ಶಿವಮೊಗ್ಗದಲ್ಲಿ ಹಸಿರು ಟವೆಲ್ ತಿರುಗಿಸಿ ಸರ್ಕಾರದ ವಿರುದ್ಧ ಘೋಷಣೆ ಮೊಳಗಿಸಿದ ರೈತರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

SHIMOGA | ವಿದ್ಯುತ್ ಶಕ್ತಿ ಕ್ಷೇತ್ರ ಖಾಸಗೀಕರಣಕ್ಕೆ (PRIVATIZE) ಯತ್ನ ಸೇರಿದಂತೆ ರಾಜ್ಯ ಮತ್ತು ಕೇಂದ್ರ ಸರ್ಕಾರದ ನೀತಿಗಳನ್ನು ಖಂಡಿಸಿ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ವತಿಯಿಂದ ಶಿವಮೊಗ್ಗದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

Shimoga Nanjappa Hospital

ರೈತ ಮುಖಂಡ ಕೆ.ಟಿ.ಗಂಗಾಧರ್ ಅವರ ನೇತೃತ್ವದಲ್ಲಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಲಾಯಿತು. ಬಳಿಕ ಜಿಲ್ಲಾಧಿಕಾರಿ ಕಚೇರಿ ಮುಂಭಾಗ ರೈತರು ಪ್ರತಿಭಟಿಸಿದರು.

ರೈತರ ಬೇಡಿಕೆಗಳೇನು?

ಕೇಂದ್ರ ಸರ್ಕಾರ ಮೂರು ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆದಿದೆ. ಆದರೆ ರಾಜ್ಯ ಸರ್ಕಾರ ಈವರೆಗೂ ಅವುಗಳನ್ನು ಹಿಂದಕ್ಕೆ ಪಡೆದಿಲ್ಲ. ಇವುಗಳನ್ನು ಕೂಡಲೆ ಹಿಂಪಡೆಯಬೇಕು. ಇನ್ನು, ಕೇಂದ್ರ ಸರ್ಕಾರ ವಿದ್ಯುತ್ ಶಕ್ತಿ ಕಂಪನಿಗಳನ್ನು ಖಾಸಗೀಕರಣ (PRIVATIZE) ಮಾಡಲು ಹೊರಟಿದೆ. ಇದರಿಂದ ರೈತರು, ಬಡವರಿಗೆ ಸಂಕಷ್ಟವಾಗಲಿದೆ. ಈ ಪ್ರಯತ್ನ ಕೈಬಿಟ್ಟು, ರೈತರ ಐಪಿ ಸೆಟ್ ಗಳಿಗೆ ಮೀಟರ್ ಅಳವಡಿಸುವುದಿಲ್ಲ ಎಂದು ಸ್ಪಷ್ಟನೆ ನೀಡಬೇಕು. ರೈತರ ಬೆಳೆಗಳಿಗೆ ವೈಜ್ಞಾನಿಕ ಬೆಲೆ ನಿಗದಿ ಮಾಡುವವರೆಗೂ ರೈತರ ಮೇಲೆ ವಿದ್ಯುತ್ ತೆರಿಗೆ ಹೇರಬಾರದು ಎಂದು ರೈತರು ಆಗ್ರಹಿಸಿದರು.

farmers protest

ಬೆಳ ವಿಮೆಯ ಕಂತುಗಳನ್ನು ಸರ್ಕಾರವೆ ಭರಿಸಬೇಕು, ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದು ಪರಿಹಾರ ನೀಡಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿದರು. ಈ ಸಂಬಂಧ ಜಿಲ್ಲಾಧಿಕಾರಿ ಅವರ ಮೂಲಕ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಲಾಯಿತು.

ಕ್ಲಿಕ್ ಮಾಡಿ ಇದನ್ನೂ ಓದಿ ‘ಶಿವಮೊಗ್ಗ ನಗರಕ್ಕೆ ರಾಷ್ಟ್ರಮಟ್ಟದ ಪ್ರಶಸ್ತಿ, ರಾಷ್ಟ್ರಪತಿಯಿಂದ ಪ್ರದಾನ’

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment