ನಕಲಿ ಪ್ರೆಸ್ ಗುರುತಿನ ಚೀಟಿ, ಮೂವರ ವಿರುದ್ದ ಕೇಸ್

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 25 ಮಾರ್ಚ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಮಾಧ್ಯಮದವರು ಎಂದು ನಕಲಿ ಗುರುತಿನ ಚೀಟಿ ಪ್ರದರ್ಶಿಸಿದ ಇಬ್ಬರು ಯುವಕರು ಸೇರಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದೆ.

ರುಮಾನ್ (21), ಸಯ್ಯದ್ ಹುಸೇನ್ (22), ಜಮೀರ್ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.

ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮುಸ್ಲಿಂ ಸಮುದಾಯದ ವಿದ್ಯಾರ್ಥಿನಿಯರು, ಮಹಿಳೆಯರು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ರುಮಾನ್ ಮತ್ತು ಸಯ್ಯದ್ ಹುಸೇನ್ ಎಂಬುವವರು ವಿಡಿಯೋ ರೆಕಾರ್ಡ್ ಮಾಡಿಕೊಳ್ಳುತ್ತಿದ್ದರು. ಅಲ್ಲದೆ ವಿದ್ಯಾರ್ಥಿಗಳನ್ನು ಪ್ರಚೋದಿಸುತ್ತಿದ್ದರು.

ತಾವು ಪತ್ರಕರ್ತರು ಎಂದು ಹೇಳಿಕೊಂಡು ವಿಡಿಯೋ ರೆಕಾರ್ಡ್ ಮಾಡುತ್ತಿದ್ದರು. ಪೊಲೀಸರು ಗುರುತಿನ ಚೀಟಿಯನ್ನು ಪರಿಶೀಲಿಸಿದಾಗ ರುಮಾನ್ ಮತ್ತು ಸಯ್ಯದ್ ಹುಸೇನ್ ನಕಲಿ ಗುರುತಿನ ಚೀಟಿ ಇಟ್ಟುಕೊಂಡಿರುವುದು ಗೊತ್ತಾಗಿದೆ. ಜಮೀರ್ ಎಂಬಾತ ನಕಲಿ ಗುರುತಿನ ಚೀಟಿ ನೀಡಿದ್ದಾಗಿ ಇಬ್ಬರು ತಿಳಿಸಿದ್ದಾರೆ.

ನಕಲಿ ಗುರುತಿನ ಚೀಟಿ ಹೊಂದಿದ್ದ ಆರೋಪ ಸಂಬಂಧ ಮೂವರ ವಿರುದ್ಧ ಜಯನಗರ ಠಾಣೆ ಪೊಲೀಸರು ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಂಡಿದ್ದಾರೆ.

ಇದನ್ನೂ ಓದಿ | ಶಿವಮೊಗ್ಗದಲ್ಲಿ ಮುಖ, ಕೈ, ಕಾಲು ತೊಳೆದು ಬರುವಷ್ಟರಲ್ಲಿ ಬೈಕ್ ನಾಪತ್ತೆ

Nanjappa Hospital Shimoga

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment