ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
ಶಿವಮೊಗ್ಗದಲ್ಲಿ ಬಿ.ಇಡಿ ಕೋರ್ಸ್ಗೆ ಪ್ರವೇಶಾತಿ ಆರಂಭ
ಶಿವಮೊಗ್ಗ ಲೈವ್.ಕಾಂ | SHIMOGA NEWS | 04 ಅಕ್ಟೋಬರ್ 2021
ಅಮೃತ್ ನೋನಿಯನ್ನು ಹೋಲುವ ನಕಲಿ ಪ್ಯಾಕಿಂಗ್ ಮಾಡಿ ಜ್ಯೂಸ್ ಮಾರಾಟ ಮಾಡುತ್ತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಅಮೃತ್ ನೋನಿಯನ್ನು ಮಾರಾಟ ಮಾಡುತ್ತಿರುವ ವ್ಯಾಲ್ಯೂ ಪ್ರಾಡೆಕ್ಟ್ ಕಂಪನಿ ನೀಡಿದ ದೂರಿನ ಆಧಾರದಲ್ಲಿ ದಾಳಿ ನಡೆಸಲಾಗಿದೆ.
ಶಿವಮೊಗ್ಗದ ಮಾರ್ನಮಿ ಬೈಲಿನಲ್ಲಿರುವ ಫಾರ್ಮಾ ಸಂಸ್ಥೆ ಮೇಲೆ ದಾಳಿ ನಡೆಸಲಾಗಿದೆ. 31 ಬಾಕ್ಸ್ ನಕಲಿ ಅಮೃತ್ ನೋನಿಯನ್ನು ವಶಕ್ಕೆ ಪಡೆಯಲಾಗಿದೆ.
ಥೇಟ್ ಅಮೃತ್ ನೋನಿಯಂತಿದೆ ಪ್ಯಾಕಿಂಗ್
ದಾಳಿ ವೇಳೆ ಅಮೃತ್ ನೋನಿಯನ್ನೇ ಹೋಲುವ ನಕಲಿ ಪ್ಯಾಕಿಂಗ್ ಮಾಡಿರುವ ಬಾಟಲಿಗಳು ಪತ್ತೆಯಾಗಿವೆ. ನಕಲಿ ಅಮೃತ್ ನೋನಿ ಬಾಟಲಿಗಳನ್ನ ವಶಕ್ಕೆ ಪಡೆದು ಪೊಲೀಸರು ಕ್ರಮ ಕೈಗೊಂಡಿದ್ದಾರೆ.

‘ನಾವು ಆಯುಷ್ ಇಲಾಖೆಯಿಂದ ಲೈಸೆನ್ಸ್ ಪಡೆದು ಔಷಧಿ ಎಂದು ಮಾರಾಟ ಮಾಡುತ್ತಿದ್ದೇವೆ. ಇದನ್ನು ನಕಲು ಮಾಡಿ, ಮಾರಾಟ ಮಾಡುತ್ತಿರುವುದರಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗಲಿದೆ. ಈ ಹಿನ್ನೆಲೆಯಲ್ಲಿ ದೂರು ನೀಡಿದ್ದೇವೆ. ಪೊಲೀಸರು ದಾಳಿ ನಡೆಸಿ ನಕಲಿ ಅಮೃತ್ ನೋನಿ ಬಾಕ್ಸ್’ಗಳನ್ನು ವಶಕ್ಕೆ ಪಡೆದಿದ್ದಾರೆ’ ಎಂದು ವ್ಯಾಲ್ಯೂ ಪ್ರಾಡೆಕ್ಟ್ ಸಂಸ್ಥೆಯ ಕಾನೂನು ವಿಭಾಗದ ಶಶಿಕಾಂತ್ ನಾಡಿಗ್ ಶಿವಮೊಗ್ಗ ಲೈವ್.ಕಾಂಗೆ ತಿಳಿಸಿದ್ದಾರೆ.
ಇದನ್ನೂ ಓದಿ | ಗಾಂಧಿ ಬಜಾರ್ ಕುಚಲಕ್ಕಿ ಕೇರಿಯಲ್ಲಿ ಅಂಗಡಿ ಮೇಲೆ ಪೊಲೀಸ್ ದಾಳಿ

(ಶಿವಮೊಗ್ಗ ಲೈವ್.ಕಾಂ ನಮ್ಮೂರ ನ್ಯೂಸ್ ವಿಭಾಗ – ನಿಮ್ಮೂರ ನ್ಯೂಸ್ಗೆ ನೀವೇ ವರದಿಗಾರರು. ನಿಮ್ಮೂರ ಪ್ರಮುಖ ಘಟನೆಗಳನ್ನು ನೀವೇ ವರದಿ ಮಾಡಬಹುದು. ಫೋಟೊ, ವಿಡಿಯೋ ಸಹಿತ ವರದಿಯನ್ನು ವಾಟ್ಸಪ್ ಅಥವಾ ಈ ಮೇಲ್ ಮಾಡಬಹುದು)
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ ಮೂಲಕ ಸುದ್ದಿಗಾಗಿ 7411700200






