ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIMOGA NEWS, 25 OCTOBER 2024 : MRPಗಿಂತಲು ಹೆಚ್ಚಿನ ದರಕ್ಕೆ ಮದ್ಯ ಮಾರಾಟ ಮಾಡಿದರೆ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಎಚ್ಚರಿಸಿದರು.
ಅಬಕಾರಿ ಇಲಾಖೆಯ ಶಿವಮೊಗ್ಗ ಕಚೇರಿಗೆ ಭೇಟಿ ನೀಡಿ, ಅಧಿಕಾರಿಗಳ ಜೊತೆಗೆ ಸಭೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಸಚಿವ ಆರ್.ಬಿ.ತಿಮ್ಮಾಪುರ ಮಾತನಾಡಿದರು. ನಿಗದಿಗಿಂತಲು ಹೆಚ್ಚಿನ ದರದಲ್ಲಿ ಮದ್ಯ ಮಾರಾಟ ಮಾಡುತ್ತಿರುವವರ ವಿರುದ್ಧ ಗಮನ ಹರಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗುತ್ತದೆ ಎಂದರು.
ಸಿಎಲ್-2, ಎಂಎಸ್‌ಐಎಲ್ ಅಂಗಡಿಗಳಲ್ಲಿ ಮದ್ಯ ಖರೀದಿಸಿ ಹೊರಗೆ ಕೊಂಡೊಯ್ದು ಸೇವಿಸುತ್ತಾರೆ. ಪಾರ್ಕ್, ಶಾಲೆ ಕಟ್ಟಡಗಳು ಸೇರಿದಂತೆ ಸಾರ್ವಜನಿಕ ಸ್ಥಳದಲ್ಲಿ ಮದ್ಯ ಸೇವಿಸುವವರ ವಿರುದ್ಧ ಪೊಲೀಸ್ ಮತ್ತು ಅಬಕಾರಿ ಇಲಾಖೆ ಅಧಿಕಾರಿಗಳು ಕ್ರಮ ಕೈಗೊಳ್ಳಲಿದ್ದಾರೆ.
ಆರ್.ಬಿ.ತಿಮ್ಮಾಪುರ, ಅಬಕಾರಿ ಸಚಿವ
ಇನ್ನು, ಅಬಕಾರಿ ಇಲಾಖೆಯಲ್ಲಿ 700 ಕಾನ್ಸ್‌ಟೇಬಲ್‌ಗಳಿಗೆ ಬಡ್ತಿ ನೀಡಲಾಗಿದೆ. ಹಂತ ಹಂತವಾಗಿ ಮತ್ತಷ್ಟು ಅಧಿಕಾರಿಗಳಿಗೆ ಬಡ್ತಿ ಸಿಗಲಿದೆ ಎಂದು ಆರ್.ಬಿ.ತಿಮ್ಮಾಪುರ ತಿಳಿಸಿದರು.
ಇದನ್ನೂ ಓದಿ » ಶಿವಮೊಗ್ಗ ತಾಲೂಕಿನ ಎರಡು ಕಡೆ ಪೊಲೀಸರ ದಾಳಿ, ಮೂವರು ಅರೆಸ್ಟ್
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422