ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | PSI EXAM SCAM | 05 ಮೇ 2022
ಪಿಎಸ್ಐ ನೇಮಕಾತಿ ಹಗರಣದಲ್ಲಿ (EXAM SCAM) ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥನಾರಾಯಣ ಅವರ ಹೆಸರು ಕೇಳಿ ಬಂದಿದೆ. ಕೂಡಲೆ ಅವರನ್ನು ಸಚಿವ ಸ್ಥಾನದಿಂದ ಕೈಬಿಡಬೇಕು. ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು ಆಗ್ರಹಿಸಿ ಭಾರತ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟ (NSUI) ವಿಭಿನ್ನವಾಗಿ ಪ್ರತಿಭಟನೆ ನಡೆಸಿತು.
ಮಹಾವೀರ ಸರ್ಕಲ್’ನಲ್ಲಿ NSUI ಕಾರ್ಯಕರ್ತರು ವಿಭಿನ್ನ ಪ್ರತಿಭಟನೆ ನಡೆಸಿದರು. ರಾಜ್ಯ ಸರ್ಕಾರ ಮತ್ತು ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.
ನಡುರಸ್ತೆಯಲ್ಲಿ ಕಮಿಷನ್ ಸೂಟ್ ಕೇಸ್
NSUI ಕಾರ್ಯಕರ್ತರು ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಯುನಿಫಾರಂ, ಪದವಿಧರರ ಗೌನ್ ಧರಿಸಿ ಪ್ರತಿಭಟನೆ ನಡೆಸಿದರು. ಸಚಿವ ಡಾ.ಅಶ್ವಥನಾರಾಯಣ ಅವರ ಮುಖವಾಡ ಧರಿಸಿದ್ದ ವ್ಯಕ್ತಿ ಕೈಗೆ ಕಮಿಷನ್ ನೀಡುವಂತೆ ಅಣಕು ಪ್ರದರ್ಶನ ಮಾಡಿದರು. ನಡು ಬೀದಿಯಲ್ಲಿ ಹಣದ ಸೂಟ್ ಕೇಸ್ ಇರಿಸಿ ಪ್ರತಿಭಟಿಸಿದರು.
ಸರ್ಕಾರದಲ್ಲಿ ಒಂದಿಲ್ಲೊಂದು ಹಗರಣ
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಒಂದಿಲ್ಲೊಂದು ಹಗರಣ ಬೆಳಕಿಗೆ ಬರುತ್ತಿವೆ. 545 ಪಿಎಸ್ಐ ನೇಮಕಾತಿಯಲ್ಲಿ ಕೋಟ್ಯಂತರ ರೂ. ಭ್ರಷ್ಟಾಚಾರ ಬೆಳಕಿಗೆ ಬಂದಿದೆ. ಇದರಲ್ಲಿ ಉನ್ನತ ಶಿಕ್ಷಣ ಸಚಿವ ಡಾ.ಅಶ್ವಥನಾರಾಯಣ ಅವರ ಹೆಸರು ಕೂಡ ಕೇಳಿ ಬಂದಿದೆ. ಆದ್ದರಿಂದ ಕೂಡಲೆ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ನ್ಯಾಯಾಂಗ ತನಿಖೆಗೆ ಒತ್ತಾಯ
545 ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ತಪ್ಪಿತಸ್ಥರಿಗೆ ಶಿಕ್ಷೆ ವಿಧಿಸುವ ಬದಲು ಮರು ಪರೀಕ್ಷೆಗೆ ಸರ್ಕಾರ ಆದೇಶಿಸಿದೆ. ಇದು ತಪ್ಪಿತಸ್ಥರನ್ನು ರಕ್ಷಿಸುವ ತಂತ್ರವಾಗಿದೆ. ಆದ್ದರಿಂದ ಪಿಎಸ್ಐ ನೇಮಕಾತಿ ಹಗರಣವನ್ನು ನ್ಯಾಯಾಂಗ ತನಿಖೆಗೆ ವಹಿಸಬೇಕು ಎಂದು NSUI ಕಾರ್ಯಕರ್ತರು ಆಗ್ರಹಿಸಿದರು.
NSUI ಸಂಘಟನೆ ಜಿಲ್ಲಾಧ್ಯಕ್ಷ ವಿಜಯ ಕುಮಾರ್, ನಗರ ಅಧ್ಯಕ್ಷ ಚರಣ್, ಶಿವಮೊಗ್ಗ ಗ್ರಾಮಾಂತರ ಅಧ್ಯಕ್ಷ ಹರ್ಷಿತ್, ಪ್ರಮುಖರಾದ ಚೇತನ್, ಮಧುಸೂದನ್, ರವಿ, ಸಂಜಯ್, ವಿಶಾಲ್ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ – ನೊಟೀಸ್ ಕೊಟ್ಟ ಸಿಐಡಿ ಅಧಿಕಾರಿ ಅಮಾನತಿಗೆ ಆಗ್ರಹಿಸಿ ರಾಜ್ಯಪಾಲರಿಗೆ ಮನವಿ
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422