ಶಿವಮೊಗ್ಗ ಲೈವ್.ಕಾಂ | SHIMOGA NEWS | 26 MARCH 2021
ಶಿವಮೊಗ್ಗದಲ್ಲಿ ಕೃಷಿ ಕಾಯ್ದೆಯ ಪ್ರತಿಗೆ ರೈತರು ಬೆಂಕಿ ಹಚ್ಚಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಜಿಲ್ಲಾಧಿಕಾರಿ ಕಚೇರಿ ಮುಂದೆ ರಸ್ತೆಯಲ್ಲಿ ಕೃಷಿ ಕಾಯ್ದೆಗೆ ಬೆಂಕಿ ಇಡಲಾಯಿತು.
ಕೃಷಿ ಕಾಯ್ದೆ ವಿರೋಧಿಸಿ ರೈತರು ಇವತ್ತು ಭಾರತ್ ಬಂದ್‍ಗೆ ಕರೆ ನೀಡಿದ್ದರು. ಶಿವಮೊಗ್ಗದಲ್ಲಿ ಬಂದ್ ಬದಲಾಗಿ ರೈತ ಸಂಘಟನೆಗಳ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ವೇಳೆ ಕೃಷಿ ಕಾಯ್ದೆಗೆ ಬೆಂಕಿ ಹಚ್ಚಲಾಯಿತು.
ಇದಕ್ಕೂ ಮೊದಲು ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರೈತ ಸಂಘಟನೆ, ಕೇಂದ್ರ ಸರ್ಕಾರ ಕೂಡಲೆ ಕಾಯ್ದೆಯನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿದರು.
ರಾಜ್ಯ ರೈತ ಸಂಘದ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಎಂ.ಶ್ರೀಕಾಂತ್, ವಕೀಲ ಕೆ.ಪಿ.ಶ್ರೀಪಾಲ್, ಸಾಮಾಜಿಕ ಹೋರಾಟಗಾರ ಕೆ.ಪಿ.ಶ್ರೀಪಾಲ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ [email protected]