ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 9 OCTOBER 2023
SHIMOGA : ರಾಗಿಗುಡ್ಡ ಬಡಾವಣೆಯಲ್ಲಿ ಈದ್ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ ಸಂಬಂಧ ಸುಳ್ಳು ವಿಡಿಯೋಗಳನ್ನು (Fake Video) ಸಾಮಾಜಿಕ ಜಾಲತಾಣದಲ್ಲಿ ಶೇರ್ ಮಾಡಿದ್ದ ಯುವಕನ ವಿರುದ್ಧ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯಲ್ಲಿ ಈ ಹಿಂದೆ ನಡೆದಿದ್ದ ಘಟನೆಯೊಂದರ ವಿಡಿಯೋವನ್ನು ರಾಗಿಗುಡ್ಡದ ಘಟನೆ ಎಂದು ಬಿಂಬಿಸಿ ವಿಡಿಯೋ ಶೇರ್ ಮಾಡಲಾಗಿತ್ತು. ಗಲ್ಲಿ ಕ್ರಿಕೆಟ್ ಆಡುವಾಗ ನಡೆದ ಗಲಾಟೆ ವೇಳೆ ವ್ಯಕ್ತಿಯೊಬ್ಬರ ಮೇಲೆ ಗಂಭೀರ ಹಲ್ಲೆ ನಡೆಸಲಾಗಿತ್ತು. ಈ ವಿಡಿಯೋವನ್ನು ಶೇರ್ ಮಾಡಿ ತಪ್ಪು ಸಂದೇಶ ರವಾನಿಸಲಾಗಿತ್ತು.
ಇದನ್ನೂ ಓದಿ- 144 ಸೆಕ್ಷನ್, ಶಿವಮೊಗ್ಗ ಜಿಲ್ಲಾಧಿಕಾರಿಯಿಂದ ಪರಿಷ್ಕೃತ ಆದೇಶ, ಏನಿದೆ ಆದೇಶದಲ್ಲಿ?
‘ಸುಳ್ಳು ವಿಡಿಯೋಗಳನ್ನು ಹಂಚಿಕೊಳ್ಳುವವರ ವಿರುದ್ಧ ಎಫ್ಐಆರ್ ದಾಖಲು ಮಾಡಲಾಗುತ್ತದೆʼ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಎಚ್ಚರಿಸಿದ್ದಾರೆ. ರಾಗಿಗುಡ್ಡ ಘಟನೆಯಲ್ಲಿ ಎನ್ಕೌಂಟರ್ ಅಗಿದೆ ಎಂದು ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿದ್ದ. ಆತನ ವಿರುದ್ಧ ಸಿಇಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





