SHIVAMOGGA LIVE NEWS | 14 NOVEMBER 2023
ಸಾಗರದಲ್ಲಿ ಅಬಕಾರಿ ಅಧಿಕಾರಿಗಳ ದಾಳಿ, 3 ಅರೆಸ್ಟ್
SAGARA : ನಗರದ ಅಣಲೆಕೊಪ್ಪ, ಎಸ್.ಎನ್.ನಗರ, ವರದಹಳ್ಳಿ ರಸ್ತೆಯಲ್ಲಿ ದಾಳಿ ನಡೆಸಿದ ಅಬಕಾರಿ ಸಿಬ್ಬಂದಿ ಗಾಂಜಾ ಮಾರಾಟ ಮಾಡುತ್ತಿದ್ದ ಮೂವರನ್ನು ಬಂಧಿಸಿದ್ದಾರೆ. ಅವರಿಂದ 600 ಗ್ರಾಂ ಒಣ ಗಾಂಜಾ ವಶಕ್ಕೆ ಪಡೆಯಲಾಗಿದೆ. ಅಣಲೆಕೊಪ್ಪದ ರಾಘವೇಂದ್ರ, ಸೈಯದ್ ಇರ್ಫಾನ್, ಸೈಯದ್ ಅಸ್ಲಂ ಬಂಧಿತರು. ಮತ್ತೊಬ್ಬ ಆರೋಪಿ ಆರೀಫ್ ಪರಾರಿಯಾಗಿದ್ದಾನೆ. ಅಬಕಾರಿ ಇನ್ಸ್‌ಪೆಕ್ಟರ್ ಸಂದೀಪ್ ಎಲ್.ಸಿ, ಸಂತೋಷ್ ರಡ್ಡೇರ್, ಶಿವಪ್ರಸಾದ್, ವಾಸವಿ, ಸಿಬ್ಬಂದಿ ದೀಪಕ್, ಕನ್ನಯ್ಯ, ಮಹಬಲೇಶ್, ಅರುಣ, ಗಣಪತಿ, ಮುದಾಸಿರ್, ಪುಟ್ಟಪ್ಪ, ಸಚಿನ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.
ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ಸಂದರ್ಶನ
SHIMOGA : ಪಶುವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಗುತ್ತಿಗೆ ಆಧಾರದಲ್ಲಿ ಅರ್ಹರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ. ಇದಕ್ಕೆ ನ.15 ರಂದು ಸಂದರ್ಶನ ಹಮ್ಮಿಕೊಳ್ಳಲಾಗಿದೆ. ಮಾಹಿತಿಗೆ ದೂರವಾಣಿ ಸಂಖ್ಯೆ: 08182-200872 ಸಂಪರ್ಕಿಸಬಹುದು ಎಂದು ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವಿಜಯೇಂದ್ರ ಭೇಟಿಯಾದ ಹಾಲಪ್ಪ
SAGARA : ಬಿಜೆಪಿ ರಾಜ್ಯಾಧ್ಯಕ್ಷರಾಗಿ ಆಯ್ಕೆ ಆಗಿರುವ ಬಿ.ವೈ.ವಿಜಯೇಂದ್ರ ಅವರನ್ನು ಮಾಜಿ ಸಚಿವ ಹರತಾಳು ಹಾಲಪ್ಪ ಭೇಟಿಯಾಗಿ ಅಭಿನಂದಿಸಿದರು.
ಇದೇ ವೇಳೆ ಮಾತನಾಢಿದ ಹಾಲಪ್ಪ, ಬಿಜೆಪಿಯನ್ನು ತಳಮಟ್ಟದಿಂದ ಸಂಘಟಿಸುವಲ್ಲಿ ವಿಜಯೇಂದ್ರ ಪಾತ್ರ ದೊಡ್ಡದಿದೆ. ಮುಂದಿನ ಚುನಾವಣೆಗಳಲ್ಲಿ ಬಿಜೆಪಿ ಹೆಚ್ಚಿನ ಸ್ಥಾನ ಪಡೆಯಲಿದೆ ಎಂದರು.
ಇದನ್ನೂ ಓದಿ- ಫೇಸ್‌ಬುಕ್ ಕಾಮೆಂಟ್ ವಿರುದ್ಧ ದೂರು ನೀಡಿದ ಸಿಎಂ ಖಾದರ್, ಏನಿದು ಪ್ರಕರಣ?
ದೆಹಲಿಗೆ ಗೌತಮಪುರ ಶಾಲೆಯ ಡೊಳ್ಳು ತಂಡ
SAGARA : ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಮಕ್ಕಳ ಸಾಹಿತ್ಯ ಸಮ್ಮೇಳನಕ್ಕೆ ಶಿವಮೊಗ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಘಟಕದಿಂದ ಸಾಗರ ತಾಲೂಕಿನ ಮಕ್ಕಳು, ಡೊಳ್ಳು ಕುಣಿತ, ವಿಚಾರಗೋಷ್ಠಿಗೆ ಆಯ್ಕೆಯಾಗಿದ್ದಾರೆ. ಗೌತಮಪುರದ ಮಲೆನಾಡು ಪ್ರೌಢಶಾಲೆಯ ಮಕ್ಕಳು ಡೊಳ್ಳು ಕುಣಿತ ಪ್ರದರ್ಶನ ನೀಡಲಿದ್ದಾರೆ. ಸಾಗರದ ಬಿಇಓ ಪರಶುರಾಮ, ಜಿಲ್ಲಾ ಅಧ್ಯಕ್ಷರಾದ ರವಿರಾಜ್ ಸಾಗರ್ ಮಂಡಗಳಲೆ, ಸಾಗರ ತಾಲೂಕು ಅಧ್ಯಕ್ಷ ಕಿಶೋರ್ ಕುಮಾರ್ ಬೈರಾಪುರ, ಗೌತಮ ಪುರದ ಗ್ರಾಮಸ್ಥರು, ಪೋಷಕರು, ಮಲೆನಾಡು ಪ್ರೌಢಶಾಲೆಯ ಅಧ್ಯಕ್ಷರು ಮತ್ತು ಶಿಕ್ಷಕರ ಬಳಗ ,ಗೌತಮ ಪುರದ ಗ್ರಾಮ ಪಂಚಾಯಿತಿ ವತಿಯಿಂದ ಮಕ್ಕಳಿಗೆ ಶುಭ ಹಾರೈಸಿದ್ದಾರೆ.
ಈಡಿಗರ ವಧುವರರ ಅನ್ವೇಷಣೆ ಕೇಂದ್ರ
SHIMOGA : ದೀವರ ಕ್ಷೇಮಾಭಿವೃದ್ಧಿ ಸಂಘದಿಂದ ದೀವರ, ಈಡಿಗ, ಪೂಜಾರಿ ನಾಮಧಾರಿ ನಾಯ್ಕ ಸೇರಿದಂತೆ ಸಮುದಾಯದ ಇತರೆ ಉಪಪಂಗಡಗಳು ವಧು ವರ ಅನ್ವೇಷಣಾ ಕೇಂದ್ರ ಆರಂಭಿಸಲಾಗಿದೆ. ಸಮಾಜದ ವಧುವರರ ಮಾಹಿತಿಯನ್ನು ನಿಗದಿತ ನಮೂನೆಯಲ್ಲಿ ಸಂಘದಲ್ಲಿ ನೋಂದಣಿ ಮಾಡಬಹುದಾಗಿದೆ. ವಧು-ವರರ ಪೋಷಕರ ಸಮಾಲೋಚನಾ ಸಭೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗೆ ಸಂಘದ ಅಧ್ಯಕ್ಷ ಹೆಚ್.ನಾಗರಾಜ್ 94484 38257, ಉಪಾಧ್ಯಕ್ಷ 9449921957 ಈ ನಂಬರುಗಳಿಗೆ ಸಂಪರ್ಕಿಸಬಹುದಾಗಿದೆ.
ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು
ನಿಮ್ಮೂರ ಸುದ್ದಿ ಈಗ ಜಗತ್ತಿನ ಮೂಲೆ ಮೂಲೆ ತಲುಪಲಿದೆ. ನಿಮ್ಮೂರ ಸುದ್ದಿಗೆ ನೀವೆ ವರದಿಗಾರರು. ಸಭೆ, ಸಮಾರಂಭ, ಪ್ರತಿಭಟನೆ ಸೇರಿ ಸುದ್ದಿಯಾಗುವ ವಿಚಾರಗಳನ್ನು ಕೆಳಗೆ ನೀಡಿರುವ Gmail ಅಥವಾ WhatsApp ನಂಬರ್ಗೆ ಕಳುಹಿಸಬಹುದು. ಸುದ್ದಿ ಪ್ರಕಟಿಸಲು ಸಮಯ ಹಿಡಿಯಲಿದೆ. ಪ್ರಕಟವಾದ ಸುದ್ದಿಯ ಲಿಂಕ್ ಅನ್ನು ನಿಮ್ಮ ನಂಬರ್ಗೆ ಕಳುಹಿಸುತ್ತೇವೆ.
ಸೂಚನೆ : ಗಂಡ – ಹೆಂಡತಿ ಜಗಳ, ಜಮೀನು ವಿವಾದ, ಖಾಸಗಿ ಸಂಗತಿಗಳು, ಬ್ಲಾಕ್ ಮೇಲ್ ಮಾದರಿಯ ಸುದ್ದಿಗಳನ್ನು ನಾವು ಪ್ರಕಟಿಸುವುದಿಲ್ಲ.
» ಶಿವಮೊಗ್ಗ ಲೈವ್ gmail
» Whatsapp Number
7411700200