ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | SHIMOGA NEWS | 14 ಅಕ್ಟೋಬರ್ 2020
ಪಾನ್ ಮಸಾಲ ನಿಷೇಧಕ್ಕೆ ಸುಗ್ರೀವಾಜ್ಞೆ ತರಲು ರಾಜ್ಯ ಸರ್ಕಾರ ಯೋಚಿಸಿದೆ. ಇದಕ್ಕೆ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವಿರೋಧ ವ್ಯಕ್ತಪಡಿಸಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಇತ್ತೀಚೆಗೆ ಮುಖ್ಯಮಂತ್ರಿ ಅವರನ್ನು ಭೇಟಿಯಾದ ಗೃಹ ಸಚಿವ ಬೊಮ್ಮಾಯಿ ಅವರು, ಪಾನ್ ಮಸಾಲ ಪ್ಯಾಕೆಟ್ನಲ್ಲಿ ಡ್ರಗ್ಸ್ ಪೂರೈಕೆ ಮಾಡಲಾಗುತ್ತಿದೆ. ಹಾಗಾಗಿ ಪಾನ್ ಮಸಾಲ ನಿಷೇಧಕ್ಕೆ ಸುಗ್ರೀವಾಜ್ಞೆ ಹೊರಡಿಸಲು ಯೋಜಿಸಲಾಗಿದೆ ಎಂದು ಹೇಳಿಕೆ ನೀಡಿದ್ದಾರೆ. ಐದು ರುಪಾಯಿಯ ಪಾನ್ ಮಸಾಲದಲ್ಲಿ ಸಾವಿರಾರು ಬೆಲೆಯ ಡ್ರಗ್ಸ್ ಮಿಕ್ಸ್ ಮಾಡಿ ಮಾರಾಟ ಮಾಡಲು ಸಾದ್ಯವಿದೆಯಾ. ಹಾಗಾಗಿ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿದರೆ ತೀವ್ರ ಪ್ರತಿಭಟನೆ ನಡೆಸಲಿದ್ದೇವೆ ಎಂದು ತಿಳಿಸಿದರು.
ಪಾನ್ ಮಸಾಲ ನಿಷೇಧದಿಂದ ಅಡಿಕೆ ಬೆಳೆಗಾರರ ಮೇಲೆ ನೇರ ಪರಿಣಾಮ ಉಂಟಾಗುತ್ತದೆ. ಹತ್ತು ರಾಜ್ಯದಲ್ಲಿ ಅಡಿಕೆ ಬೆಳೆಯಲಾಗುತ್ತದೆ. ಬೆಳೆಗಾರರು ಮಾತ್ರವಲ್ಲ ಕೃಷಿ ಕಾರ್ಮಿಕರು, ಮಂಡಿ ಕಾರ್ಮಿಕರು, ಹಮಾಲರು, ಕೈಗಾಡಿಯವರು, ಲಾರಿ ಮಾಲೀಕರು, ಚಾಲಕರು ಸೇರಿ ಅಸಂಖ್ಯ ಜನರು ಅಡಿಕೆ ಮೇಲೆ ಅವಲಂಬಿತವಾಗಿದ್ದಾರೆ. ಪರಂಪರಾಗತವಾಗಿ ಬಂದಿರುವ ಪಾನ್ ಮಸಾಲ ನಿಷೇಧ ಮಾಡಿದರೆ ಇವರೆಲ್ಲರ ಮೇಲೆ ಬದುಕಿನ ಮೇಲೆ ಪರಿಣಾಮ ಉಂಟಾಗಲಿದೆ ಎಂದು ಬಸವರಾಜಪ್ಪ ತಿಳಿಸಿದರು.
ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವ ನಿರ್ಧಾರ ಕೈಬಿಡದಿದ್ದರೆ ರೈತರು ಹೋರಾಟ ನಡೆಸಬೇಕಾಗುತ್ತದೆ ಎಂದು ಬಸವರಾಜಪ್ಪ ಎಚ್ಚರಿಕೆ ನೀಡಿದರು.
ಜಿಲ್ಲಾ ಕಾರ್ಯಾಧ್ಯಕ್ಷ ಪಿ.ಡಿ.ಮಂಜಪ್ಪ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಗದೀಶ್, ಜಿಲ್ಲಾಧ್ಯಕ್ಷ ಶಿವಮೂರ್ತಿ, ತಾಲೂಕು ಪ್ರಧಾನ ಕಾರ್ಯದರ್ಶಿ ಜ್ಞಾನೇಶ್, ರಾಜ್ಯ ಉಪಾಧ್ಯಕ್ಷ ಹಿಟ್ಟೂರು ರಾಜು ಸುದ್ದಿಗೋಷ್ಠಿಯಲ್ಲಿ ಇದ್ದರು.