ಶಿವಮೊಗ್ಗದ ಲೈವ್.ಕಾಂ | SHIMOGA NEWS | 25 ಫೆಬ್ರವರಿ 2022
ಬಜರಂಗದಳ ಕಾರ್ಯಕರ್ತ ಹರ್ಷ ಅವರ ತಾಯಿಗೆ ಶಿವಮೊಗ್ಗ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ನೀಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಶುರುವಾಗಿದೆ. ಫೇಸ್ ಬುಕ್’ನಲ್ಲಿ ಇದರ ಕುರಿತು ಅಭಿಪ್ರಾಯ ಸಂಗ್ರಹ ಕೂಡ ನಡೆಯುತ್ತಿದೆ.
ಸಂಘಟನೆ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದ ಹರ್ಷ ಪ್ರಾಣ ಕಳೆದುಕೊಂಡಿದ್ದಾರೆ. ಹಿಂದುತ್ವಕ್ಕಾಗಿ ಹೋರಾಟ ನಡೆಸಿದವರನ್ನು ಚುನಾವಣೆಗೆ ನಿಲ್ಲಿಸಬೇಕು. ವಿಧಾನಸಭೆ ಚುನಾವಣೆಗೆ ಬಿಜೆಪಿ ಪಕ್ಷದಿಂದ ಹರ್ಷ ಅವರ ತಾಯಿ ಪದ್ಮಾ ಅವರಿಗೆ ಟಿಕೆಟ್ ನೀಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ನಡೆಯುತ್ತಿದೆ.
ಕೆಲವು ಮಾಧ್ಯಮ ಸಂಸ್ಥೆಗಳು ಸಾಮಾಜಿಕ ಜಾಲತಾಣದಲ್ಲಿ ಈ ಕುರಿತು ಅಭಿಪ್ರಾಯ ಸಂಗ್ರಹ ಆರಂಭಿಸಿವೆ. ಇದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ. ‘ಹರ್ಷ ಅವರ ಕುಟುಂಬದವರು ನೆಮ್ಮೆಯಿಂದ ಇರಲು ಅವಕಾಶ ಮಾಡಿಕೊಡಿ. ರಾಜಕೀಯದಿಂದ ಮತ್ತಷ್ಟು ನೋವು ಅನುಭವಿಸುವುದು ಬೇಡ’ ಎಂದು ಕೆಲವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಇನ್ನೂ ಕೆಲವರು, ‘ಹಿಂದುತ್ವದ ಶಕ್ತಿ ಪ್ರದರ್ಶನವಾಗಲಿ. ಹರ್ಷನ ಸಾವಿಗೆ ನ್ಯಾಯ ಸಿಗುವಂತಾಗಲಿ’ ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.