ಶಿವಮೊಗ್ಗ ಲೈವ್.ಕಾಂ | SHIMOGA | 23 ಜನವರಿ 2020
ರಾಜ್ಯ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನಿಂದ ರಾಜ್ಯಾದ್ಯಂತ ರೈತರ ಟ್ರಾಕ್ಟರ್, ಟಿಲ್ಲರ್’ಗಳನ್ನು ಜಪ್ತಿ ಮಾಡುತ್ತಿರುವ ಕ್ರಮ ಖಂಡಿಸಿ, ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶಿವಮೊಗ್ಗದ PLD ಬ್ಯಾಂಕ್ ಮುಂದೆ ಪ್ರತಿಭಟನೆ ನಡೆಸಲಾಯಿತು.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಕೃಷಿ ಬೆಲೆ ಆಯೋಗ 19 ಬೆಳೆಗಳ ಉತ್ಪಾದನಾ ವೆಚ್ಚ ಪ್ರಕಟಿಸಿದೆ. ಈ ಪೈಕಿ 18 ಬೆಳೆ ನಷ್ಟದಲ್ಲಿ ಮಾರಾಟ ಮಾಡುತ್ತಿದ್ದಾರೆಂದು ಹಿಂದಿನ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿತ್ತು. ಆದರೆ ಸರ್ಕಾರ ಕ್ರಮ ಕೈಗೊಂಡಿರಲಿಲ್ಲ. ಈ ಪರಿಸ್ಥಿತಿಯಲ್ಲಿ ಸಾಲ ವಸೂಲಿ ಮಾಡಲು ಸರ್ಕಾರಕ್ಕೆ ನೈತಿಕತೆ ಇಲ್ಲ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ದರಾಮಯ್ಯ ಅವರ ಸರ್ಕಾರ ಇದ್ದಾಗ ಸಹಕಾರಿ ಬ್ಯಾಂಕ್’ಗಳಲ್ಲಿ ರೈತರು ಪಡೆದ ಸಾಲದ 50 ಸಾವಿರ ರೂ ವರೆಗೆ ಸಾಲ ಮನ್ನ ಮಾಡಿದ್ದರು. ದೀರ್ಘಾವಧಿ ಸಾಲ ಪಾವತಿಸಿದರೆ ಬಡ್ಡಿ ಮನ್ನ ಮಾಡುವುದಾಗಿ ತಿಳಿಸಿದ್ದರು. ನಂತರ ಕುಮಾರಸ್ವಾಮಿ ಸರ್ಕಾರ 1 ಲಕ್ಷದ ವರೆಗಿನ ರೈತರ ಸಾಲ ಮನ್ನ ಮಾಡಿತ್ತು. ಆಗಲೂ ಸಹ ರೈತರಿಗೆ ಉಳಿದ ಸಾಲ ಕಟ್ಟಲು ಸಾಧ್ಯವಾಗಿರಲಿಲ್ಲ. ಈಗ ಬಲವಂತವಾಗಿ ಟ್ರ್ಯಾಕ್ಟರ್ ಮತ್ತು ಬೆಳೆ ಸಾಲ ಪಾವತಿಸಲು ನೊಟೀಸ್ ನೀಡಿ, ಜಪ್ತಿಗೆ ಮುಂದಾಗಿರುವುದು ದುರ್ದೈವ ಸಂಗತಿ ಎಂದು ಆರೋಪಿಸಿದರು.
ಬ್ಯಾಂಕುಗಳು ಕೂಡಲೇ ರೈತರಿಗೆ ನೊಟೀಸ್ ನೀಡುವುದು, ಜಪ್ತಿ ಮಾಡುವುದನ್ನು ನಿಲ್ಲಿಸಬೇಕು ಎಂದು ಪ್ರತಿಭಟನಾನಿರತ ರೈತರು ಒತ್ತಾಯಿಸಿದರು.
ರೈತ ಸಂಘ ಮತ್ತು ಹಸಿರು ಸೇನೆಯ ಕಾರ್ಯಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಜಿಲ್ಲಾಧ್ಯಕ್ಷ ಶಿವಮುರ್ತಿ, ರಾಜ್ಯ ಕೋಶಾಧ್ಯಕ್ಷ ಡಾ. ಮಧುಚಿಕ್ಕಸ್ವಾಮಿ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿದ್ದರು.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | [email protected]