ರೈತರಿಂದ ವಿಧಾನಸೌಧ ಮುತ್ತಿಗೆಗೆ ನಿರ್ಧಾರ, ಅಧಿವೇಶನ ಮುಗಿಯೋವರೆಗೆ ಅಹೋರಾತ್ರಿ ಸತ್ಯಾಗ್ರಹ

ಶಿವಮೊಗ್ಗ ಲೈವ್.ಕಾಂ | SHIMOGA NEWS | 11 ಸೆಪ್ಟಂಬರ್ 2020

ರೈತ ವಿರೋಧಿ ಕಾಯ್ದೆಗಳನ್ನು ವಾಪಸ್ ಪಡೆಯದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುತ್ತದೆ ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಎಚ್ಚರಿಕೆ ನೀಡಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ರೈತ ಸಂಘದ ರಾಜ್ಯ ಗೌರವಾಧ್ಯಕ್ಷ ಹೆಚ್.ಆರ್.ಬಸವರಾಜಪ್ಪ, ಸೆಪ್ಟೆಂಬರ್ 21ರಂದು ವಿಧಾನಸೌಧ ಮುತ್ತಿಗೆ ಹಾಕಲಾಗುತ್ತದೆ. ಬೆಂಗಳೂರಿನ ಸಿಟಿ ರೈಲ್ವೆ ನಿಲ್ದಾಣದಿಂದ ಮೆರವಣಿಗೆ ಆರಂಭವಾಗಲಿದೆ. ಆ ದಿನ ಮೌರ್ಯ ಸರ್ಕಲ್‍ನಲ್ಲಿರುವ ಮಹಾತ್ಮ ಗಾಂಧಿ ಪ್ರತಿಮೆ ಎದುರು ಸಭೆ ನಡೆಯಲಿದೆ ಎಂದರು.

ಒಂದು ಲಕ್ಷ ರೈತರು

Kalleshwara-Enterprises.webp

ಭೂ ಸುಧಾರಣಾ ಕಾಯ್ದೆ, ಎಪಿಎಂಸಿ ಕಾಯ್ದೆ,  ವಿದ್ಯುತ್ ಕಾಯ್ದೆ, ಅಗತ್ಯ ವಸ್ತುಗಳ ಕಾಯ್ದೆಗಳಿಂದ ರೈತರು, ಸಾಮಾನ್ಯ ಜರಿಗೆ ತೊಂದರೆ ಆಗುತ್ತಿದೆ. ಆದ್ದರಿಂದ ಕೂಡ ಕಾಯ್ದೆಗಳು, ತಿದ್ದುಪಡಿಗಳನ್ನು ಹಿಂಪಡೆಯಬೇಕು. ಸೆ.21ರಂದು ನಡೆಯುವ ಧರಣಿ ಸತ್ಯಾಗ್ರಹದಲ್ಲಿ ಒಂದು ಲಕ್ಷ ಜನ ಸೇರುವ ಸಾದ್ಯತೆ ಇದೆ ಎಂದು ಬಸವರಾಜಪ್ಪ ತಿಳಿಸಿದರು.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ. ವಾಟ್ಸಪ್‌ ನಂಬರ್: 7411700200
Kalleshwara-Enterprises.webp

Leave a Comment