1 3& nc sid=8bfeb9& nc ohc=Bb82T29 yhsAX9kexyr& nc ht=scontent.fblr20 1

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್‍ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ

HOME LOAN SERVICES
ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!

🏠 ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಇಂದೇ ಸಂಪರ್ಕಿಸಿ:


📞 99721 94422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment