ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗದ ಲೈವ್.ಕಾಂ | SHIMOGA NEWS | 24 ಡಿಸೆಂಬರ್ 2021
ಮತಾಂತರ ನಿಷೇಧ ಕಾಯ್ದೆ ವಿರೋಧಿಸುತ್ತಿರುವ ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ದೇಶದಿಂದ ಗಡಿಪಾರು ಮಾಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎನ್.ಚನ್ನಬಸಪ್ಪ ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಎಸ್.ಎನ್.ಚನ್ನಬಸಪ್ಪ, ದೇಶದಲ್ಲಿ ಮತಾಂತರ ಹೆಚ್ಚುತ್ತಿದೆ. ಆಮಿಷಗಳನ್ನೊಡ್ಡಿ ಮತಾಂತರ ಮಾಡಲಾಗುತ್ತಿದೆ. ಇಷ್ಟು ವರ್ಷ ಕಾಂಗ್ರೆಸ್ ಅಧಿಕಾರದಲ್ಲಿದ್ದರೂ ಮತಾಂತರ ತಡೆಯುವಲ್ಲಿ ವಿಫಲವಾಗಿದೆ. ಮತಾಂತರ ನಿಷೇಧ ಕಾಯ್ದೆ ಜಾರಿಯಾದರೆ ಕಾಂಗ್ರೆಸ್‌ನವರಿಗೆ ಕಸಿವಿಸಿ ಏಕೆ ಎಂದು ಪ್ರಶ್ನಿಸಿದರು.
ಮತಾಂತರ ಒಂದರ್ಥದಲ್ಲಿ ರಾಷ್ಟ್ರಾಂತರವೇ ಆಗಿದೆ. ಅಂಬೇಡ್ಕರ್ ಮತಾಂತರಗೊಂಡರೂ ಅವರು ಕ್ರಿಶ್ಚಿಯನ್ ಅಥವಾ ಮುಸ್ಲಿಂ ಧರ್ಮಕ್ಕೆ ಮತಾಂತರವಾಗಲಿಲ್ಲ. ಹಿಂದು ಧರ್ಮದ ಭಾಗವೇ ಆಗಿದ್ದ ಬೌದ್ಧ ಧರ್ಮಕ್ಕೆ ಮತಾಂತರವಾದರು ಎಂದು ಹೇಳಿದರು.
ಶಿವಮೊಗ್ಗದ ಬಾಪೂಜಿ ನಗರ, ಶಾಂತಿನಗರ ಸೇರಿ ಹಲವು ಕಡೆ ಮತಾಂತರ ನಡೆಯುತ್ತಿದೆ. ಕ್ರಿಶ್ಚಿಯನ್ ಶಾಲೆಗಳು ಮಕ್ಕಳಿಗೆ ಕ್ರಿಶ್ಚಿಯನ್ ಧರ್ಮದ ಬಗ್ಗೆ ಸದ್ದಿಲ್ಲದೇ ಬೋಧಿಸುತ್ತಿವೆ. ಕಾಂಗ್ರೆಸ್‌ನವರಿಗೆ ಇದು ಅರ್ಥವಾಗುತ್ತಿಲ್ಲ. ಇದು ಹಿಂದು ದೇಶ. ಇಲ್ಲಿ ಹಿಂದುಗಳಿಗೆ ಆದ್ಯತೆ ಇರಬೇಕು. ಈ ಕಾರಣಕ್ಕಾಗಿ ಬಿಜೆಪಿ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದಾದರೂ ಸರಿಯೇ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುತ್ತದೆ. ಜತೆಗೆ ಗೋಹತ್ಯೆ ನಿಷೇಧ ಕಾಯ್ದೆಯನ್ನು ಮತ್ತಷ್ಟು ಬಿಗಿಗೊಳಿಸುತ್ತೇವೆ ಎಂದರು.
ಬಿಜೆಪಿ ನಗರಾಧ್ಯಕ್ಷ ಜಗದೀಶ್, ಮಾಜಿ ಅಧ್ಯಕ್ಷ ಎನ್.ಜೆ. ನಾಗರಾಜ್ ಇತರರಿದ್ದರು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422