ಶಿವಮೊಗ್ಗ ಲೈವ್.ಕಾಂ | SHIMOGA NEWS | 15 ಆಗಸ್ಟ್ 2020
ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಕೆಲವು ಕಾಯ್ದೆಗಳಿಗೆ ತಿದ್ದುಪಡಿ ತಂದು ರೈತ ವಿರೋಧಿಯಾಗಿ ನಡೆದುಕೊಂಡಿವೆ. ಕೂಡಲೆ ಈ ತಿದ್ದುಪಡಿಗಳನ್ನು ಹಿಂಪಡೆಯಬೇಕು ಎಂದು ಒತ್ತಾಯಿಸಿ, ರಾಜ್ಯ ರೈತರ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶಿವಮೊಗ್ಗದಲ್ಲಿ ಇವತ್ತು ಕರಾಳ ದಿನಾಚರಣೆ ಮಾಡಲಾಯಿತು.
ಶಿವಪ್ಪನಾಯಕ ಪ್ರತಿಮೆ ಮುಂದೆ ಕಪ್ಪುಪಟ್ಟಿ ಧರಿಸಿ ಪ್ರತಿಭಟನೆ ನಡಸಿದ ರೈತರು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ವಿರುದ್ಧ ಘೋಷಣೆ ಕೂಗಿದರು.
ಯಾವೆಲ್ಲ ಕಾಯ್ದೆಗಳ ತಿದ್ದುಪಡಿಗೆ ವಿರೋಧ?
ಎಪಿಎಂಸಿ ಕಾಯ್ದೆ ತಿದ್ದುಪಡಿ, ಕೇಂದ್ರ ಸರ್ಕಾರದ ಅಗತ್ಯ ವಸ್ತುಗಳ ನಿಯಂತ್ರಣ ಕಾಯ್ದೆ ತಿದ್ದುಪಡಿ, ವಿದ್ಯುತ್ ಶಕ್ತಿ ಖಾಸಗೀಕರಣ, ಬಿತ್ತನೆ ಬೀಜಗಳ ಮಸೂದೆ 2019 ಕಾಯ್ದೆಗಳಿಗೆ ರೈತರು ವಿರೋಧ ವ್ಯಕ್ತಪಡಿಸಿದರು.
ಪ್ರತಿಭಟನಾ ಸ್ಥಳಕ್ಕೆ ಮಿನಿಸ್ಟರ್ ಭೇಟಿ
ರೈತರ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ, ರೈತರ ಮನವಿ ಸ್ವೀಕರಿಸಿದರು. ರೈತರ ಬೇಡಿಕೆಗಳ ಕುರಿತು ಪರಿಶೀಲನೆ ನಡೆಸುವ ಭರವಸೆ ನೀಡಿದರು.
ಹಿರಿಯ ರೈತ ಹೋರಾಟಗಾರ ಕೆ.ಟಿ.ಗಂಗಾಧರ್, ಪ್ರಮುಖರಾದ ಜಯಪ್ಪಗೌಡ, ಹಿರಿಯಣ್ಣಯ್ಯ, ಕೊಟ್ರೇಶ್, ಯಶವಂತರಾವ್ ಘೋರ್ಪಡೆ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಕರಾಳ ದಿನಾಚರಣೆಯ ವಿಡಿಯೋ ರಿಪೋರ್ಟ್ ಇಲ್ಲಿದೆ
https://www.facebook.com/liveshivamogga/videos/301363877635815/?t=9
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]