ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 30 OCTOBER 2023
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
SHIMOGA : ಮಕ್ಕಳಲ್ಲಿ ಪೌಷ್ಠಿಕಾಂಶ (Nutrition) ಹೆಚ್ಚಳಕ್ಕೆ ಶಿಕ್ಷಣ ಇಲಾಖೆ ಮತ್ತೊಂದು ಪ್ರಮುಖ ಹೆಜ್ಜೆ ಇರಿಸಿದೆ. ಬಿಸಿ ಊಟದಲ್ಲಿ ಮೊಟ್ಟೆ ವಿತರಣೆ ಮಾಡಿದ ಹಾಗೆ ಇನ್ನೊಂದು ಯೋಜನೆ ಜಾರಿಗೊಳಿಸುತ್ತಿದ್ದೇವೆ. ನ.23ರಂದು ಯೋಜನೆಯ ಕುರಿತು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಮಧು ಬಂಗಾರಪ್ಪ, ಮಕ್ಕಳಲ್ಲಿ ಪೌಷ್ಠಿಕಾಂಶ ((Nutrition) ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಇದರ ಪ್ರಯೋಗ ನಡೆದಿದ್ದು ಯಶಸ್ವಿಯಾಗಿದೆ. ನ.23ರಂದು ಯೋಜನೆಯನ್ನು ಅಧಿಕೃತವಾಗಿ ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.
ಇದನ್ನೂ ಓದಿ- ಸಾವಿರ ಕೋಟಿ ರೂ. ಶಿವಮೊಗ್ಗ ಸ್ಮಾರ್ಟ್ ಸಿಟಿ ಯೋಜನೆಗೆ ಈಗ ತನಿಖೆಯ ಬಿಸಿ, ಯಾಕೆ?
ಶಿಕ್ಷಣದ ಗುಣಮಟ್ಟ ಹೆಚ್ಚಳಕ್ಕೆ ಸರ್ಕಾರ ಪ್ರಮುಖ ಆದ್ಯತೆ ನೀಡುತ್ತಿದೆ. ಮಕ್ಕಳ ಬ್ಯಾಗ್ ಗಾತ್ರ ತಗ್ಗಿಸುವ ಪ್ರಯತ್ನ ಮಾಡಲಾಗುತ್ತಿದೆ. ಪಠ್ಯ ಪುಸ್ತಕದ ತೂಕ ತಗ್ಗಿಸುವ ಕಾರ್ಯವನ್ನು ಮಾಡಲಾಗುತ್ತಿದೆ. ನೋಟ್ ಪುಸ್ತಕಗಳನ್ನು ಕಡಿಮೆ ಮಾಡಿಸುವ ಕುರಿತು ಹಲವು ಸಭೆಗಳನ್ನು ನಡೆಸಲಾಗುತ್ತಿದೆ. ಮುಂದಿನ ಶೈಕ್ಷಣಿಕ ವರ್ಷದಿಂದ ಮಕ್ಕಳ ಬ್ಯಾಗ್ ತೂಕ ಕಡಿಮೆ ಮಾಡುವ ಪ್ರಯತ್ನವಾಗಲಿದೆ ಎಂದು ತಿಳಿಸಿದರು.